ಬೆಳಗಾವಿ: ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾರರಿಗೆ ಅಮಿಷಗಳ ಸುರಿಮಳೆಯಾಗುತ್ತಿದೆ. ಮತದಾರರಿಗೆ ಹಂಚಲು ಲಾರಿಯಲ್ಲಿ ಸಾಗಿಸುತ್ತಿದ್ದ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ಭಾವಚಿತ್ರ ಇರುವ ಕುಕ್ಕರ್ ಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಮತದಾರರಿಗೆ ನೀಡಲು ಸಾಗಾಟ ಮಾಡುತ್ತಿದ್ದ ಕುಕ್ಕರ್ ಗಳ ಬಗ್ಗೆ ಬಿಜೆಪಿ ಮುಖಂಡ ಅನಿಲ್ ಬೆನಕೆ ಚುನಾವಣಾ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ಪೊಲೀಸರು ಲಾರಿ ಸಮೇತ ಕುಕ್ಕರ್ ಗಳನ್ನು ವಶಕ್ಕೆ ಪಡೆದಿದ್ದಾರೆ.
ಬೆಳಗಾವಿ ಜಿಲ್ಲಾಧಿಕಾರಿ ಮನೆ ಮುಂಭಾಗದಲ್ಲಿ ನಡೆದ ಘಟನೆ ವೇಳೆ ಬಿಜೆಪಿ ಮುಖಂಡ ಅನಿಲ್ ಬೆನಕೆ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರ ಚನ್ನಾರಾಜ್ ನಡುವೆ ವಾಗ್ವಾದ ನಡೆದಿದೆ ಎನ್ನಲಾಗಿದ್ದು, ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಲಾರಿಯನ್ನು ತಡೆದು ವಶಕ್ಕೆ ಪಡೆದಿದ್ದಾರೆ.
https://twitter.com/ShobhaBJP/status/980035106738880512

Leave a Reply