ಮುಂಬೈ: ತಮ್ಮ ನಡುವಿನ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಿಕೊಳ್ಳಲು ಮಹಾರಾಷ್ಟ್ರದ ನೂತನ ಸಿಎಂ ಏಕನಾಥ್ ಶಿಂಧೆ ಹಾಗೂ ಶಿವಸೇನಾ ಅಧ್ಯಕ್ಷ ಉದ್ಧವ್ ಠಾಕ್ರೆ ಭೇಟಿಯಾಗಲು ಒಪ್ಪಿಕೊಂಡಿದ್ದಾರೆ ಎಂದು ಶಿವಸೇನೆ ನಾಯಕಿಯಾಗಿ ಗುರುತಿಸಿಕೊಂಡಿರುವ ಮರಾಠಿ ನಟಿ ದೀಪಾಲಿ ಸೈಯದ್ ಹೇಳಿದ್ದಾರೆ.

ಶಿಂಧೆ ಹಾಗೂ ಠಾಕ್ರೆ ನಡುವಿನ ಸಭೆಗೆ ಬಿಜೆಪಿಯ ಕೆಲ ನಾಯಕರೇ ಮಧ್ಯಸ್ಥಿಕೆ ವಹಿಸುತ್ತಿದ್ದಾರೆ ಎಂದು ಅವರು ಟ್ವೀಟ್ ಮಾಡಿದ್ದಾರೆ. ಬಳಿಕ ಶಿವಸೇನಾ ಅಧಿಕಾರಿಯೊಬ್ಬರು ಸೈಯದ್ ಅವರು ಪಕ್ಷದಲ್ಲಿ ಯಾವುದೇ ಹುದ್ದೆಯನ್ನು ಹೊಂದಿಲ್ಲ ಎಂಬುದಾಗಿ ಹೇಳಿದ್ದಾರೆ. ಇದನ್ನೂ ಓದಿ: ತಂದೆ ಎದುರೇ ಮಗುವನ್ನು ಟೆರೇಸ್ ಮೇಲಿಂದ ಕೆಳಗೆಸೆದ ಕೋತಿ ಗ್ಯಾಂಗ್ – ಹಸುಗೂಸು ಸಾವು
लवकरच माननीय आदित्य साहेब मंत्रीमंडळात दिसावे, शिवसेनेच्या ५० आमदारांनी मातोश्रीवर दिसावे, आदरणीय उद्धव साहेब व आदरणीय शिंदेसाहेब एक व्हावे, शिवसेना हा गट नसुन हिंदुत्वाचा गड आहे, त्यावरचा भगवा नेहमी डौलाने फडकत राहील. @ShivSena @mieknathshinde
— Deepali Sayed (@deepalisayed) July 16, 2022
ದೀಪಾಲಿ 2019ರ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಥಾಣೆ ಜಿಲ್ಲೆಯ ಮುಂಬ್ರಾ-ಕಲ್ವಾ ಕ್ಷೇತ್ರದಿಂದ ಶಿವಸೇನೆಯಿಂದ ಸ್ಫರ್ಧಿಸಲು ಉತ್ಸಾಹಿಯಾಗಿದ್ದರು. ಆದರೆ ಟಿಕೆಟ್ ಸಿಕ್ಕಿರಲಿಲ್ಲ. ಇದಕ್ಕೂ ಮುನ್ನ 2014ರಲ್ಲಿ ಆಮ್ ಆದ್ಮಿ (ಎಎಪಿ) ಪಕ್ಷದಿಂದ ಅಹ್ಮದ್ನಗರ ಜಿಲ್ಲೆಯಿಂದ ಸ್ಪರ್ಧಿಸಿ ಸೋತಿದ್ದರು. ಇದನ್ನೂ ಓದಿ: ತೆಲಂಗಾಣದ ಮೇಘಸ್ಫೋಟದ ಹಿಂದೆ ವಿದೇಶಿ ಶಕ್ತಿಗಳ ಷಡ್ಯಂತ್ರ – KCR

