ಬಸನವಗುಡಿಯಲ್ಲಿ ಮರದ ಕೊಂಬೆ ಬಿದ್ದು ಸವಾರ ಗಂಭೀರ

ಬೆಂಗಳೂರು: ದ್ವಿಚಕ್ರ ವಾಹನದಲ್ಲಿ ಚಲಿಸುತ್ತಿದ್ದಾಗಲೇ ಮರದ (Tree) ಕೊಂಬೆ ಬಿದ್ದು ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಬಸವನಗುಡಿಯ (Basavanagudi) ಬ್ರಹ್ಮ ಚೈತನ್ಯ ಮಂದಿರದ ಬಳಿ ನಡೆದಿದೆ.

29 ವರ್ಷದ ಅಕ್ಷಯ್‌ ಗಂಭೀರವಾಗಿ ಗಾಯಗೊಂಡ ಸವಾರ. ಕೊಂಬೆ ಬೀಳುತ್ತಿದ್ದಂತೆ ನಿಯಂತ್ರಣ ತಪ್ಪಿ ಎದುರುಗಡೆ ನಿಲ್ಲಿಸಿದ್ದ ಕಾರಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದಿದೆ. ಇದನ್ನೂ ಓದಿ: Uttara Kannada | ಪೋಷಕರ ನಿರ್ಲಕ್ಷ್ಯ – 2 ವರ್ಷದ ಮಗು ನಾಲೆಗೆ ಬಿದ್ದು ಸಾವು

ಡಿಕ್ಕಿ ಹೊಡೆದ ರಭಸಕ್ಕೆ ಪ್ರಶಾಂತ್‌ ನೆಲಕ್ಕೆ ಬಿದ್ದಿದ್ದಾರೆ. ಕೂಡಲೇ ಸ್ಥಳೀಯರು ಪ್ರಶಾಂತ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಶ್ರೀನಿವಾಸನಗರದ ನಿವಾಸಿಯಾಗಿರುವ ಅಕ್ಷಯ್‌ ರಾಜಾಜಿನಗರದಲ್ಲಿ ಕಂಪನಿಯೊಂದದರಲ್ಲಿ ಹೆಚ್ ಆರ್ ಆಗಿ ಕೆಲಸ ಮಾಡುತ್ತಿದ್ದರು. ಇದನ್ನೂ ಓದಿ: 422 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ಫ್ಲೈಓವರ್‌ನ ನಟ್‌, ಬೋಲ್ಟ್‌ ತೆಗೆದ ಮಕ್ಕಳು

ತಲೆಯ ಮಧ್ಯ ಭಾಗಕ್ಕೆ ತೀವ್ರ ಹಾನಿಯಾಗಿದೆ. ಮೂಗು, ಬಾಯಿ, ಕಿವಿಯಲ್ಲಿ ರಕ್ತಸ್ರಾವವಾಗಿದೆ. ಅಕ್ಷಯ್‌ ತಂದೆಗೆ ಡಯಾಲಿಸಿಸ್ ನಡೆಯುತ್ತಿದ್ದು ಕುಟುಂಬಕ್ಕೆ ಅಕ್ಷಯ್‌ ಆಧಾರವಾಗಿದ್ದರು.