ಸೋತ ಕಾಂಗ್ರೆಸ್, ಜೆಡಿಎಸ್ ಪ್ರೇತಾತ್ಮಗಳಂತೆ- ಆರ್ ಅಶೋಕ್ ವ್ಯಂಗ್ಯ

ತುಮಕೂರು: ಬಿಜೆಪಿಗೆ ಸ್ಪಷ್ಟ ಬಹುಮತವನ್ನು ರಾಜ್ಯದ ಜನರು ಕೊಟ್ಟಿದ್ದಾರೆ. ಹೀಗಾಗಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಪ್ರೇತಾತ್ಮಗಳಂತೆ ಓಡಾಡುತ್ತಿವೆ ಎಂದು ಸಚಿವ ಆರ್. ಅಶೋಕ್ ವ್ಯಂಗ್ಯವಾಡಿದ್ದಾರೆ.

ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕು ಕುಪ್ಪೂರು ಗದ್ದುಗೆ ಸಂಸ್ಥಾನ ಮಠದಲ್ಲಿ ನಡೆದ ಭಾವೈಕ್ಯ ಧರ್ಮ ಸಮ್ಮೇಳನದಲ್ಲಿ ಭಾಗವಹಿಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಹಾಗೂ ಜೆಡಿಎಸ್, ರಾಜ್ಯದಲ್ಲಿ ತಮ್ಮ ನೆಲೆ ಕಳೆದುಕೊಂಡು ಪ್ರೇತಾತ್ಮದ ತರ ಓಡಾಡುತ್ತಿವೆ ಎಂದು ಲೇವಡಿ ಮಾಡಿದರು.

ಸಚಿವ ಸ್ಥಾನ ಯಾರಿಗೆ ಕೊಡಬೇಕೆಂಬ ಎಂಬ ನಿರ್ಧಾರವನ್ನು ಮುಖ್ಯಮಂತ್ರಿ ನಿರ್ಧರಿಸಲಿದ್ದಾರೆ. ಡಿಸೆಂಬರ್ 20ರ ನಂತರ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ನಿರ್ಧಾರವಾಗಲಿದ್ದು, ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಲು ಸಹಾಯ ಮಾಡಿದವರಿಗೆ ಕೊಟ್ಟ ಮಾತಿನಂತೆ ನಡೆದುಕೊಳ್ಳಲಾಗುವುದು ಎಂದು ಸಚಿವ ಆರ್. ಅಶೋಕ್ ಆಶ್ವಾಸನೆ ನೀಡಿದರು.

Comments

Leave a Reply

Your email address will not be published. Required fields are marked *