ಮೊಬೈಲ್ ನೋಡುತ್ತಾ ಎದುರಿಗೆ ಬಂದ ಬೈಕ್‍ಗೆ ಡಿಕ್ಕಿ- ಇಬ್ಬರು ಗಂಭೀರ

ಕಾರವಾರ: ಉತ್ತರ ಕನ್ನಡ (Uttara Kannada) ಜಿಲ್ಲೆಯ ಶಿರಸಿ ನಗರದ ಟಿ.ಎಸ್.ಎಸ್. ರಸ್ತೆಯಲ್ಲಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಸವಾರರಿಬ್ಬರೂ ಗಂಭೀರ ಗಾಯಗೊಂಡಿದ್ದಾರೆ.

ಮೊಬೈಲ್ (Mobile) ನೋಡುತ್ತಾ ಹೆಲ್ಮೆಟ್ ಧರಸಿದ ವ್ಯಕ್ತಿಯೋರ್ವ ನಡುರಸ್ತೆಯಲ್ಲಿ ಸಂಚರಿಸುತ್ತಿದ್ದ ಇನ್ನೊಂದು ಬೈಕ್‍ಗೆ ನೇರವಾಗಿ ಗುದ್ದಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಗುದ್ದಿದ ರಭಸಕ್ಕೆ ಎರಡು ಬೈಕ್ ಗಳಲ್ಲಿದ್ದ ಸವಾರರು ಹಾರಿ ರಸ್ತೆಯ ಮೇಲೆ ಬಿದ್ದಿದ್ದಾರೆ. ಇದನ್ನೂ ಓದಿ: ಹೊಳೆಹೊನ್ನೂರು ಗಾಂಧಿ ಸರ್ಕಲ್‌ನಲ್ಲಿ ಮಹಾತ್ಮ ಗಾಂಧಿ ಪ್ರತಿಮೆ ಧ್ವಂಸ- ಸ್ಥಳೀಯರ ಪ್ರತಿಭಟನೆ

ಮೊಬೈಲ್ ಅವಾಂತರದಿಂದ ದುರ್ಘಟನೆ ನಡೆದಿದ್ದು, ಗಾಯಾಳುಗಳನ್ನು ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿರಸಿ ನಗರ ಠಾಣಾ ವ್ಯಾಪ್ತಿಯಲ್ಲಿ ಘಟನರ ನಡೆದಿದ್ದು ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]