ಉಡುಪಿಯಲ್ಲಿ ತಡರಾತ್ರಿ ಝಳಪಿಸಿದ ತಲ್ವಾರ್-ಯುವಕರಿಬ್ಬರ ಬರ್ಬರ ಹತ್ಯೆ

ಉಡುಪಿ: ತಡರಾತ್ರಿ ತಲವಾರಿನಿಂದ ಹಲ್ಲೆ ನಡೆಸಿ ಯುವಕರಿಬ್ಬರನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೋಟದಲ್ಲಿ ನಡೆದಿದೆ.

ಭರತ್ ಮತ್ತು ಯತೀಶ್ ಕೊಲೆಯಾದ ಯುವಕರು. ಶನಿವಾರ ತಡರಾತ್ರಿ ಕೋಟ ರಾಜಲಕ್ಷ್ಮಿ ಸಭಾಂಗಣದ ಬಳಿ ದುಷ್ಕರ್ಮಿಗಳು ತಲವಾರಿನಿಂದ ಭರತ್ ಮತ್ತು ಯತೀಶ್ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಇಬ್ಬರೂ ಮೃತಪಟ್ಟಿದ್ದಾರೆ.

ಭರತ್ ಮತ್ತು ಯತೀಶ್ ಇಬ್ಬರು ತಮ್ಮ ಸ್ನೇಹಿತ ಲೋಹಿತ್ ಎಂಬವನಿಗೆ ಬೆಂಬಲಿಸಿದ್ದಕ್ಕೆ ಇಬ್ಬರ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದ್ದು, ಜಮೀನಿಗೆ ಸಂಬಂಧಿಸಿದ ವಿಚಾರದಲ್ಲಿ ನಡೆದ ಜಗಳ ಎಂದು ಶಂಕಿಸಲಾಗಿದೆ.

ಈ ಕುರಿತು ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *