ದೆಹಲಿಯಲ್ಲಿ ಹನುಮ ಜಯಂತಿ ವೇಳೆ ಹಿಂಸಾಚಾರ – ಯುಪಿಯಲ್ಲಿ ಕಟ್ಟೆಚ್ಚರ

ಲಕ್ನೋ: ನೈರುತ್ಯ ದೆಹಲಿಯ ಜಹಂಗಿರ್‌ಪುರಿಯಲ್ಲಿ ಹನುಮ ಜಯಂತಿ ಆಚರಣೆ ವೇಳೆ ನಡೆದ ಹಿಂಸಾಚಾರ ಪ್ರಕರಣವು ದೇಶಾದ್ಯಂತ ಆತಂಕ ಮೂಡಿಸಿದೆ. ಈ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.

ದೆಹಲಿಯ ಜಹಾಂಗೀರ್‌ಪುರಿ ಘಟನೆಯ ನಂತರ ರಾಜ್ಯದಲ್ಲಿ ಆಯಾ ಜಿಲ್ಲೆಗಳ ಸೂಕ್ಷ್ಮ ಪ್ರದೇಶಗಳ ಮೇಲೆ ತೀವ್ರ ನಿಗಾ ವಹಿಸಲು ಹಿರಿಯ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಉತ್ತರ ಪ್ರದೇಶದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಪ್ರಶಾಂತ್ ಕುಮಾರ್ ಹೇಳಿದ್ದಾರೆ. ಇದನ್ನೂ ಓದಿ: ದೆಹಲಿಯಲ್ಲಿ ಹನುಮಜಯಂತಿ ಶೋಭಾಯಾತ್ರೆ ವೇಳೆ ಕಲ್ಲು ತೂರಾಟ, ಹಿಂಸಾಚಾರ

ಅಧಿಕಾರಿಗಳು, ವಿಶೇಷವಾಗಿ ದೆಹಲಿಯ ಗಡಿಭಾಗದ ಜಿಲ್ಲೆಗಳಲ್ಲಿ, ರಾಜ್ಯದಲ್ಲಿ ಎಲ್ಲಿಯಾದರೂ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ.

POLICE JEEP

ಎಲ್ಲಾ ವಲಯಗಳಲ್ಲೂ ಸಂಬಂಧಪಟ್ಟ ಅಧಿಕಾರಿಗಳ ನೇತೃತ್ವದಲ್ಲಿ ತೀವ್ರ ಕಟ್ಟೆಚ್ಚರ ವಹಿಸಬೇಕು. ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವಂತಹ ಘಟನೆಗಳಿಗೆ ಆಸ್ಪದ ನೀಡದಂತೆ ನೋಡಿಕೊಳ್ಳಬೇಕು ಎಂದು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಹನುಮಾನ್ ಮೆರವಣಿಗೆಗೆ ಪುಷ್ಪವೃಷ್ಟಿ ಸುರಿಸಿದ ಮುಸ್ಲಿಮರು

Comments

Leave a Reply

Your email address will not be published. Required fields are marked *