ನಿಯಂತ್ರಣ ತಪ್ಪಿ ಟ್ರಕ್‌ಗೆ ಕಾರು ಡಿಕ್ಕಿ- 6 ಮಂದಿ ದುರ್ಮರಣ

ಲಕ್ನೋ: ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ದಾರುಣವಾಗಿ ಮತಪಟ್ಟ ಘಟನೆ ಉತ್ತರ ಪ್ರದೇಶದ (Uttar Pradesh) ದೆಹಲಿ-ಲಕ್ನೋ ಹೆದ್ದಾರಿಯಲ್ಲಿ ನಡೆದಿದೆ.

ಹಾಪುರ್‌ನ ಗರ್ಹ್ ಕೊಟ್ವಾಲಿ ಪ್ರದೇಶದಲ್ಲಿರುವ ಬ್ರಜ್‌ಘಾಟ್ ಟೋಲ್ ಪ್ಲಾಜಾ ಬಳಿ ಸಂಭವಿಸಿದ ಈ ಘಟನೆಯಲ್ಲಿ ಓರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ. ಇದನ್ನೂ ಓದಿ: ಬುರ್ಖಾ ತೆಗೆದು ವೋಟರ್‌ ಐಡಿ ತೋರಿಸಲು ಹೇಳಿದ ಮಾಧವಿ ಲತಾ ವಿರುದ್ಧ ಪ್ರಕರಣ ದಾಖಲು

ಈ ಸಂಬಂಧ ಸಿಎಚ್‌ಸಿ ಗರಮುಕ್ತೇಶ್ವರ ಡಾ.ಸುಜೀತ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ಘಟನಯಲ್ಲಿ ಸಾವನ್ನಪ್ಪಿದ 6 ಮಂದಿಯ ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಹತ್ತಿರದ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಹೇಳಿದರು.

ಮಧ್ಯರಾತ್ರಿ 12.30ರ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ವರ್ಮಾ ತಿಳಿಸಿದ್ದಾರೆ. ಮೃತರ ಗುರುತು ಪತ್ತೆ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದರು.