ಉದ್ಯೋಗ ಸೃಷ್ಟಿ ಹೆಚ್ಚಿಸಲು 1.07 ಲಕ್ಷ ಕೋಟಿ ರೂ. ಯೋಜನೆಗೆ ಸಂಪುಟ ಅನುಮೋದನೆ

ನವದೆಹಲಿ: ಎಲ್ಲಾ ವಲಯಗಳಲ್ಲಿ ಉದ್ಯೋಗ ಸೃಷ್ಟಿ ಹೆಚ್ಚಿಸಲು 1.07 ಲಕ್ಷ ಕೋಟಿ ರೂ. ಯೋಜನೆಗೆ ಕೇಂದ್ರ ಸಂಪುಟ (Union Cabinet) ಅನುಮೋದನೆ ನೀಡಿದೆ.

ಉತ್ಪಾದನಾ ವಲಯದ ಮೇಲೆ ವಿಶೇಷ ಗಮನ ಹರಿಸಿ, ಎಲ್ಲಾ ವಲಯಗಳಲ್ಲಿ ಉದ್ಯೋಗ ಸೃಷ್ಟಿಗೆ ಬೆಂಬಲ ನೀಡಲು, ಉದ್ಯೋಗಾವಕಾಶ ಮತ್ತು ಸಾಮಾಜಿಕ ಭದ್ರತೆಯನ್ನು ಹೆಚ್ಚಿಸಲು 1.07 ಲಕ್ಷ ಕೋಟಿ ರೂ.ಗಳ ವೆಚ್ಚದ ಉದ್ಯೋಗ ಸಂಬಂಧಿತ ಪ್ರೋತ್ಸಾಹಕ ಯೋಜನೆಯನ್ನು ಸರ್ಕಾರ ಮಂಗಳವಾರ ಅನುಮೋದಿಸಿದೆ. ಇದನ್ನೂ ಓದಿ: ಘಾನಾದಿಂದ ಬ್ರೆಜಿಲ್‌ವರೆಗೆ – ಆಪರೇಷನ್ ಸಿಂಧೂರ, ಗ್ಲೋಬಲ್ ಸೌತ್ ಸಂಬಂಧಕ್ಕೆ ಮೋದಿ ಒತ್ತು

ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮಾಹಿತಿ ಮತ್ತು ಪ್ರಸಾರ ಸಚಿವೆ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.

ಎರಡು ವರ್ಷಗಳಲ್ಲಿ ದೇಶದಲ್ಲಿ 3.5 ಕೋಟಿಗೂ ಹೆಚ್ಚು ಉದ್ಯೋಗಗಳನ್ನು ಸೃಷ್ಟಿಸಲು ಪ್ರೋತ್ಸಾಹ ನೀಡುವ ಗುರಿಯನ್ನು ಈ ಯೋಜನೆ ಹೊಂದಿದೆ. ಇದಲ್ಲದೆ, ಈ ಯೋಜನೆಯು ಮೊದಲ ಬಾರಿಗೆ ಕೆಲಸ ಮಾಡುವ ಉದ್ಯೋಗಿಗಳಿಗೆ ಪ್ರೋತ್ಸಾಹ ನೀಡುತ್ತದೆ. ಇದನ್ನೂ ಓದಿ: ಗುಡ್‌ ನ್ಯೂಸ್‌; ವಾಣಿಜ್ಯ ಎಲ್‌ಪಿಜಿ ಗ್ಯಾಸ್‌ ಸಿಲಿಂಡರ್‌ ಬೆಲೆ ಭಾರಿ ಇಳಿಕೆ

ಮೊದಲ ಬಾರಿಗೆ ಹೆಚ್ಚುವರಿಯಾಗಿ ಕೆಲಸ ಮಾಡುವ ಪ್ರತಿ ಉದ್ಯೋಗಿಗೆ ಎರಡು ವರ್ಷಗಳವರೆಗೆ ತಿಂಗಳಿಗೆ 3,000 ರೂ.ಗಳವರೆಗೆ ಪ್ರೋತ್ಸಾಹ ಧನ ಹಾಗೂ 1 ಲಕ್ಷ ರೂ.ಗಳವರೆಗೆ ಸಂಬಳ ಪಡೆಯುವ ಉದ್ಯೋಗಿಗಳಿಗೆ ಸಂಬಂಧಿಸಿದಂತೆ ಉದ್ಯೋಗದಾತರು ಪ್ರೋತ್ಸಾಹ ಧನ ಪಡೆಯುತ್ತಾರೆ.

ಉತ್ಪಾದನಾ ವಲಯಕ್ಕೆ ಸಂಬಂಧಿಸಿದಂತೆ, ಉದ್ಯೋಗದಾತರಿಗೆ ನೀಡುವ ಪ್ರೋತ್ಸಾಹ ಧನವನ್ನು ಮೂರನೇ ಮತ್ತು ನಾಲ್ಕನೇ ವರ್ಷಗಳಿಗೂ ವಿಸ್ತರಿಸಲಾಗುವುದು.