ಗದಗ: ಚಾಲಕನ ನಿಯಂತ್ರಣ ತಪ್ಪಿ ಟ್ರಾಕ್ಟರ್ ಕಾಲುವೆಗೆ ಬಿದ್ದ ಪರಿಣಾಮ ರೈತರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ನರಗುಂದ ತಾಲೂಕಿನ ಬೆನಕನಕೊಪ್ಪ ಗ್ರಾಮದ ಬಳಿ ನಡೆದಿದೆ.

ಚಿಕ್ಕನರಗುಂದ ಗ್ರಾಮದ ಶಿವಾನಂದ(22) ಯುವ ರೈತ ಜಮೀನು ಕೆಲಸಕ್ಕೆ ಹೋಗಿದ್ದರು. ಕೆಲಸ ಮುಗಿಸಿ ಇನ್ನೇನು ಮನೆಗೆ ಹೋಗಬೇಕು ಎಂದು ಕಡಲು ಮೇಲ್ಭಾಗದ ರಸ್ತೆಯಲ್ಲಿ ಟ್ರಾಕ್ಟರ್ ಚಲಾಯಿಸಿಕೊಂಡು ಬರುತ್ತಿದ್ದಂತೆ ಏಕಾಏಕಿ ನಿಯಂತ್ರಣ ಕಳೆದುಕೊಂಡ ಟ್ರಾಕ್ಟರ್ ಕಾಲುವೆಗೆ ಬಿದ್ದು ಪಲ್ಟಿಯಾಗಿದೆ. ಪರಿಣಾಮ ಶಿವಾನಂದ ಟ್ರಾಕ್ಟರ್ ಅಡಿ ಸಿಲುಕಿ ಮೃತ ಪಟ್ಟಿದ್ದಾರೆ. ಇದನ್ನೂ ಓದಿ: ಮೈಸೂರಿನಲ್ಲಿ ನಕಲಿ ನಂದಿನಿ ತುಪ್ಪ ತಯಾರಿಕೆ ಜಾಲ ಪತ್ತೆ- ಗೇಡೌನ್ ಮೇಲೆ ಅಧಿಕಾರಿಗಳ ದಾಳಿ

ಸ್ಥಳಕ್ಕೆ ನರಗುಂದ ಪೊಲೀಸರು ಭೇಟಿನೀಡಿ ಪರಿಶೀಲನೆ ನಡೆಸಿದರು. ಬಳಿಕ ಜೆಸಿಬಿ ಮೂಲಕ ಟ್ರಾಕ್ಟರ್ ಮೇಲಕ್ಕೆತ್ತಲಾಯಿತು. ಶಿವಾನಂದರನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ಕುರಿತು ನರಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮೈಸೂರಿನಲ್ಲಿ ಒಂದೇ ದಿನ 2 ಸರಕಳ್ಳತನ – ಆರೋಪಿಗಳು ಪರಾರಿ

Leave a Reply