ಟ್ವಿಟ್ಟರ್ ಲೋಗೋ ಅಧಿಕೃತ ಬದಲಾವಣೆ – ಹಕ್ಕಿ ಹೋಯ್ತು, ‘X’ ಬಂತು

ವಾಷಿಂಗ್ಟನ್: ಜನಪ್ರಿಯ ಮೈಕ್ರೋಬ್ಲಾಗಿಂಗ್ ಸೈಟ್ ಟ್ವಿಟ್ಟರ್‌ನ (Twitter) ಲೋಗೋ (Logo) ಇದೀಗ ಅಧಿಕೃತವಾಗಿ ಬದಲಾವಣೆಯಾಗಿದೆ. ವರ್ಷಗಳ ಐಕಾನಿಕ್ ನೀಲಿ ಬಣ್ಣದ ಹಕ್ಕಿ (Blue Bird) ಇದೀಗ ಮಾಯವಾಗಿದ್ದು, ಎಕ್ಸ್ (X) ಲೋಗೋ ಇದೀಗ ಕಾಣಿಸಿಕೊಳ್ಳುತ್ತಿದೆ.

ಟ್ವಿಟ್ಟರ್ ಅನ್ನು ಖರೀದಿಸಿರುವ ಎಲೋನ್ ಮಸ್ಕ್ (Elon Musk) ಅಪ್ಲಿಕೇಶನ್ ಅನ್ನು ರೀಬ್ರ್ಯಾಂಡ್ ಮಾಡುವ ಉದ್ದೇಶದಿಂದ ಅದರ ಲೋಗೋ ಹಾಗೂ ಹೆಸರನ್ನು ಬದಲಿಸಲು ಮುಂದಾಗಿದ್ದಾರೆ. ಎಲೋನ್ ಮಸ್ಕ್ ಸೋಮವಾರ ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಟ್ವಿಟ್ಟರ್‌ನ ಪ್ರಧಾನ ಕಚೇರಿಯಲ್ಲಿ ಎಕ್ಸ್ ಬ್ರ್ಯಾಂಡಿಂಗ್‌ನ ಚಿತ್ರವನ್ನು ಟ್ವೀಟ್ ಮಾಡಿದ್ದಾರೆ.

ಎಲೋನ್ ಮಸ್ಕ್ ಭಾನುವಾರ ಟ್ವಿಟ್ಟರ್‌ನ ಲೋಗೋ ಬದಲಾವಣೆ ಬಗ್ಗೆ ಸುಳಿವು ನೀಡಿದ್ದರು. ನಾವು ಶೀಘ್ರವೇ ಟ್ವಿಟ್ಟರ್ ಬ್ರ್ಯಾಂಡ್‌ಗೆ ಹಾಗೂ ಎಲ್ಲಾ ಹಕ್ಕಿಗಳಿಗೂ ವಿದಾಯ ಹೇಳಬೇಕಿದೆ ಎಂದು ತಿಳಿಸಿ ದೊಡ್ಡ ಬಾಂಬ್ ಇಟ್ಟಿದ್ದರು. ಇದನ್ನೂ ಓದಿ: ಟ್ವಿಟ್ಟರ್‌ನ ನೀಲಿ ಹಕ್ಕಿಗೆ ಗುಡ್‌ಬೈ? – ಮಸ್ಕ್ ಹೊಸ ಬಾಂಬ್

ಮಸ್ಕ್ ಟ್ವಿಟ್ಟರ್‌ನ ನೀಲಿ ಹಕ್ಕಿಗೆ ಗುಡ್‌ಬೈ ಹೇಳುವ ಬಗೆಗಿನ ಟ್ವೀಟ್‌ನಿಂದಾಗಿ ಅವರು ಆ್ಯಪ್ ಅನ್ನು ರೀಬ್ರ್ಯಾಂಡ್ ಮಾಡಲು ಹೊರಟಿರುವುದು ದೃಢಪಟ್ಟಿತು. ಈ ಹಿಂದೆಯೇ Twitter Inc. ಅನ್ನು X Corp. ನೊಂದಿಗೆ ವಿಲೀನ ಮಾಡಲಾಗಿದೆ. ಇದೀಗ ಟ್ವಿಟ್ಟರ್‌ನ ಲೋಗೋ ಬದಲಾಗಿದೆ. ಮಂದೆ ಟ್ವಿಟ್ಟರ್ ಎಕ್ಸ್ ಹೆಸರಿನಲ್ಲಿಯೇ ಮುಂದುವರಿಯಲಿದೆ. ಇದನ್ನೂ ಓದಿ: Twitter Monetisation: ಕಂಟೆಂಟ್‌ ಕ್ರಿಯೇಟರ್ಸ್‌ಗಳಿಗೆ ಟ್ವಿಟ್ಟರ್‌ನಿಂದ ಸಿಗುತ್ತೆ ಹಣ – ಹೇಗೆ ಅಂತೀರಾ..?

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]