ಶುಭಮನ್ ಗಿಲ್ ಹಿಂದಿಕ್ಕಿ ಯಶಸ್ವಿ ಜೈಸ್ವಾಲ್ ವಿಶೇಷ ಸಾಧನೆ

ಪೋಷೆಫ್‍ಸ್ಟ್ರೋಮ್: 2020ರ ಅಂಡರ್ 19 ವಿಶ್ವಕಪ್‍ನಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಯಶಸ್ವಿ ಜೈಸ್ವಾಲ್ ವಿಶೇಷ ಸಾಧನೆ ಮಾಡಿದ್ದಾರೆ.

ಅಂಡರ್ 19 ವಿಶ್ವಕಪ್ ಟೂರ್ನಿಯ ಭಾಗವಾಗಿ ಭಾನುವಾರ ನಡೆಯುತ್ತಿರುವ ಬಾಂಗ್ಲಾದೇಶದ ವಿರುದ್ಧ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ಪರ ಯಶಸ್ವಿ ಜೈಸ್ವಾಲ್ ಏಕಾಂಗಿಯಾಗಿ ಹೋರಾಡಿದರು. ಈ ಪಂದ್ಯದಲ್ಲಿ ಜೈಸ್ವಾಲ್ 88 ರನ್ (121 ಎಸೆತ, 8 ಬೌಂಡಿರಿ, ಒಂದು ಸಿಕ್ಸ) ಗಳಿಸಿ ತಂಡಕ್ಕೆ ಆಸರೆಯಾದರು. ಇದನ್ನೂ ಓದಿ: ಪಾಕ್ ವಿರುದ್ಧ ಶತಕ ಸಿಡಿಸಿದ ಪಾನಿಪುರಿ ಮಾರುತ್ತಿದ್ದ 18ರ ಪೋರ ಜೈಸ್ವಾಲ್ 

ಫೈನಲ್ ಪಂದ್ಯದಲ್ಲಿ 88 ರನ್ ಗಳಿಸುವ ಮೂಲಕ ಜೈಸ್ವಾಲ್ ವಿಶೇಷ ಸಾಧನೆಗೆ ಪಾತ್ರರಾದರು. ಅಂಡರ್ 19 ವಿಶ್ವಕಪ್‍ನಲ್ಲಿ ಭಾರತದ ಕಿರಿಯರ ತಂಡದ ಪರ ಅತಿ ಹೆಚ್ಚು ರನ್ ಗಳಿಸಿದ ಪಟ್ಟಿಯಲ್ಲಿ ಜೈಸ್ವಾಲ್ ಶುಭಮನ್ ಗಿಲ್ ಅವರನ್ನು ಹಿಂದಿಕ್ಕಿ ಎರಡನೇ ಸ್ಥಾನ ಪಡೆದುಕೊಂಡಿದ್ದಾರೆ.

ಈ ಪಂದ್ಯ ಸೇರಿದಂತೆ 2020ರ ಅಂಡರ್ 19 ವಿಶ್ವಕಪ್‍ನಲ್ಲಿ ಯಶಸ್ವಿ ಜೈಸ್ವಾಲ್ ಒಟ್ಟು 400 ರನ್ ಗಳಿಸಿದ್ದಾರೆ. 2018ರ ಅಂಡರ್ 19 ವಿಶ್ವಕಪ್‍ನಲ್ಲಿ 372 ರನ್ ಗಳಿಸಿದ್ದ ಶುಭಮನ್ ಗಿಲ್ ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ. ರನ್ ದಾಖಲೆಯ ಪಟ್ಟಿಯಲ್ಲಿ ಶಿಖರ್ ಧವನ್ ಅಗ್ರಸ್ಥಾನದಲ್ಲಿದ್ದಾರೆ. ಅವರು 2004ರ ಅಂಡರ್ 19 ವಿಶ್ವಕಪ್‍ನಲ್ಲಿ 505 ರನ್ ಗಳಿಸಿದ್ದರು. ಉಳಿದಂತೆ ಸರ್ಫರಾಜ್ ಖಾನ್ 2016ರ ಅಂಡರ್ 19 ವಿಶ್ವಕಪ್‍ನಲ್ಲಿ 355 ರನ್ ಹಾಗೂ ಚೇತೇಶ್ವರ್ 2006ರ ಅಂಡರ್ 19 ವಿಶ್ವಕಪ್‍ನಲ್ಲಿ 349 ರನ್ ದಾಖಲಿಸಿದ್ದಾರೆ.

Comments

Leave a Reply

Your email address will not be published. Required fields are marked *