– ಟ್ಯೂಶನ್‍ಗೆ ಹೋಗಿದ್ದ ಬಾಲಕಿ ಮೇಲೆ ಅತ್ಯಾಚಾರ
– ಮರಣೋತ್ತರ ಪರೀಕ್ಷೆಯಲ್ಲಿ ದೃಢ
ಮಂಡ್ಯ: ಟ್ಯೂಶನ್‍ಗೆ ಹೋಗಿದ್ದ ಬಾಲಕಿ ಕೊಲೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಬಾಲಕಿಯ ಮರಣೋತ್ತರ ಪರೀಕ್ಷೆಯಲ್ಲಿ ಬಾಲಕಿ ಮೇಲೆ ಅತ್ಯಾಚಾರ ಆಗಿರುವುದು ದೃಢಪಟ್ಟಿದ್ದು, ಟ್ಯೂಶನ್ ಮೇಲ್ವಿಚಾರಕ ಕಾಂತರಾಜು ಈ ಹೇಯ ಕೃತ್ಯವೆಸಗಿದ್ದಾನೆ ಎಂಬ ಸತ್ಯ ಬಹಿರಂಗಗೊಂಡಿದೆ.

ಹೌದು, ಮಂಡ್ಯ (Mandya) ಜಿಲ್ಲೆಯ ಮಳವಳ್ಳಿ (Malvalli) ಪಟ್ಟಣದಲ್ಲಿ ಮಂಗಳವಾರ ಟ್ಯೂಶನ್‍ಗೆ ಹೋಗಿದ್ದ ಬಾಲಕಿ ನೀರಿನ ಸಂಪ್‍ನಲ್ಲಿ ಅನುಮಾನಸ್ಪದವಾಗಿ ಶವವಾಗಿ ಪತ್ತೆಯಾಗಿದ್ದಳು. ಈ ಸಂಬಂಧ ಮೊದಲು ಸೆಕ್ಷನ್ 302 ಪ್ರಕರಣದಡಿ ಮಳವಳ್ಳಿ ಟೌನ್ ಠಾಣೆ ಪೊಲೀಸರು ದೂರು ದಾಖಲಿಸಿಕೊಂಡಿದ್ದರು. ಆದರೆ ಮರಣೋತ್ತರ ಪರೀಕ್ಷೆ ವೇಳೆ ಬಾಲಕಿ ಮೇಲೆ ಅತ್ಯಾಚಾರ ನಡೆದಿರುವುದು ದೃಢಪಟ್ಟಿದೆ. ಹಾಗಾಗಿ 302 ಸೆಕ್ಷನ್ ಜೊತೆಗೆ ಪೋಸ್ಕೋ (Posco) ಹಾಗೂ 307 ಪ್ರಕರಣಗಳನ್ನು ಸೇರ್ಪಡೆಗೊಳಿಸಲಾಗಿದೆ. ಇದನ್ನೂ ಓದಿ: ಹರೀಶ್ ಪೂಂಜಾ ಕಾರನ್ನು ಅಡ್ಡಗಟ್ಟಿ ತಲವಾರು ಝಳಪಿಸಿ ದುಷ್ಕರ್ಮಿಯಿಂದ ಜೀವ ಬೆದರಿಕೆ

