ಪಿಎಸ್‍ಐ ಅಕ್ರಮದಲ್ಲಿ ಅಶ್ವಥ್ ನಾರಾಯಣ ಸಹೋದರನಿಗೆ ಲಿಂಕ್ : ಉಗ್ರಪ್ಪ ಆರೋಪ

ಬೆಂಗಳೂರು: ಪಿಎಸ್‍ಐ(ಸಬ್ ಇನ್ಸ್‍ಪೆಕ್ಟರ್) ಪರೀಕ್ಷೆ ಅಕ್ರಮದಲ್ಲಿ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಹೆಸರು ಕೇಳಿ ಬಂದಿದೆ.

ಮಾಜಿ ಸಂಸದರಾದ ಉಗ್ರಪ್ಪ, ಚಂದ್ರಪ್ಪ, ಮಾಜಿ ಸಚಿವ ಹೆಚ್.ಎಂ.ರೇವಣ್ಣ ಇಂದು ಕೆಪಿಸಿಸಿ ಕಚೇರಿಯಲ್ಲಿ ಪಿಎಸ್‍ಐ ಅಕ್ರಮದ ಬಗ್ಗೆ ಸುದ್ದಿಗೋಷ್ಠಿ ನಡೆಸಿದರು.

ಉಗ್ರಪ್ಪ ಮಾತನಾಡಿ, ರಾಮನಗರ ಉಸ್ತುವಾರಿ ಸಚಿವ ಅಶ್ವಥ್ ನಾರಾಯಣ ಸುತ್ತ ಅನುಮಾನ ಮೂಡಿಸುತ್ತಿದೆ. ಮಾಗಡಿಯಲ್ಲಿ ಮೂರರಿಂದ ಐದು ಜನರಿಗೆ ರ‍್ಯಾಂಕ್ ಬಂದಿದೆ. ಅಶ್ವಥ್ ನಾರಾಯಣ್ ಸಹೋದರ ಸತೀಶ್‍ಗೆ ಅಕ್ರಮದ ಲಿಂಕ್ ಇದೆ ಎಂದು ಆರೋಪಿಸಿದರು.

ಪ್ರಭಾವಿ ಸಚಿವರ ಸಹೋದರನನ್ನ ತನಿಖೆಗೆ ಕರೆದಿದ್ದಾರೆ. ಆಗ ಪ್ರಭಾವಿ ಸಚಿವರು ಕರೆ ಮಾಡಿ ಒತ್ತಡ ಹಾಕಿದ್ದಾರೆ. ರಾಮನಗರದ ಐದು ಮಂದಿ ಆಯ್ಕೆ ಆಗಿದ್ದಾರೆ. ನಾನೊಬ್ಬ ವಕೀಲ ಕೂಡ ಹೌದು. ಈಗ ಈ ಪ್ರಕರಣ ಅಶ್ವಥ್ ನಾರಾಯಣ್ ಕಡೆಯೂ ಬೆರಳು ತೋರಿಸುತ್ತಿದೆ ಎಂದು ಆರೋಪಿಸಿದರು. ಇದನ್ನೂ ಓದಿ: ಕಾಂಗ್ರೆಸ್‌ಗೆ 20 ಕಡೆ ಒಬ್ಬರನ್ನೇ ಚುನಾವಣೆಗೆ ನಿಲ್ಲಿಸುವ ದಾರಿದ್ರ್ಯ ಬಂದಿದೆ: ಸುನಿಲ್ ಕುಮಾರ್

ಅಶ್ವಥ್ ನಾರಾಯಣ ಗಂಡಸ್ಥನದ ಬಗ್ಗೆ ಮಾತನಾಡಿದ್ದೀರಿ. ನಿಮಗೆ ತಾಕತ್, ಧಮ್ ಇದ್ದರೆ ನ್ಯಾಯಾಂಗ ತನಿಖೆಗೆ ಒಪ್ಪಿಸಿ. ಹೈಕೋರ್ಟ್ ಸಿಟ್ಟಿಂಗ್ ಜಡ್ಜ್ ನೇತೃತ್ವದಲ್ಲಿ ಒಪ್ಪಿಸಿ. ನೈತಿಕತೆ ಇದ್ದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂದು ಅಶ್ವಥ್ ನಾರಾಯಣ್ ರಾಜೀನಾಮೆಗೆ ಉಗ್ರಪ್ಪ ಆಗ್ರಹಿಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ: ಬಿಎಸ್‍ವೈ

Comments

Leave a Reply

Your email address will not be published. Required fields are marked *