ರಷ್ಯಾದ ಇಬ್ಬರು ಸೈನಿಕರನ್ನು ಸೆರೆ ಹಿಡಿದ ಉಕ್ರೇನ್‌ ಸೇನೆ

ಕೀವ್:‌ ಉಕ್ರೇನ್‌ ಮೇಲಿನ ರಷ್ಯಾ ದಾಳಿ ಮೂರನೇ ದಿನಕ್ಕೆ ಕಾಲಿಟ್ಟಿದೆ. ಉಕ್ರೇನ್‌ ರಾಜಧಾನಿ ಕೀವ್‌ ಮೇಲೆ ರಷ್ಯಾ ಸೈನಿಕರು ದಾಳಿ ಮುಂದುವರಿಸಿದ್ದಾರೆ. ಈ ವೇಳೆ ರಷ್ಯಾದ ಇಬ್ಬರು ಸೈನಿಕರನ್ನು ಸೆರೆ ಹಿಡಿಯಲಾಗಿದೆ ಎಂದು ಉಕ್ರೇನ್‌ ಸೇನೆ ತಿಳಿಸಿದೆ.

ಉಕ್ರೇನ್‌ನ ಸಶಸ್ತ್ರ ಪಡೆಗಳ ಜನರಲ್‌ ಸ್ಟಾಫ್‌, ರಷ್ಯಾದ ಇಬ್ಬರು ಸೈನಿಕರ ಚಿತ್ರಗಳನ್ನು ಪೋಸ್ಟ್‌ ಮಾಡಿದ್ದಾರೆ. ಅವರು ಯಾಂಪೋಲ್‌ ಮೋಟಾರೈಸ್ಡ್‌ ರೈಫಲ್‌ನ 91701ನೇ ಘಟಕದಿಂದ ಬಂದವರು ಎಂದು ಹೇಳುತ್ತಿದ್ದಾರೆಂದು ತಿಳಿಸಿದ್ದಾರೆ. ಅಲ್ಲದೆ ಉಕ್ರೇನ್‌ ಸೇನೆಯಲ್ಲಿರುವ ರಷ್ಯಾ ಯೋಧರಿಗೆ ತಮ್ಮ ಕುಟುಂಬದವರ ಜೊತೆ ಪೋನಿನಲ್ಲಿ ಮಾತಾಡಲು ಅವಕಾಸ ಕೊಟ್ಟಿದ್ದಾರೆ. ಈ ವೇಳೆ ರಷ್ಯಾ ಯೋಧರು, ತಾವು ಉಕ್ರೇನ್‌ ಯೋಧರ ಸೆರೆಯಲ್ಲಿರುವುದಾಗಿ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ.  ಇದನ್ನೂ ಓದಿ: ವಿಶ್ವವೇ ನಮ್ಮೊಂದಿಗಿದೆ, ಜಯ ನಮ್ಮದೆ: ಉಕ್ರೇನ್ ಅಧ್ಯಕ್ಷ

ಉಕ್ರೇನ್‌ ವಿರುದ್ಧ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಗುರುವಾರ ಯುದ್ಧ ಘೋಷಿಸಿದ್ದಾರೆ. ರಷ್ಯಾ ಸೈನಿಕರು ಆಕ್ರಮಣ ಮುಂದುವರಿಸಿದ್ದು, ಉಕ್ರೇನ್‌ ರಾಜಧಾನಿ ಕೀವ್‌ ವಶಕ್ಕೆ ಮುಂದಾಗಿದ್ದಾರೆ.

ರಷ್ಯಾದ ಆಕ್ರಮಣ ನೀತಿಗೆ ಅಮೆರಿಕ ಸೇರಿದಂತೆ ವಿಶ್ವದ ಅನೇಕ ರಾಷ್ಟ್ರಗಳು ವಿರೋಧ ವ್ಯಕ್ತಪಡಿಸಿವೆ. ಇದೇ ವೇಳೆ ರಷ್ಯಾ ಮೇಲೆ ಪಾಶ್ಚಿಮಾತ್ಯ ಹಣಕಾಸು ನಿರ್ಬಂಧವನ್ನು ಅಮೆರಿಕ ಘೋಷಿಸಿದೆ. ಇದನ್ನೂ ಓದಿ: ಉಕ್ರೇನ್‌ ಯುದ್ಧ ಭೀಕರತೆ ನಡುವೆಯೂ ಹಸೆಮಣೆ ಏರಿ ಜೋಡಿ ಸಂಭ್ರಮ

Comments

Leave a Reply

Your email address will not be published. Required fields are marked *