ಬೆಟ್ಟದಿಂದ ಜಾರಿ ಬಂಡೆ ಮಧ್ಯೆ ಬಿದ್ದ- 2 ದಿನ ಅನ್ನ, ನೀರು ಇಲ್ಲ

ತಿರುವನಂತಪುರಂ: ಬೃಹತ್ ಬೆಟ್ಟ ಹತ್ತುವ ಸಾಹಸ ಯಶಸ್ವಿಯಾದ ಬಳಿಕ ಕಾಲುಜಾರಿ ಬಿದ್ದ ಯುವಕನೊಬ್ಬ ಬೆಟ್ಟದ ನಡುವಿನ ಸಣ್ಣ ಜಾಗದಲ್ಲಿ ಸಿಕ್ಕಿಕೊಂಡಿರುವ ಘಟನೆ ಕೇರಳದಲ್ಲಿ ನಡೆದಿದೆ.

ಸಡು ಬಿಸಿಲಿನಲ್ಲೇ 2 ದಿನಗಳಿಂದ ಅನ್ನ ,ನೀರು ಇಲ್ಲದೇ ಯುವಕ ಸಂಕಷ್ಟದಲ್ಲಿದ್ದು, ಆತನ ರಕ್ಷಣೆಗಾಗಿ ಕೇರಳದ ಸರ್ಕಾರ ಸೇನೆಯ ನೆರವು ಕೋರಿದೆ. ಇದನ್ನೂ ಓದಿ: UPಯಲ್ಲಿ ಲವ್ ಜಿಹಾದ್‍ಗೆ 10 ವರ್ಷ ಜೈಲು, 1 ಲಕ್ಷ ದಂಡ

ನಡೆದಿದ್ದೇನು?: ಬಾಬು ತನ್ನಿಬ್ಬರು ಸ್ನೇಹಿತರ ಜೊತೆಗೂಡಿ ಸೋಮವಾರ ಪಾಲಕ್ಕಾಡ್ ಸಮೀಪದ ಕುರುಂಬಚ್ಚಿ ಬೆಟ್ಟ ಏರಲು ತೆರಳಿದ್ದ. ಉಳಿದಿಬ್ಬರು ಮಾರ್ಗಮಧ್ಯದಲ್ಲೇ ಇದು ತಮ್ಮ ಕೈಲಾಗದು ಎಂದು ಸುಮ್ಮನಾಗಿದ್ದರು. ಆದರೆ ಬಾಬು ಬೆಟ್ಟದ ತುದಿ ಏರಿದ್ದ. ಅಲ್ಲಿಂದ ಇನ್ನೇನು ಕೆಳಗೆ ಇಳಿಯಬೇಕು ಎನ್ನುವಷ್ಟರಲ್ಲಿ ಕಡಿದಾದ ಬೆಟ್ಟದ ತುದಿಯಿಂದ ಕಾಲು ಜಾರಿ ಕೆಳಕ್ಕೆ ಉರುಳಿದ್ದ. ಇದನ್ನೂ ಓದಿ: ಕಾಂಗ್ರೆಸ್‍ನ್ನು ನಿಂದಿಸಿ, ನಿಮ್ಮ ಕೆಲಸ ಏನೆಂದು ಮರೆಯಬೇಡಿ: ಮೋದಿಗೆ ರಾಹುಲ್ ಗಾಂಧಿ ತಿರುಗೇಟು

ಅದೃಷ್ಟವಶಾತ್ ಆತಪೂರ್ಣ ಕೆಳಕ್ಕೆ ಉರುಳುವ ಬದಲು ನಡುವೆ ಸಣ್ಣದಾದ ಜಾಗವೊಂದಲ್ಲಿ ಸಿಕ್ಕಿಹಾಕಿಕೊಂಡಿದ್ದ. ಆತನ ಮೇಲೆ ಹತ್ತಿ ಬರುವಂತೆಯೂ ಇರಲಿಲ್ಲ. ಹೀಗಾಗಿ ಕೆಳಗೆ ಬಂದು ಗ್ರಾಮಸ್ಥರಿಗೆ ಮಾಹಿತಿ ನೀಡಿದ್ದರು. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಯತ್ನ ಮಾಡಿದರು ಯುವಕನ ಸಮೀಪ ತೆರಳಲು ಸಾಧ್ಯವಾಗಲಿಲ್ಲ. ಹೀಗಾಗಿ ಸೋಮವಾರ ಕಾರ್ಯಾಚರಣೆ ಸ್ಥಗಿತ ಗೊಳಿಸಲಾಗಿತ್ತು.


ನಿನ್ನೆ ಬೆಳಗ್ಗೆ ಕರಾವಳಿ ಕಾವಲು ಪಡೆಯ ಕಾಪ್ಟರ್‌ಗಳು ಯುವಕನ ರಕ್ಷಣೆಗೆ ಧಾವಿಸಿತ್ತಾದರೂ, ಯುವಕ ಸಿಕ್ಕಿಬಿದ್ದ ಸ್ಥಳಕ್ಕೆ ಆತ್ಯಂತ ಕಡಿದಾಗಿದ್ದ ಕಾರಣ ಅಲ್ಲಿಗೆ ತೆರಳಲಾಗದೇ ಮರಳಿವೆ. ಹೀಗಾಗಿ ಸೋಮವಾರ ಬೆಳಗ್ಗಿಯಿಂದಲೂ ಯುವಕ ತಾನು ಕೂರಬಹುದಾದಷ್ಟೇ ಸಣ್ಣ ಜಾಗದಲ್ಲಿ ಸುಡು ಬಿಸಿಲು, ರಾತ್ರಿ ಚಳಿಯ ನಡುವೆ ಅನ್ನ, ನೀರು ಇಲ್ಲದೇ ಕುಳಿತಿದ್ದನು. ಈ ಹಿನ್ನೆಲೆಯಲ್ಲಿ ಕೇರಳ ಸರ್ಕಾರ ಯುವಕನ ರಕ್ಷಣೆಗಾಗಿ ಸೇಬೆಯ ನೆರವು ಕೋರಿದೆ. ಸೇನೆ ಮತ್ತು ವಾಯುಪಡೆಯ ತಂಡಗಳು ಇದೀಗ ಪಾಲಕ್ಕಾಡ್‍ನತ್ತ ಧಾವಿಸುತ್ತಿವೆ.

Comments

Leave a Reply

Your email address will not be published. Required fields are marked *