ಕಾಲು ಜಾರಿ ಕೆರೆಗೆ ಬಿದ್ದು ಇಬ್ಬರು ಯುವಕರ ದುರ್ಮರಣ!

YOUTHS DIED

ಬೆಳಗಾವಿ: ಕಾಲು ಜಾರಿ ಕೆರೆಯಲ್ಲಿ ಬಿದ್ದು ಇಬ್ಬರು ಯುವಕರು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ಎಂ.ಕೆ. ಹುಬ್ಬಳ್ಳಿ ಪಟ್ಟಣದ ಹೊರ ವಲಯದಲ್ಲಿ ನಡೆದಿದೆ.

BELAGAVI LAKE

ಬೆಳಗ್ಗೆ ಬರ್ಹಿದೆಸೆಗೆ ಕೆರೆ ಕಡೆ ಹೋಗಿದ್ದ ಇಬ್ಬರು ಯುವಕರು ಕಾಲು ಜಾರಿ ನೀರಿನಲ್ಲಿ ಬಿದ್ದಿದ್ದಾರೆ. ಈ ವೇಳೆ ಈಜು ಬಾರದೇ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಸುದ್ದಿ ತಿಳಿಯುತ್ತಿದಂತೆ ಘಟನಾ ಸ್ಥಳಕ್ಕೆ ಸ್ಥಳೀಯರು ಹಾಗೂ ಅಗ್ನಿ ಶಾಮಕ ದಳದ ಸಿಬ್ಬಂದಿ ಧಾವಿಸಿ ಶೋಧ ಕಾರ್ಯ ನಡೆಸಿದ್ದಾರೆ. ಇದನ್ನೂ ಓದಿ: ಪುನೀತ್ ಅಂತ್ಯಕ್ರಿಯೆಗೆ ಸಹಕರಿಸಿದ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗೆ ಸಿಎಂ ಧನ್ಯವಾದ

LAKE

ಒಂದು ಮೃತದೇಹವನ್ನು ನೀರಿನಿಂದ ತೆಗೆಯಲಾಗಿದ್ದು, ಮೃತ ವ್ಯಕ್ತಿ ಗೋಕಾಕ್ ತಾಲೂಕಿನ ಕೊಣ್ಣೂರ ಗ್ರಾಮದ ಕಾಂತೇಶ್ ಬಡಿಗೇರ್ ಎಂದು ಗುರುತಿಸಲಾಗಿದೆ. ಇನ್ನೊಬ್ಬನಿಗಾಗಿ ಶೋಧ ಕಾರ್ಯ ಮುಂದುವರೆಸಿದ್ದಾರೆ. ಸ್ಥಳಕ್ಕೆ ಕಿತ್ತೂರು ಪೆÇಲೀಸ್ ಠಾಣೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  ಇದನ್ನೂ ಓದಿ: ಇಬ್ಬರ ಬಾಳಿಗೆ ಬೆಳಕಾದ ಅಪ್ಪು

Comments

Leave a Reply

Your email address will not be published. Required fields are marked *