ಮಂಗಳವಾರ ಟ್ಯೂಶನ್ ಎಷ್ಟು ಗಂಟೆಗಿದೆ ಎಂದು ವಿಚಾರಿಸಲು ಬಾಲಕಿ ಮೇಲ್ವಿಚಾರಕನಿಗೆ ಫೋನ್ ಮಾಡಿದ್ದಳು. ಸಂಜೆ 5 ಗಂಟೆಗೆ ಟ್ಯೂಶನ್ ಇದ್ದರೂ ಬೆಳಗ್ಗೆ 11.30ಕ್ಕೆ ಬರುವಂತೆ ಕಾಂತರಾಜು ಹೇಳಿದ್ದನು. ನಂತರ ಟ್ಯೂಷನ್‍ಗೆ ಬಂದ ಬಾಲಕಿ ಮೇಲೆ ಕಾಂತರಾಜು ಅತ್ಯಾಚಾರವೆಸಗಿದ್ದಾನೆ. ಬಳಿಕ ವಿಚಾರ ಬಹಿರಂಗವಾಗುತ್ತದೆ ಎಂದು ಅರೆ ಪ್ರಜ್ಞಾವಸ್ಥೆಯಲ್ಲಿದ್ದ ಬಾಲಕಿಯ ಕತ್ತು ಹಿಸುಕಿ, ಬಳಿಕ ಕಲ್ಲಿನಿಂದ ತಲೆಯ ಭಾಗಕ್ಕೆ ಹೊಡೆದು ಹತ್ಯೆಗೈದಿದ್ದಾನೆ. ಇದನ್ನೂ ಓದಿ: ಮತಾಂತರ ನಿಷೇಧ ಕಾಯ್ದೆ ಜಾರಿ ಬಳಿಕ ರಾಜ್ಯದಲ್ಲಿ ಮೊದಲ FIR – ಆರೋಪಿ ಅರೆಸ್ಟ್
ಕೊಲೆ ನಂತರ ನಿರ್ಮಾಣ ಹಂತದ ಮನೆಯ ಸಂಪ್‍ಗೆ ಮೃತದೇಹ ಹಾಕಿ ಪರಾರಿಯಾಗಿದ್ದನು. ನೀಚ ಕೃತ್ಯ ನಡೆಸಿ ತನಗೇನು ಗೊತ್ತೇ ಇಲ್ಲ ಎಂಬಂತೆ ಬಾಲಕಿಯ ಕುಟುಂಬಸ್ಥರ ಜೊತೆ ಸೇರಿ ಆಕೆಗಾಗಿ ಹುಡುಕಾಟ ನಡೆಸಿದ್ದಾನೆ. ಅಲ್ಲದೇ ಪೊಲೀಸರು ಬಂದಾಗಲೂ ಸ್ಥಳದಲ್ಲೇ ಇದ್ದ ಕಾಂತರಾಜು ತನಗೇನು ಗೊತ್ತಿಲ್ಲ ಎಂಬಂತೆ ನಾಟಕ ಮಾಡಿದ್ದಾನೆ. ನಂತರ ಈ ಪ್ರಕರಣಕ್ಕೆ ಸಂಬಂಧ ಕಾಂತರಾಜು ಅನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸತ್ಯ ಬಾಯ್ಬಿಟ್ಟಿದ್ದಾನೆ. ಟ್ಯೂಷನ್ ಮೇಲೆನ ರೂಮ್‍ನಲ್ಲೇ ವಾಸವಿದ್ದ ಕಾಂತರಾಜು ಹೆಂಡತಿ, ಇಬ್ಬರು ಹೆಣ್ಣು ಮಕ್ಕಳಿಂದ ದೂರವಾಗಿ ಬದುಕುತ್ತಿದ್ದನು.
ಇದೀಗ ಈ ಬಗ್ಗೆ ಪ್ರತಿಕ್ರಿಯಿಸಿರುವ ಪೋಷಕರು, ನನ್ನ ಮಗಳು ಡಾಕ್ಟರ್ ಆಗುವ ಕನಸು ಕಂಡಿದ್ದಳು. ನನ್ನ ಮಗಳಿಗೆ ಆದ ಅನ್ಯಾಯ ಮತ್ಯಾರಿಗೂ ಆಗಬಾರದು. ನನ್ನ ಮಗಳಿಗೆ ಆದ ಅನ್ಯಾಯ ಮತ್ಯಾರಿಗೂ ಆಗಬಾರದು. ಪ್ರಧಾನಿ ನರೇಂದ್ರ ಮೋದಿ ಅವರು ಆರೋಪಿಗೆ ಮರಣ ದಂಡನೆ ವಿಧಿಸಬೇಕೆಂದು ಕಣ್ಣೀರು ಹಾಕಿದ್ದಾರೆ.

Leave a Reply