ಜೈ ಶ್ರೀರಾಮ್ ಘೋಷಣೆ ಕೂಗುವಂತೆ ಮರಕ್ಕೆ ಕಟ್ಟಿ ಹಾಕಿ ಮುಸ್ಲಿಂ ವ್ಯಕ್ತಿಗೆ ಥಳಿತ

ಲಕ್ನೋ: ವ್ಯಕ್ತಿಯೊಬ್ಬನ ತಲೆ ಬೋಳಿಸಿ ಮರಕ್ಕೆ ಕಟ್ಟಿ ಹಾಕಿ ಜೈ ಶ್ರೀರಾಮ್ ಘೋಷಣೆ ಕೂಗುವಂತೆ ಒತ್ತಾಯಿಸಿ ಥಳಿಸಿದ್ದ ಇಬ್ಬರು ಆರೋಪಿಗಳನ್ನು ಉತ್ತರ ಪ್ರದೇಶದ ಬುಲಂದ್‍ಶಹರ್‌ನಲ್ಲಿ (Bulandshahr) ಪೊಲೀಸರು ಬಂಧಿಸಿದ್ದಾರೆ. ಅಲ್ಲದೇ ಹಲ್ಲೆಗೊಳಗಾದ ಸಂತ್ರಸ್ತನನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳನ್ನು ಗಜೇಂದ್ರ, ಸೌರಭ್ ಮತ್ತು ಧನ್ನಿ ಎಂದು ಗುರುತಿಸಲಾಗಿದೆ. ಇದರಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಆರೋಪಿಗಳು ಕಳ್ಳತನದ ಶಂಕೆಯಲ್ಲಿ ಮುಸ್ಲಿಂ (Muslim) ಕಾರ್ಮಿಕನನ್ನು ಮರಕ್ಕೆ ಕಟ್ಟಿ ಥಳಿಸಿದ್ದಾರೆ. ಅಲ್ಲದೇ ಇದನ್ನು ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದೆ. ಸಂತ್ರಸ್ತನನ್ನು ಸಾಹಿಲ್ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಭಾರತೀಯ ಸೇನೆಗಾಗಿ ಮಹಿಂದ್ರಾ ಗ್ರೂಪ್‍ನಿಂದ ನೂತನ ಶಸ್ತ್ರಸಜ್ಜಿತ ವಾಹನ ನಿರ್ಮಾಣ

ಅಲ್ಲದೇ ಘಟನೆಯ ನಂತರ ಸಾಹಿಲ್‍ನನ್ನು ಸಹ ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ ಹಲ್ಲೆ ನಡೆಸಿದ ಆರೋಪಿಗಳೊಂದಿಗೆ ರಾಜಿ ಮಾಡಿಕೊಳ್ಳುವಂತೆ ಪೊಲೀಸರು ಬೆದರಿಕೆ ಹಾಕುತ್ತಿದ್ದಾರೆ ಎಂದು ಆತನ ತಂದೆ ಶಕೀಲ್ ಆರೋಪಿಸಿದ್ದಾರೆ.

ಉತ್ತರ ಪ್ರದೇಶದ (Uttar Pradesh) ಪೊಲೀಸರ ನಡೆಯನ್ನು ತೀವ್ರವಾಗಿ ಖಂಡಿಸಿರುವ ಸಂಸದ ಅಸಾದುದ್ದೀನ್ ಓವೈಸಿ (Asaduddin Owaisi) ವೀಡಿಯೊವನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೇ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಬದಲು ಸಾಹಿಲ್‍ನನ್ನು ಬಂಧಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಮೀನು ಹಿಡಿಯಲು ತೆರಳಿದ್ದ ಮೂವರು ಬಾಲಕರು ನೀರುಪಾಲು