1200 ಕೋಟಿ ರೂ. ವೆಚ್ಚದ ಶಿರಾಡಿ ಘಾಟ್ ಚತುಷ್ಪಥ ರಸ್ತೆಗೆ ಕೇಂದ್ರ ಅನುಮೋದನೆ

ಬೆಂಗಳೂರು: ದ್ವಿಪಥವಿರುವ ಶಿರಾಡಿ ಘಾಟ್ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ 1200 ಕೋಟಿ ರೂ.ಗಳ ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲು ಕೇಂದ್ರ ರಾಷ್ಟ್ರೀಯ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅನುಮೋದನೆ ನೀಡಿದ್ದಾರೆ.

ಎನ್‍ಹೆಚ್‍ಎಐ ವತಿಯಿಂದ ಕಾಮಗಾರಿಯನ್ನು ಕೈಗೆತ್ತಿಕೊಂಡು 2 ವರ್ಷಗಳ ಅವಧಿಯಲ್ಲಿ ಪೂರ್ಣಗೊಳಿಸುವುದಾಗಿ ನಿತಿನ್ ಗಡ್ಕರಿ ಅವರು ತಿಳಿಸಿದ್ದಾರೆ. ರಾಜ್ಯ ಸರ್ಕಾರವು ಅಗತ್ಯವಿರುವ ಎಲ್ಲ ಸಹಕಾರ ಹಾಗೂ ಅನುಮೋದನೆಗಳನ್ನು ನೀಡುವುದಾಗಿ ಸಿಎಂ ಬೊಮ್ಮಾಯಿ ಭರವಸೆ ಕೊಟ್ಟಿದ್ದಾರೆ. ಇದನ್ನೂ ಓದಿ: ಹಾವೇರಿಯಲ್ಲಿ ಹಳೆಯ ಕಾಲದ ಹ್ಯಾಂಡ್ ಗ್ರೆನೇಡ್ ಪತ್ತೆ

Nitin Gadkari

ಶಿರಾಡಿ ಘಾಟ್ ಹೆದ್ದಾರಿಯನ್ನು ತಕ್ಷಣ ಮೇಲ್ದರ್ಜೆಗೇರಿಸಬೇಕಾಗಿದೆ. ಮಳೆಗಾಲದ ಸಮಯದಲ್ಲಿ ಈ ರಸ್ತೆ ಬಳಕೆ ಅಸಾಧ್ಯ ಎಂಬ ಸ್ಥಿತಿ ನಿರ್ಮಾಣವಾಗುತ್ತದೆ. ಆದ್ದರಿಂದ ಈ ದ್ವಿಪಥ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ ಮಾಡಲು ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ.

ಬೆಂಗಳೂರು ಮತ್ತು ಮಂಗಳೂರಿನ ಸಂಪೂರ್ಣ ಮಾರ್ಗ ಏಕರೀತಿಯ ಚತುಷ್ಪಥ ರಸ್ತೆಯಾಗಲಿದೆ. ಪರಿಸರ ಹಾಗೂ ಆರ್ಥಿಕ ದೃಷ್ಟಿಯಿಂದ ಸುಸ್ಥಿರ ರೀತಿಯಲ್ಲಿ ಎನ್.ಹೆಚ್ 75 ನ್ನು ಚತುಷ್ಪಥವಾಗಿಸುವ ಮೂಲಕ ಅತ್ಯಂತ ವೇಗವಾಗಿ ಅಭಿವೃದ್ಧಿಗೊಳಿಸಬಹುದಾಗಿದೆ. ಇದನ್ನೂ ಓದಿ: ಕಾಲೇಜುಗಳಿಗೆ ಹಣ ಬಿಡುಗಡೆ ಮಾಡಿ – ದೆಹಲಿ ಸರ್ಕಾರದ ವಿರುದ್ಧ ತಿರುಗಿಬಿದ್ದ ಶಿಕ್ಷಕರು

ಶಿರಾಡಿ ಘಾಟ್ ಮೂಲಕ ಷಟ್ಪಥ ಸುರಂಗ ಮಾರ್ಗ ನಿರ್ಮಿಸುವ ಬಗ್ಗೆ ಅಧ್ಯಯನ ಕೈಗೊಳ್ಳಲು ಎನ್‍ಹೆಚ್‍ಎಐ ಗೆ ಕೇಂದ್ರ ಸಚಿವರು ಸೂಚಿದ್ದಾರೆ.

Comments

Leave a Reply

Your email address will not be published. Required fields are marked *