ವಿಶ್ವದ ಅತಿ ಎತ್ತರದ ರೈಲ್ವೇ ಸೇತುವೆ ಚೀನಾಬ್‍ನ ಫೋಟೋ ಹಂಚಿಕೊಂಡ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್

ನವದೆಹಲಿ: ವಿಶ್ವದ ಅತಿ ಎತ್ತರದ ರೈಲ್ವೇ ಸೇತುವೆ ಚೀನಾಬ್ ಸೇತುವೆಯ ಫೋಟೋಗಳನ್ನು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ‘ಮೋಡಗಳ ಮೇಲಿನ ವಿಶ್ವದ ಅತಿ ಎತ್ತರದ ಕಮಾನು ಚೀನಾಬ್ ಸೇತುವೆ’ ಎಂಬ ಶೀರ್ಷಿಕೆಯಡಿ ಫೋಟೊವನ್ನು ಹಂಚಿಕೊಂಡಿದ್ದಾರೆ.

ಫೋಟೋದಲ್ಲಿ ಪರ್ವತಗಳ ಹಿನ್ನೆಲೆಯಲ್ಲಿ ಎತ್ತರವಾಗಿ ನಿಂತಿರುವಂತೆ ಸೇತುವೆಯು ಮೋಡಗಳ ಮೇಲೆ ಕಮಾನುಗಳಾಗಿ ಕಾಣುತ್ತದೆ. ಚೀನಾಬ್ ರೈಲು ಸೇತುವೆಯು ಜಮ್ಮು-ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಬಕ್ಕಲ್ ಮತ್ತು ಕೌರಿ ನಡುವೆ ಇದೆ. ಇದು 1,315 ಮೀಟರ್ ಉದ್ದ ಮತ್ತು ನದಿಯಿಂದ 359 ಮೀಟರ್ ಎತ್ತರದಲ್ಲಿದೆ. ಇದು ಫ್ರಾನ್ಸ್‌ನ ಪ್ಯಾರಿಸ್‍ನಲ್ಲಿರುವ ಐಫೆಲ್ ಟವರ್‌ಗಿಂತ 35 ಮೀಟರ್ ಎತ್ತರದಲ್ಲಿದೆ. ಇದನ್ನೂ ಓದಿ: ನಾನು ಭಯ ಯಾಕೆ ಪಡಬೇಕು, ಧರ್ಮ ಪಾಲನೆ ಮಾಡಿದ್ದೇನೆ: ಮಂಡ್ಯ ವಿದ್ಯಾರ್ಥಿನಿ

ಈ ಸೇತುವೆಯು ಕಾಶ್ಮೀರ ಕಣಿವೆಗೆ ಸಂಪರ್ಕವನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರಾ ಅಭಿಪ್ರಾಯಪಟ್ಟಿದ್ದಾರೆ. ಈ ನಡುವೆ ಚೀನಾಬ್ ಸೇತುವೆಯ ಅತ್ಯಾಕರ್ಷಕ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ನೆಟ್ಟಿಗರು ಅಚ್ಚರಿ ವ್ಯಕ್ತಪಡಿಸುತ್ತಿದ್ದಾರೆ. ಇದನ್ನೂ ಓದಿ: ಶಿಕ್ಷಣ ಸಂಸ್ಥೆಗಳಲ್ಲಿ 200 ಮೀಟರ್ ವ್ಯಾಪ್ತಿಯಲ್ಲಿ ಪ್ರತಿಭಟನೆಗೆ ನಿಷೇಧ: ಕಮಲ್ ಪಂತ್

Comments

Leave a Reply

Your email address will not be published. Required fields are marked *