ತುಮಕೂರು: ಆಟೋಗೆ ಕಾರು ಗುದ್ದಿದ ಪರಿಣಾಮ ಇಬ್ಬರು ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆ ಕುಣಿಗಲ್ ತಾಲೂಕಿನಲ್ಲಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ-75 ರಲ್ಲಿ ನಡೆದಿದೆ.
ಹೇರೂರು ಮತ್ತು ಚೊಟ್ಟನಹಳ್ಳಿ ಮಧ್ಯಭಾಗದಲ್ಲಿ ಈ ಅಪಘಾತ ಸಂಭವಿಸಿದೆ. ಶಾಸಕ ಸಿ.ಟಿ ರವಿ ಕಾರು ಅಪಾಘಾತವಾಗಿದ್ದ ಸ್ಥಳದಿಂದ ಅನತಿ ದೂರದಲ್ಲಿ ಈ ಅಪಘಾತ ನಡೆದಿದೆ. ಆಟೋದಲ್ಲಿದ್ದ ವ್ಯಕ್ತಿ ಹಾಗೂ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕಾರು ಅರಸೀಕೆರೆಯಿಂದ ಬೆಂಗಳೂರಿಗೆ ತೆರಳುತ್ತಿತ್ತು. ಇತ್ತ ಆಟೋ ನಾಗಮಂಗಲದಿಂದ ಬೆಂಗಳೂರು ಕಡೆಗೆ ಹೋಗುತಿತ್ತು. ಆದರೆ ಕುಣಿಗಲ್ ತಾಲೂಕಿನ ಎನ್‍ಎಚ್-75 ರಲ್ಲಿ ಬರುತ್ತಿದ್ದಂತೆ ಕಾರು ಆಟೋಗೆ ಡಿಕ್ಕಿ ಹೊಡೆದಿದೆ. ಆಟೋದಲ್ಲಿ ಒಟ್ಟು ಏಳು ಮಂದಿ ಇದ್ದರು. ಆದರೆ ಡಿಕ್ಕಿಯ ರಭಸಕ್ಕೆ ಆಟೋದಲ್ಲಿದ ವ್ಯಕ್ತಿ ಹಾಗೂ ಮಹಿಳೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇನ್ನೂ ಮೂವರಿಗೆ ಗಂಂಭೀರವಾಗಿ ಗಾಯವಾಗಿದೆ. ಮತ್ತಿಬ್ಬರಿಗೆ ಸಣ್ಣಪುಟ್ಟ ಮತ್ತು ಕಾರಿನಲ್ಲಿದ್ದ ಅಮ್ಮ ಮಗನಿಗೂ ಸಣ್ಣಪುಟ್ಟ ಗಾಯವಾಗಿದೆ. ಗಾಯಾಳುಗಳನ್ನು ಕೂಡಲೇ ಕುಣಿಗಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಕ್ಕಿಯ ರಭಸಕ್ಕೆ ರಸ್ತೆಯಿಂದ ಎಂಟು ಅಡಿ ಆಳದ ಹಳ್ಳಕ್ಕೆ ಆಟೋ ಮತ್ತು ಕಾರು ಹೋಗಿ ಬಿದ್ದಿದ್ದು, ಆಟೋ ಸಂಪೂರ್ಣ ನಜ್ಜುಗುಜ್ಜಾಗಿದೆ.
ಘಟನೆ ನಡೆದ ಸ್ಥಳಕ್ಕೆ ಕುಣಿಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Leave a Reply