ಉದ್ಧವ್ ಠಾಕ್ರೆ ವಿರುದ್ಧ ಹೇಳಿಕೆ – ಕೇಂದ್ರ ಸಚಿವ ನಾರಾಯಣ ರಾಣೆ ಅರೆಸ್ಟ್

ಮುಂಬೈ: ಕೇಂದ್ರ ಕೈಗಾರಿಕೆ, ಬಂದರು ಖಾತೆಯ ಸಚಿವ ನಾರಾಯಣ ರಾಣೆ ಅವರನ್ನು ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದಾರೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಕಪಾಳಕ್ಕೆ ಬಾರಿಸುತ್ತಿದ್ದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ನಾರಾಯಣ ರಾಣೆ ಅವರನ್ನು ರತ್ನಗಿರಿ ಪೊಲೀಸರು  ಮಂಗಳವಾರ ಬಂಧಿಸಿದ್ದಾರೆ.

ನಾನು ಸಿಎಂ ವಿರುದ್ಧ ಹೇಳಿಕೆ ನೀಡುವ ಮೂಲಕ ಯಾವುದೇ ಅಪರಾಧ ಮಾಡಿಲ್ಲ ಎಂದು ರಾಣೆ ಅವರು ಸಿಎಂ ವಿರುದ್ಧ ನೀಡಿದ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಇದನ್ನೂ ಓದಿ: 6 ಲಕ್ಷ ಕೋಟಿ ಸಂಗ್ರಹ ಗುರಿ – ಖಾಸಗಿಯವರಿಗೆ ಸಿಗಲಿದೆ ರೈಲು, ರಸ್ತೆ, ಗಣಿ 

ಸೋಮವಾರ ರಾಯಗಡದಲ್ಲಿ ನಡೆದ ಜನಾಶೀರ್ವಾದ ಯಾತ್ರೆಯಲ್ಲಿ ನಾರಾಯಣ ರಾಣೆ, ದೇಶಕ್ಕೆ ಸ್ವಾತಂತ್ರ್ಯ ಲಭಿಸಿದ್ದು ಯಾವ ವರ್ಷ ಎಂಬುದನ್ನು ತಿಳಿಯದ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಕಪಾಳಕ್ಕೆ ಬಾರಿಸುತ್ತಿದ್ದೆ ಎಂದು ಹೇಳಿಕೆ ನೀಡಿದ್ದರು. ಇದನ್ನೂ ಓದಿ:  ತಾಲಿಬಾನಿಗಳ ಮೇಲೆ ಗುಂಡಿನ ಮಳೆ – ನಾರ್ಥರ್ನ್ ಅಲಯನ್ಸ್‌ಗೆ ತಜಕಿಸ್ತಾನ ಬೆಂಬಲ

https://twitter.com/ANI/status/1430127979997188107

ಆಗಸ್ಟ್ 15ರಂದು ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಧ್ವಜಾರೋಹಣ ನಡೆಸಿ ಭಾಷಣ ಮಾಡಿದ್ದರು. ಈ ವೇಳೆ ಭಾರತಕ್ಕೆ ಸ್ವಾತಂತ್ರ್ಯ ಪಡೆದ ವರ್ಷವನ್ನು ಪಕ್ಕದವರಿಂದ ಕೇಳಿ ತಿಳಿದುಕೊಂಡು ಹೇಳಿದ್ದರು. ಈ ವಿಚಾರವನ್ನು ಪ್ರಸ್ತಾಪಿಸಿ ರಾಣೆ ಹೇಳಿಕೆ ನೀಡಿದ್ದರು.

ಈ ಹೇಳಿಕೆಯ ಬೆನ್ನಲ್ಲೇ ರಾಯಗಢ, ಪುಣೆ, ನಾಸಿಕ್‍ನಲ್ಲಿ ನಾರಾಯಣ ರಾಣೆ ವಿರುದ್ಧ ಎಫ್‍ಐಆರ್ ದಾಖಲಾಗಿತ್ತು.

Comments

Leave a Reply

Your email address will not be published. Required fields are marked *