Russia-Ukraine Crisis: ಪ್ರಧಾನಿ ಮೋದಿ ಮಧ್ಯಪ್ರವೇಶಕ್ಕೆ ಉಕ್ರೇನ್ ಮನವಿ

ನವದೆಹಲಿ: ರಷ್ಯಾ – ಉಕ್ರೇನ್ ವಿರುದ್ಧ ಯುದ್ಧ ಘೋಷಿಸುತ್ತಿದ್ದಂತೆ ಈ ಎರಡು ರಾಷ್ಟ್ರಗಳ ಮಧ್ಯೆ ಮಾತುಕತೆ ನಡೆಸಿ ಯುದ್ಧ ನಿಲ್ಲಿಸುವ ಕಾರ್ಯಕ್ಕೆ ಭಾರತದ ಪ್ರಧಾನಿ ನರೇಂದ್ರ ಮೋದಿ ಮುಂದಾಗಬೇಕೆಂದು ಭಾರತದಲ್ಲಿರುವ ಉಕ್ರೇನ್ ರಾಯಭಾರಿ ಮನವಿ ಮಾಡಿಕೊಂಡಿದ್ದಾರೆ.

ರಷ್ಯಾ ಈಗಾಗಲೇ ಉಕ್ರೇನ್ ಮೇಲೆ ಯುದ್ಧ ಸಾರಿದ್ದು, ಉಕ್ರೇನ್‍ನಿಂದ ಜನ ಮಹಾವಲಸೆ ಆರಂಭಿಸಿದ್ದಾರೆ. ರಷ್ಯಾ ಮತ್ತು ಭಾರತದ ನಡುವೆ ಉತ್ತಮ ಸಂಬಂಧವಿದ್ದು, ಭಾರತದ ಪ್ರಧಾನಿ ನರೇಂದ್ರ ಮೋದಿ ರಷ್ಯಾದ ಅಧ್ಯಕ್ಷರಾದ ವಾಡ್ಲಿಮಿರ್ ಪುಟೀನ್ ಜೊತೆ ಮಾತುಕತೆ ನಡೆಸಬೇಕಾಗಿದೆ ಎಂದು ಉಕ್ರೇನ್ ರಾಯಭಾರಿ ಕೇಳಿಕೊಂಡಿದ್ದಾರೆ. ಇದನ್ನೂ ಓದಿ: ರಷ್ಯಾ ದಾಳಿಯಿಂದ ಉಕ್ರೇನ್‍ನಲ್ಲಿ ನಾಶವಾಗಿದ್ದು ಏನೇನು? ಇಲ್ಲಿದೆ ವಿವರ

ಈ ಬಗ್ಗೆ ಮಾತನಾಡಿರುವ ಉಕ್ರೇನ್ ರಾಯಭಾರಿ ಇಗೂರ್ ಪೋಲಿಖಾ, ಮೋದಿಯವರು ರಷ್ಯಾ ಅಧ್ಯಕ್ಷರಾದ ಪುಟೀನ್ ಮತ್ತು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಜೊತೆ ಮಾತುಕತೆ ನಡೆಸಬೇಕು. ಈಗಾಗಲೇ ಯುದ್ಧ ಆರಂಭವಾಗಿದೆ. ಇದರಿಂದ ಉಕ್ರೇನ್ ನಾಗರೀಕರು ಆತಂಕಕ್ಕೆ ಒಳಗಾಗಿದ್ದಾರೆ ಎಂದು ಕಳವಳ ವ್ಯಕ್ತ ಪಡಿಸಿದ್ದಾರೆ. ಇದನ್ನೂ ಓದಿ: ಉಕ್ರೇನ್‍ಗೆ ಹೋಗುತ್ತಿದ್ದ ಏರ್ ಇಂಡಿಯಾ ಮಾರ್ಗಮಧ್ಯದಲ್ಲೇ ವಾಪಸ್

ರಷ್ಯಾದ 5 ಯುದ್ಧ ವಿಮಾನ, 2 ಹೆಲಿಕಾಪ್ಟರ್, ಟ್ಯಾಂಕ್ ಮತ್ತು ಟ್ರಕ್‍ಗಳನ್ನು ಈಗಾಗಲೇ ಉಕ್ರೇನ್ ಮಿಲಿಟರಿ ಪಡೆ ಹೊಡೆದುರುಳಿಸಿದೆ. ನಾವು ಈ ಮೊದಲು ರಷ್ಯಾದ ಮಿಲಿಟರಿ ಪಡೆ ನಮ್ಮ ಗಡಿ ಪ್ರದೇಶದಿಂದ ಒಳಬರದಂತೆ ತಿಳಿಸಿದ್ದೇವು ಆದರೂ ಬಂದಿದ್ದಾರೆ ಹಾಗಾಗಿ ಉಕ್ರೇನ್, ರಷ್ಯಾದ ಮಿಲಿಟರಿ ಪಡೆಗಳನ್ನು ಹೊಡೆದುರುಳಿಸಿದೆ. ಈಗಾಗಲೇ ಪರಿಸ್ಥಿತಿ ಕೈಮೀರುತ್ತಿದ್ದು, ಭಾರತ ಕೂಡಲೇ ಮಧ್ಯಪ್ರವೇಶಿಸಿ ಮಾತುಕತೆಗೆ ಮುಂದಾಗಬೇಕು ಎಂದು ಕೇಳಿಕೊಂಡಿದ್ದಾರೆ.

ಉಕ್ರೇನ್‍ನಲ್ಲಿ ಆತಂಕ ಮನೆ ಮಾಡಿದ್ದು, 5 ನಗರಗಳಲ್ಲಿ ಮಹಾವಲಸೆ ಆರಂಭವಾಗಿದೆ. ಇತ್ತ ಉಕ್ರೇನ್, ರಷ್ಯಾ ನಡುವೆ ಯುದ್ಧ ಘೋಷಣೆ ಆಗುತ್ತಿದ್ದಂತೆ ಅಂತರಾಷ್ಟ್ರೀಯ ಗಡಿಗಳಲ್ಲಿ ಭಾರತ ಮುನ್ನಚ್ಚರಿಕೆ ವಹಿಸಿದೆ. ಡ್ರೋನ್ ಮೂಲಕ ಬಿಎಸ್‍ಎಫ್ ಪರಿಶೀಲನೆ ಮಾಡಲಾರಂಭಿಸಿದೆ. ಅಂತರಾಷ್ಟ್ರೀಯ ಗಡಿಗಳಲ್ಲಿ ಭದ್ರತಾ ಪಡೆಗಳು ಆಕ್ಟಿವ್ ಆಗಿದ್ದು, ಭಾರತೀಯ ರಾಷ್ಟ್ರೀಯ ಭದ್ರತಾ ಮಂಡಳಿ ಸಭೆ ಕರೆದಿದ್ದು, ಉಕ್ರೇನ್‍ನಲ್ಲಿನ ಪರಿಸ್ಥಿತಿಯ ಕುರಿತು ಅಜಿತ್ ದೋವಲ್ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ಇದನ್ನೂ ಓದಿ:  ಉಕ್ರೇನ್ ವಿರುದ್ಧದ ದಾಳಿ ವಿಪತ್ಕಾರಕ ಜೀವಹಾನಿಗೆ ಕಾರಣವಾಗಬಹುದು: ಜೋ ಬೈಡೆನ್

Comments

Leave a Reply

Your email address will not be published. Required fields are marked *