ಚಿಕ್ಕೋಡಿ: ಭಯ, ಆತಂಕವಿಲ್ಲದೇ ಶಾಲೆಗೆ ಬನ್ನಿ ಎಂದು ವಿದ್ಯಾರ್ಥಿಗಳಲ್ಲಿ ಅರಣ್ಯ ಹಾಗೂ ಆಹಾರ ಇಲಾಖೆ ಸಚಿವ ಉಮೇಶ ಕತ್ತಿ ಮನವಿ ಮಾಡಿಕೊಂಡಿದ್ದಾರೆ.

ಎಲ್ಲ ಮುನ್ನೆಚ್ಚರಿಕೆ ಕ್ರಮಗಳಿಂದ ಇಂದಿನಿಂದ ಶಾಲಾ ಕಾಲೇಜುಗಳನ್ನ ಆರಂಭಿಸಲಾಗಿದ್ದು, ಯಾವುದೇ ಭಯ, ಆತಂಕವಿಲ್ಲದೇ ವಿದ್ಯಾರ್ಥಿಗಳು ಶಾಲೆಗೆ ಬರಬೇಕು. ಇಂದಿನಿಂದ ಶಾಲಾ ಕಾಲೇಜುಗಳು ಆರಂಭವಾದ ಹಿನ್ನೆಲೆಯಲ್ಲಿ ಹುಕ್ಕೇರಿ ತಾಲೂಕಿನ ಗುಡಸ್ ಪ್ರೌಢ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳಲ್ಲಿ ಉತ್ಸಾಹ ತುಂಬುವ ಕಾರ್ಯ ಮಾಡಿದರು. ಕೊರೊನಾ ಕುರಿತು ಸಕಲ ಮುನ್ನೆಚ್ಚರಿಕೆ ಕ್ರಮಗಳನ್ನ ಕೈ ಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು. ಇದನ್ನೂ ಓದಿ: ಶಾಲೆಗೆ ಆಗಮಿಸಿದ ಸಚಿವ ಸುಧಾಕರ್ಗೆ ರಾಖಿ ಕಟ್ಟಿದ ವಿದ್ಯಾರ್ಥಿನಿಯರು

ಕಳೆದ ಎರಡು ವರ್ಷಗಳಿಂದ ವಿದ್ಯಾಭ್ಯಾಸ ವಿಲ್ಲದೇ ಸಾಕಷ್ಟು ವಿದ್ಯಾರ್ಥಿಗಳು ಕಷ್ಟಪಡುವಂತಾಗಿದೆ. ಹೀಗಾಗಿ ಸರ್ಕಾರ ಇಂದಿನಿಂದ ಶಾಲೆಗಳನ್ನು ಆರಂಭ ಮಾಡಿದ್ದು ಶಾಲೆಗೆ ಬಂದು ವಿದ್ಯಾರ್ಥಿಗಳು ಜ್ಞಾನ ಪಡೆಯುವಂತೆ ಮನವಿ ಮಾಡಿಕೊಂಡರು. ಈ ಸಂದರ್ಭದಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳು, ಪೋಷಕರು, ಎಸ್ಡಿಎಂಸಿ ಸದಸ್ಯರು ಉಪಸ್ಥಿತರಿದ್ದರು.


Leave a Reply