ನಿಲ್ಲಿಸಿದ್ದ ಬಸ್‍ಗಳಿಗೆ ಟ್ರಕ್ ಡಿಕ್ಕಿ- 8 ಮಂದಿ ಸಾವು, 50 ಮಂದಿಗೆ ಗಾಯ

ಭೋಪಾಲ್: ನಿಲ್ಲಿಸಿದ್ದ 2 ಬಸ್‍ಗಳಿಗೆ (Bus) ಹಿಂಬದಿಯಿಂದ ಟ್ರಕ್ (Truck) ಡಿಕ್ಕಿ ಹೊಡೆದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡ ಘಟನೆ ಮಧ್ಯಪ್ರದೇಶದ (Madhya Pradesh) ಸಿಧಿಯಲ್ಲಿ ನಡೆದಿದೆ.

ಮೊಹಾನಿಯಾ ಸುರಂಗದ ಸಮೀಪ ಬರ್ಖಾಡ ಗ್ರಾಮದ ಬಳಿ ಈ ಘಟನೆ ನಡೆದಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರ ರ್ಯಾಲಿಯಿಂದ ಹಿಂದಿರುಗುತ್ತಿದ್ದ ಜನರು ಬಸ್‍ನಲ್ಲಿದ್ದರು.

ಆ ಎರಡು ಬಸ್ಸುಗಳು ನಿಂತಿದ್ದವು. ಹಿಂದಿನಿಂದ ಬರುತ್ತಿದ್ದ ಟ್ರಕ್‍ನ ಟೈರ್ ಸ್ಫೋಟಗೊಂಡಿದೆ. ಈ ವೇಳೆ ಟ್ರಕ್ ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ. ಈ ವೇಳೆ ಸುಮಾರು 50 ಮಂದಿ ಗಾಯಗೊಂಡಿದ್ದು, 8 ಮಂದಿ ಸಾವನ್ನಪ್ಪಿದ್ದಾರೆ.

ಅಪಘಾತದಲ್ಲಿ ಗಾಯಗೊಂಡವನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ಸಾಗಿಸಲಾಯಿತು. ಟ್ರಕ್‍ನಲ್ಲಿ ಟೈರ್ ಸ್ಫೋಟಗೊಂಡಿದ್ದರಿಂದ ಈ ದುರ್ಘಟನೆ ಸಂಭವಿಸಿದೆ. ಘಟನೆ ಕುರಿತು ಪೊಲೀಸರ ತನಿಖೆ ನಡೆಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ವೃದ್ಧರಿಗೆ ಸಹಕರಿಸುವ ನೆಪದಲ್ಲಿ ವಂಚಿಸುತ್ತಿದ್ದ ಆರೋಪಿ ಬಂಧನ

ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಮೀನು ಮೃತಪಟ್ಟಿದ್ದಕ್ಕೆ ಮನನೊಂದು 13ರ ಬಾಲಕ ಆತ್ಮಹತ್ಯೆ

Comments

Leave a Reply

Your email address will not be published. Required fields are marked *