ಚಾಮರಾಜನಗರ: ಮಂಗಳವಾರ ರಾತ್ರಿ ಸುರಿದ ಗಾಳಿ ಸಹಿತ ಮಳೆಯಿಂದಾಗಿ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಲಕ್ಕೂರು ಗ್ರಾಮದಲ್ಲಿ ಮನೆಯ ಗೋಡೆ ಕುಸಿದು ಬಿದ್ದ ಪರಿಣಾಮ ಕೊಟ್ಟಿಗೆಯಲ್ಲಿದ್ದ ಎರಡು ಹಸುಗಳು ಸಾವನ್ನಪ್ಪಿವೆ.
ಗಾಳಿ ಸಹಿತ ಮಳೆಯಿಂದಾಗಿ ಗ್ರಾಮದ ಪರ್ವತಮ್ಮ ಅವರಿಗೆ ಸೇರಿದ ಮನೆಯ ಮೇಲ್ಛಾವಣಿ ಮತ್ತು ಗೋಡೆ ಕುಸಿದು ಬಿದ್ದಿದೆ. ಇದರಿಂದ ಕೊಟ್ಟಿಗೆಯಲ್ಲಿ ಇದ್ದ ಒಂದು ಲಕ್ಷ ರೂ ಮೌಲ್ಯದ ಎರಡು ಹಸುಗಳು ಸಾವನ್ನಪ್ಪಿವೆ. ಈ ಘಟನೆಯಿಂದ ಪಾರ್ವತಮ್ಮ ಹಾಗೂ ಕುಟುಂಬದವರು ಕಂಗಲಾಗಿದ್ದು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಈ ಕುಟುಂಬಕ್ಕೆ ಪರಿಹಾರ ನೀಡಬೇಕೆಂದು ಆಗ್ರಹಿಸುತ್ತಿದ್ದಾರೆ.

ಕಳೆದ ಎರಡು ದಿನಗಳಿಂದ ಜಿಲ್ಲೆಯಲ್ಲಿ ಸುರಿಯುತ್ತಿರುವ ತುಂತುರು ಮಳೆಯಿಂದಾಗಿ ಪಟ್ಟಣ ಪ್ರದೇಶದ ರಸ್ತೆಗಳು ಹಾಗೂ ಕ್ರೀಡಾಂಗಣ ಕೆಸರು ಗದ್ದೆಯಂತೆ ಆಗಿದೆ. ಎಡೆ ಬಿಡದೇ ಸರಿಯುತ್ತಿರುವ ಸೋನೆ ಮಳೆಯಿಂದ ಜಿಲ್ಲೆಯ ಜನರು ಕಂಗಲಾಗಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ.
ಎರಡು ದಿನಗಳ ಹಿಂದೆ ಜಲಪಾತದ ಸಮೀಪ ನೀರು ಕುಡಿಯಲೆಂದು ಹೋದ ಹಸು ಆಯಾ ತಪ್ಪಿ ನೀರಿನ ರಭಸಕ್ಕೆ ಸಿಲುಕಿತ್ತು. ಈ ವೇಳೆ ಹಸು ತಮ್ಮ ಪ್ರಾಣವನ್ನು ರಕ್ಷಿಸಿಕೊಳ್ಳಲು ಸತತ ಎರಡು ಗಂಟೆಗಳ ಕಾಲ ಹರಸಾಹಸ ಪಟ್ಟಿದೆ. ಕಬಿನಿ ಹಾಗೂ ಕೆಆರ್ ಎಸ್ ಜಲಾಶಯಗಳಿಂದ ಅಧಿಕ ನೀರು ಹರಿಸಿರುವ ಹಿನ್ನೆಲೆಯಲ್ಲಿ ನೀರಿನ ರಭಸ ಹೆಚ್ಚಾಗಿದ್ದ ಕಾರಣ ಹಸು ತನ್ನ ಪ್ರಾಣ ಉಳಿಸಿಕೊಳ್ಳಲು ಸಾಧ್ಯವಾಗದೇ ಜಲಪಾತದಿಂದ ಕೆಳಗೆ ಬಿದ್ದು ಸಾವನ್ನಪ್ಪಿತ್ತು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Leave a Reply