ಕಾರಿನಲ್ಲಿ ತೆರಳುತ್ತಿದ್ದಾಗ ಮಹಿಳೆಗೆ ಡ್ರಗ್ಸ್‌ ನೀಡಿ ಅತ್ಯಾಚಾರ- ಸೇನಾ ಸಿಬ್ಬಂದಿ ಅರೆಸ್ಟ್‌

ಲಕ್ನೋ: ಮಥುರಾದಲ್ಲಿ 21 ವರ್ಷದ ಮಹಿಳೆಗೆ ಡ್ರಗ್ಸ್‌ ನೀಡಿ, ಆಕೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಸೇನಾ ಸಿಬ್ಬಂದಿಯನ್ನು ಬಂಧಿಸಲಾಗಿದೆ.

ಆರೋಪಿ ತೇಜ್‌ವೀರ್‌ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ನ.23ರಂದು ಈ ಘಟನೆ ನಡೆದಿದೆ. ಸಾಮಾಜಿಕ ಮಾಧ್ಯಮದಲ್ಲಿ ಸ್ನೇಹಿತನಾಗಿ ಪರಿಚಯವಾಗಿ ನಂತರ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ಇದನ್ನೂ ಓದಿ: ಸರ್ಕಾರಿ ಕಚೇರಿ, ಮಾಲ್, ಹೋಟೆಲ್‍ಗಳಲ್ಲಿ ಕೆಲಸ ಮಾಡೋರಿಗೆ ಎರಡು ಡೋಸ್ ಕಡ್ಡಾಯ: ಆರ್. ಅಶೋಕ್

ಮಥುರಾ ಕಡೆಗೆ ಕಾರಿನಲ್ಲಿ ತೆರಳುತ್ತಿದ್ದಾಗ ನನ್ನ ಮೇಲೆ ತೇಜ್‌ವೀರ್‌ ಅತ್ಯಾಚಾರ ನಡೆಸಿದ್ದಾನೆ. ಆತನ ಸ್ನೇಹಿತ ದಿಗಂಬರ್‌ ನನ್ನ ಮೇಲೆ ದೌರ್ಜನ್ಯ ನಡೆಸಿದ್ದಾನೆ. ನಂತರ ಕೋಸಿ ಕಲನ್‌ ಪ್ರದೇಶದ ಬಳಿ ನನ್ನನ್ನು ಕಾರಿನಿಂದ ಕೆಳಗಿಳಿಸಿ ಪರಾರಿಯಾಗಿದ್ದರು ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರೂ ಆರೋಪಿಗಳನ್ನು ಬಂಧಿಸಿದ್ದಾರೆ. ಅಲ್ಲದೇ ಆರೋಪಿಗಳ ಫೇಸ್‌ಬುಕ್‌ ಮತ್ತು ಇತರೆ ಸಾಮಾಜಿಕ ಮಾಧ್ಯಮಗಳ ಖಾತೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಏರ್‌ಸೆಲ್‌ ಮ್ಯಾಕ್ಸಿಸ್‌ ಪ್ರಕರಣ- ಮಾಜಿ ಸಚಿವ ಪಿ.ಚಿದಂಬರಂ, ಪುತ್ರನಿಗೆ ಸಮನ್ಸ್‌

ಇತ್ತೀಚೆಗೆ ಸಂಭವಿಸಿದ ಅಪಘಾತವೊಂದರಲ್ಲಿ ತಂದೆಯನ್ನು ಕಳೆದುಕೊಂಡು ಕಂಗಾಲಾಗಿರುವ ಸಂತ್ರಸ್ತೆ ಕುಟುಂಬಕ್ಕೆ ಸಾಧ್ಯವಾದಷ್ಟು ನೆರವು ನೀಡಲಾಗುವುದು ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್‌ ನವೀನ್‌ ಚಹಾಲ್‌ ತಿಳಿಸಿದ್ದಾರೆ. ಸಂತ್ರಸ್ತೆಗೆ ಯುಪಿ ರಾಣಿ ಲಕ್ಷ್ಮೀಬಾಯಿ ಮಹಿಳಾ ಏವಂ ಬಾಲ್‌ ಕಲ್ಯಾಣ್‌ ಕೋಶ್‌ ಯೋಜನೆಯಡಿ 7 ಲಕ್ಷ ರೂ. ಹಾಗೂ ಮುಖ್ಯಮಂತ್ರಿ ಕೃಷಕ್‌ ದುರ್ಘಟನ ಕಲ್ಯಾಣ್‌ ಯೋಜನೆಯಡಿ 5 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಹೇಳಿದ್ದಾರೆ.

ಸಂತ್ರಸ್ತೆ ಕುಟುಂಬದವರಿಗೆ ಆರ್ಥಿಕ ನೆರವು ನೀಡುವ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ. ಅಲ್ಲದೇ ಅವರಿಗೆ ಶೀಘ್ರವೇ ನ್ಯಾಯ ಒದಗಿಸುವ ಕೆಲಸ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ.

Comments

Leave a Reply

Your email address will not be published. Required fields are marked *