ಭಯೋತ್ಪಾದಕ ಒಸಾಮಾನನ್ನು ʼಜೀʼ ಎನ್ನುತ್ತಿದ್ದರು: ಕಾಂಗ್ರೆಸ್‌, ಎಸ್‌ಪಿ ವಿರುದ್ಧ ಮೋದಿ ಆರೋಪ

ಲಕ್ನೋ: ಸಮಾಜವಾದಿ ಪಾರ್ಟಿ ಹಾಗೂ ಕಾಂಗ್ರೆಸ್‌ ಪಕ್ಷದ ನಾಯಕರು, ಉಗ್ರರ ಮೇಲೆ ಮೃದು ಧೋರಣೆ ಹೊಂದಿವೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.

ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆ ಹಿನ್ನೆಲೆ ಹಾರ್ಡೋಯಿಯಲ್ಲಿ ಆಯೋಜಿಸಿದ್ದ ರ‍್ಯಾಲಿಯಲ್ಲಿ ಮಾತನಾಡಿದ ಪ್ರಧಾನಿ, ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್‌ ನಾಯಕರ ವರ್ತನೆ ಇನ್ನಷ್ಟು ಆತಂಕಕಾರಿಯಾಗಿದೆ. ಇವರು ಒಸಾಮಾ ಅವರಂತಹ ಭಯೋತ್ಪಾದಕರನ್ನು ʼಜೀʼ ಎಂದು ಸಂಬೋಧಿಸುತ್ತಾರೆ. ಬಾಟ್ಲಾ ಹೌಸ್‌ ಎನ್‌ಕೌಂಟರ್‌ನಲ್ಲಿ ಭಯೋತ್ಪಾದಕರ ನಿರ್ಮೂಲನೆಗಾಗಿ ಇವರು ಕಣ್ಣೀರು ಹಾಕಿದರು ಎಂದು ಗಂಭೀರ ಆರೋಪ ಮಾಡಿದ್ದಾರೆ. ಇದನ್ನೂ ಓದಿ: ಚುನಾವಣೆ ನಂತರ ಪಂಜಾಬ್‌ನಲ್ಲಿ ಕಾಂಗ್ರೆಸ್ ನಿರ್ನಾಮ: ಅಮರಿಂದರ್ ಸಿಂಗ್

2008ರ ಅಹಮದಾಬಾದ್‌ ಸರಣಿ ಸ್ಫೋಟದಲ್ಲಿ 56 ಮಂದಿ ಸಾವನ್ನಪ್ಪಿದ್ದು, 200ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ನೆನಪಿಸಿಕೊಂಡ ಮೋದಿ, ಕೆಲವು ಪಕ್ಷಗಳು ಭಯೋತ್ಪಾಕರ ಬಗ್ಗೆ ಸಹಾನುಭೂತಿ ಹೊಂದಿವೆ ಎಂದು ಕುಟುಕಿದ್ದಾರೆ.

ಉತ್ತರ ಪ್ರದೇಶದಲ್ಲಿ ನಡೆದಿದ್ದ 14 ಭಯೋತ್ಪಾದಕ ದಾಳಿ ಪ್ರಕರಣಗಳಲ್ಲಿ ಆಗಿನ ಸಮಾಜವಾದಿ ಸರ್ಕಾರ ಹಲವು ಭಯೋತ್ಪಾದಕರ ಮೇಲಿನ ಪ್ರಕರಣಗಳನ್ನು ಹಿಂಪಡೆಯಲು ಆದೇಶ ನೀಡಿತ್ತು. ಈ ಭಯೋತ್ಪಾದಕರು ಸ್ಫೋಟದ ಮೇಲೆ ಸ್ಫೋಟಗಳನ್ನು ನಡೆಸುತ್ತಿದ್ದಾರೆ. ಅಂತಹವರ ಮೇಲೆ ಕ್ರಮ ಜರುಗಿಸಲು ಸಮಾಜವಾದಿ ಪಕ್ಷ ಬಿಡುತ್ತಿಲ್ಲ ಎಂದು ದೂರಿದ್ದಾರೆ. ಇದನ್ನೂ ಓದಿ:  ಪಂಜಾಬ್ ರಾಜ್ಯವನ್ನು ಇಷ್ಟ ಪಡುವವರು, ಮಾಫಿಯಾ ನಡುವಿನ ಚುನಾವಣೆ ಸ್ಪರ್ಧೆಯಾಗಿದೆ: ಸಿಧು

ಅಖಿಲೇಶ್‌ ಯಾದವ್‌ ಅವರ ಪಕ್ಷವು ಪಾಕಿಸ್ತಾನ ಮತ್ತು ಮಹಮ್ಮದ್‌ ಅಲಿ ಜಿನ್ನಾ ಅವರ ಬೆಂಬಲಿಗರು ಎಂದು ಚುನಾವಣಾ ಪ್ರಚಾರದ ಪೂರ್ವದಲ್ಲಿ ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಆರೋಪಿಸಿದ್ದರು. ಎಸ್‌ಪಿ ಮುಖ್ಯಸ್ಥ ಮುಲಾಯಂ ಸಿಂಗ್‌ ಯಾದವ್‌ ಅವರನ್ನು ʼಮೌಲಾನಾ ಮುಲಾಯಂʼ ಎಂದು ಬಿಜೆಪಿ ನಾಯಕರು ಕರೆದಿದ್ದರು. ಇದನ್ನೂ ಓದಿ: ತೃಣಮೂಲ ಕಾಂಗ್ರೆಸ್ ಹಿರಿಯ ನಾಯಕ ಸಾಧನ್ ಪಾಂಡೆ ಇನ್ನಿಲ್ಲ

Comments

Leave a Reply

Your email address will not be published. Required fields are marked *