ರಾಮನಗರ: ಕ್ರಷರ್ ನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಹಿಟಾಚಿಯ ಮೇಲೆ ಕಲ್ಲು ಬಂಡೆ ಬಿದ್ದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವ ಗಂಭೀರ ಗಾಯಗೊಂಡಿರುವ ಘಟನೆ ಜಿಲ್ಲೆಯ ಮಾಗಡಿ ತಾಲೂಕಿನ ವೆಂಗಳಪ್ಪನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಬಿಜಾಪುರ ಮೂಲದ ಮೊಹಮ್ಮದ್(23) ಮತ್ತು ಬಿಹಾರ ಮೂಲದ ಫರ್ವೇಜ್(22) ಮೃತ ದುರ್ದೈವಿಗಳು. ಮಂಜುನಾಥ್ ಎಂಬವರಿಗೆ ಸೇರಿದ ರಾಘವೇಂದ್ರ ಕ್ರಿಸ್ಟಲ್ ರಾಕ್ ಕ್ರಷರ್ ನಲ್ಲಿ ಈ ಅವಘಡ ಸಂಭವಿಸಿದೆ.

ಕೆಲಸ ಮಾಡುತ್ತಿದ್ದ ವೇಳೆ ಹಿಟಾಚಿಯ ಮೇಲೆ ಕಲ್ಲು ಬಂಡೆ ಬಿದ್ದಿದ್ದೆ. ಪರಿಣಾಮ ಇಬ್ಬರು ಕಾರ್ಮಿಕರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಶಂಕರ್ ಗಂಭೀರವಾಗಿ ಗಾಯಗೊಂಡಿದ್ದು, ಬೆಂಗಳೂರಿನ ರಾಜರಾಜೇಶ್ವರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮಾಗಡಿ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.


Leave a Reply