ಸದ್ಯ ಶಿವಸೇನೆ ರಾಜಕೀಯ ಬೆಳವಣಿಗೆಗಳ ಕುರಿತು ಟ್ವೀಟ್ ಮಾಡಿರುವ ಅವರು, `ಶಿವಸೈನಿಕರ ಭಾವನೆಗಳನ್ನು ಗಮನದಲ್ಲಿಟ್ಟುಕೊಂಡು ಉದ್ಧವ್ ಠಾಕ್ರೆ ಹಾಗೂ ಏಕನಾಥ್ ಶಿಂಧೆ ಅವರ ಭೇಟಿ ಇನ್ನೆರಡು ದಿನಗಳಲ್ಲಿ ನಡೆಯಲಿದೆ ಎಂದು ತಿಳಿಯಲು ನನಗೆ ಸಂತೋಷವಾಗಿದೆ. ಶಿಂಧೆ ಸೈನಿಕರ ಭಾವನೆಗಳನ್ನು ಅರ್ಥಮಾಡಿಕೊಂಡರು. ಠಾಕ್ರೆ ಅವರು ತಮ್ಮ ಪಾತ್ರದಲ್ಲಿ ದೊಡ್ಡ ಮನಸ್ಸಿನಿಂದ ಅವರನ್ನ ಸ್ವೀಕರಿಸುತ್ತಿದ್ದಾರೆ. ಕೆಲವು ಬಿಜೆಪಿ ನಾಯಕರು ಈ ಸಭೆಗೆ ಮಧ್ಯಸ್ಥಿಕೆ ವಹಿಸುತ್ತಿದ್ದಾರೆ’ ಎಂದು ಸೈಯದ್ ಟ್ವೀಟ್ ಮಾಡಿದ್ದು, ಶಿವಸೇನಾ ನಾಯಕಿ ಎಂದೂ ಉಲ್ಲೇಖಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಶಿವಸೇನೆ ಸಂಸದ ಸಂಜಯ್ ರಾವತ್, ಅಂತಹ ಯಾವುದೇ ಬೆಳವಣಿಗೆಯ ಬಗ್ಗೆ ನನಗೆ ತಿಳಿದಿಲ್ಲ. ನಾನು ಪಕ್ಷದಲ್ಲಿ ಬಹಳ ಸಣ್ಣ ಕಾರ್ಯಕರ್ತ ಎಂದು ಕುಟುಕಿದ್ದಾರೆ. ಇದನ್ನೂ ಓದಿ: ಸೆ.3ರಂದು ವಿಶ್ವದ ಮೊದಲ ರಣಹದ್ದು ಸಂರಕ್ಷಣೆ ಕೇಂದ್ರ ಉದ್ಘಾಟಿಸಲಿರುವ ಯೋಗಿ
ಅಲ್ಲದೆ ಏಕನಾಥ್ ಶಿಂಧೆ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ 15 ದಿನಗಳ ನಂತರವೂ ಪ್ರಮಾಣವಚನ ಸ್ವೀಕರಿಸಿಲ್ಲ. ಸಾಂವಿಧಾನಿಕ ಸಮಸ್ಯೆಗಳು ಇರುವುದರಿಂದ ಸಚಿವ ಸಂಪುಟವೂ ವಿಸ್ತರಣೆಯಾಗಿಲ್ಲ. ಶಿವಸೇನೆಯ 50 ಬಂಡಾಯ ಶಾಸಕರಲ್ಲಿ 40 ಮಂದಿ ಅನರ್ಹತೆಯ ಆತಂಕ ಎದುರಿಸುತ್ತಿದ್ದಾರೆ. ಇದು ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆಯಲ್ಲಿರುವುದರಿಂದ ಇನ್ನೂ ಸಚಿವ ಸಂಪುಟ ವಿಸ್ತರಣೆಯಾಗಿಲ್ಲ. ಒಂದು ವೇಳೆ ವಿಸ್ತರಣೆ ಮಾಡಿದರೂ ಅವರನ್ನು ಅನರ್ಹಗೊಳಿಸಲಾಗುತ್ತದೆ ಎಂದು ಟೀಕಿಸಿದ್ದಾರೆ.

Leave a Reply