ಅಕಾಲಿಕ ಮಳೆಗೆ ಮಹಾರಾಷ್ಟ್ರದಲ್ಲಿ 5 ಸಾವು- ಹಿಮಾಚಲ ಪ್ರದೇಶದಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ನವದೆಹಲಿ: ಅಕಾಲಿಕ ಮಳೆಗೆ ಐವರು ಮೃತಪಟ್ಟು, 23 ಜನ ಗಾಯಗೊಂಡ ಘಟನೆ ಮಹಾರಾಷ್ಟ್ರದ (Maharashtra) ಪರ್ಭಾನಿಯ ಜಿಲ್ಲೆಯಲ್ಲಿ ನಡೆದಿದೆ ಎಂದು ಸ್ಥಳೀಯ ಆಡಳಿತ ತಿಳಿಸಿದೆ.

ಹವಾಮಾನ ವೈಪರೀತ್ಯದಿಂದಾಗಿ ದೇಶದ ಕೆಲವೆಡೆ ಅಕಾಲಿಕ ಮಳೆಯಾಗುತ್ತಿದೆ. ಮರಾಠವಾಡ (Marathwada) ಪ್ರದೇಶದ ಎಂಟು ಜಿಲ್ಲೆಗಳಲ್ಲಿ 2.4 ಮಿ.ಮೀ ಮಳೆ ದಾಖಲಾಗಿದೆ. ಆಲಿಕಲ್ಲು (Hailstorms) ಮಳೆಯಿಂದಾಗಿ 4,950 ಹೆಕ್ಟೇರ್ ಜಾಗದಲ್ಲಿ ಬೆಳೆದಿದ್ದ ಬೆಳೆ ನಾಶವಾಗಿದೆ. 25 ಪ್ರಾಣಿಗಳು ಸಾವಿಗೀಡಾಗಿವೆ. ಇದನ್ನೂ ಓದಿ: ಭದ್ರತಾ ಪಡೆಯಿಂದ ಉಗ್ರರ ಮೇಲೆ ಗುಂಡಿನ ದಾಳಿ

ರಾಜಸ್ಥಾನದಲ್ಲಿ (Rajasthan) ಶುಕ್ರವಾರ ಸಂಜೆ ಪ್ರತ್ಯೇಕ ಘಟನೆಯಲ್ಲಿ ಸಿಡಿಲಿಗೆ ಇಬ್ಬರು ಬಲಿಯಾಗಿದ್ದಾರೆ. ನಾಗೌರ್‌ನ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಶೋಕೀನ್ ಖಾನ್ ಎಂಬವರು ಸಿಡಿಲಿಗೆ ಬಲಿಯಾಗಿದ್ದಾರೆ. ಪಾಲಿಯಲ್ಲಿ ಮಳೆಯಿಂದ ರಕ್ಷಣೆ ಪಡೆಯಲು ಮರದ ಕೆಳಗೆ ನಿಂತಿದ್ದ ಮೂವರು ವ್ಯಕ್ತಿಗಳಿಗೆ ಸಿಡಿಲು ಬಡಿದು ಓರ್ವ ಮೃತಪಟ್ಟು, ಇಬ್ಬರು ಗಾಯಗೊಂಡು ಚಿಕಿತ್ಸೆಗೆ ದಾಖಲಾಗಿದ್ದಾರೆ ಎಂದು ಸ್ಥಳೀಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹಿಮಾಚಲ ಪ್ರದೇಶದ (Himachal Pradesh) 10 ಜಿಲ್ಲೆಗಳಲ್ಲಿ ಮಾ. 18 ರಿಂದ 20ರವರೆಗೆ ಗುಡುಗು, ಮಿಂಚು ಸಹಿತ ಆಲಿಕಲ್ಲು ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ (Yellow alert) ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ (Meteorological Department) ತಿಳಿಸಿದೆ. ಇದನ್ನೂ ಓದಿ: ಸಿದ್ದಾಪುರದಲ್ಲಿ ಮನೆಯಂಗಳಕ್ಕೆ ನುಗ್ಗಿ ನಾಯಿಯನ್ನು ಹೊತ್ತೊಯ್ದ ಚಿರತೆ- ಸಿಸಿಟಿವಿಯಲ್ಲಿ ಸೆರೆ

Comments

Leave a Reply

Your email address will not be published. Required fields are marked *