ವೈದ್ಯನ ಮಗನನ್ನೇ ಕಿಡ್ನಾಪ್ ಮಾಡಿ ಹತ್ಯೆಗೈದ ನೌಕರರು

crime

ಲಕ್ನೋ: ಕಳೆದ ಎರಡು ದಿನಗಳಿಂದ ನಾಪತ್ತೆಯಾಗಿದ್ದ ವೈದ್ಯರೊಬ್ಬರ ಎಂಟು ವರ್ಷದ ಮಗ ಶವವಾಗಿ ಪತ್ತೆಯಾಗಿರುವುದಾಗಿ ಬುಲಂದ್‍ಶಹರ್ ಪೊಲೀಸರು ತಿಳಿಸಿದ್ದಾರೆ

ಆರೋಪಿಗಳನ್ನು ನಿಜಾಮ್ ಮತ್ತು ಶಾಹಿದ್ ಎಂದು ಗುರುತಿಸಲಾಗಿದ್ದು, ಆರೋಪಿಗಳಿಂದ ಪೊಲೀಸರು ಶವವನ್ನು ವಶಪಡಿಸಿಕೊಂಡಿದ್ದಾರೆ. ವೈದ್ಯ ಶುಕ್ರವಾರ ಸಂಜೆ ತನ್ನ ಮಗ ನಾಪತ್ತೆಯಾಗಿರುವುದಾಗಿ ಪೊಲೀಸರಿಗೆ ದೂರು ನೀಡಿದ್ದಾರೆ. ಇದನ್ನೂ ಓದಿ: ಬಜೆಟ್‌ನಲ್ಲಿ ಮಧ್ಯಮ ವರ್ಗದವರಿಗೆ ತೆರಿಗೆ ವಿನಾಯಿತಿ ಇಲ್ಲ: ಶಶಿ ತರೂರ್‌

ನಂತರ ಘಟನೆ ಕುರಿತಂತೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಈ ವೇಳೆ ವೈದ್ಯರ ಬಳಿ ಕಾಂಪೌಂಡರ್‍ಗಳಾಗಿ ಕೆಲಸ ಮಾಡುತ್ತಿದ್ದ ಇಬ್ಬರು ಮಾಜಿ ಉದ್ಯೋಗಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಆರೋಪಿಗಳು ಮಗುವನ್ನು ಕಿಡ್ನಾಪ್ ಮಾಡಿ ಹತ್ಯೆಗೈದಿರುವುದಾಗಿ ಒಪ್ಪಿಕೊಂಡಿದ್ದಾರೆ.

ಎರಡು ವರ್ಷದ ಹಿಂದೆ ಕೆಲಸದಲ್ಲಿ ತಪ್ಪು ಮಾಡಿದ್ದರಿಂದ ಇಬ್ಬರನ್ನು ವೈದ್ಯರು ವಜಾಗೊಳಿಸಿದ್ದರು. ಈ ವಿಚಾರವಾಗಿ ಸೇಡು ತೀರಿಸಿಕೊಳ್ಳುವ ಸಲುವಾಗಿ ವೈದ್ಯನ ಮಗನನ್ನು ಅಪಹರಿಸಿ ಕೃತ್ಯವೆಸಗಿದ್ದಾರೆ ಎಂದು ದೇಬಾಯಿಯ ವೃತ್ತ ಅಧಿಕಾರಿ ವಂದನಾ ಶರ್ಮಾ ತಿಳಿಸಿದ್ದಾರೆ. ಇದನ್ನೂ ಓದಿ:  ದೇಶದ ಆರ್ಥಿಕತೆಗೆ ಬೂಸ್ಟರ್ ಡೋಸ್ ನೀಡುವ ಬಜೆಟ್: ಶಶಿಕಲಾ ಜೊಲ್ಲೆ

Comments

Leave a Reply

Your email address will not be published. Required fields are marked *