ಕೀವ್: ಉಕ್ರೇನ್ (Ukraine) ರಾಜಧಾನಿ ಕಿವ್ ಹೊರವಲಯದಲ್ಲಿರುವ ಶಿಶುವಿಹಾರದ ಬಳಿ ಹೆಲಿಕಾಪ್ಟರ್ ಪತನಗೊಂಡು (Helicopter Crash) ಆಂತರಿಕ ಸಚಿವ ಸೇರಿದಂತೆ 16 ಮಂದಿ ಸಾವನ್ನಪ್ಪಿದ್ದಾರೆ.
ಹೆಲಿಕಾಪ್ಟರ್ ಪತನಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಪತನಗೊಂಡ ಹೆಲಿಕಾಪ್ಟರ್ ಶಿಶುವಿಹಾರ ಕೇಂದ್ರದ ಮೇಲೆ ಬಿದ್ದಿದ್ದು ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ.
https://twitter.com/AZgeopolitics/status/1615609958594220033
ಉಕ್ರೇನ್ ಸಚಿವರ ಜೊತೆ ಹಲವು ಹಿರಿಯ ಅಧಿಕಾರಿಗಳು ಹೆಲಿಕಾಪ್ಟರ್‌ನಲ್ಲಿ ಪ್ರಯಾಣಿಸುತ್ತಿದ್ದರು. ಎಷ್ಟು ಮಂದಿ ಮೃತಪಟ್ಟಿದ್ದಾರೆ ಎಂಬ ಖಚಿತ ಮಾಹಿತಿ ಲಭ್ಯವಾಗಿಲ್ಲ.
https://twitter.com/AZgeopolitics/status/1615620708226461696
ಕಟ್ಟಡದ ಮೇಲೆ ಹೆಲಿಕಾಪ್ಟರ್ ಬಿದ್ದು ಬೆಂಕಿ ಹೊತ್ತಿಕೊಂಡ ಪರಿಣಾಮ ಹಲವು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಹಲವು ಮಕ್ಕನ್ನು ಆಸಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ 10 ಮಕ್ಕಳು ಸೇರಿದಂತೆ 22 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k

Leave a Reply