ಹೋಟೆಲಿನಲ್ಲಿ‌ ನಾಲ್ವರು ಕಾಮುಕರಿಂದ ಗ್ಯಾಂಗ್‌ರೇಪ್‌ – ಸಹಾಯಕ್ಕಾಗಿ ಕಣ್ಣೀರಿಟ್ಟ ಸಂತ್ರಸ್ತೆ, ಐವರು ಅರೆಸ್ಟ್

ಆಗ್ರಾ: ನಾಲ್ವರು ಕಾಮುಕರು ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ (Gang Rape) ಎಸಗಿದ ಘಟನೆ ಉತ್ತರ ಪ್ರದೇಶದ (Uttar Pradesh) ಆಗ್ರಾ ಜಿಲ್ಲೆಯ ಹೋಟೆಲಿನಲ್ಲಿ  ನಡೆದಿದೆ.

25 ವರ್ಷ ವಯಸ್ಸಿನ ಸಂತ್ರಸ್ತೆಯ ಆಕ್ಷೇಪಾರ್ಹ ವೀಡಿಯೊವನ್ನು (Video) ಈ ಹಿಂದೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಸೇರಿದಂತೆ ಐವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

 

ಆಕ್ಷೇಪಾರ್ಹ ವಿಡಿಯೋವನ್ನು ಇಟ್ಟುಕೊಂಡು ಮಹಿಳೆಯನ್ನು ಬ್ಲ್ಯಾಕ್‌ಮೇಲ್‌ (Black Mail) ಮಾಡಲಾಗುತ್ತಿತ್ತು. ಬಲವಂತವಾಗಿ ಮದ್ಯ ಸೇವಿಸಿ ಆಕೆಯ ತಲೆಗೆ ಬಾಟಲಿಯಿಂದ ಹೊಡೆದಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಸಂತ್ರಸ್ತೆ ನೀಡಿದ ದೂರಿನ ಆಧಾರದಲ್ಲಿ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ಆರೋಪಿಗಳ ವಿರುದ್ಧ ಅತ್ಯಾಚಾರದ ಆರೋಪಗಳಲ್ಲದೆ, ಕೊಲೆ ಯತ್ನದ ಆರೋಪಗಳನ್ನು ಸಹ ಹಾಕಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಇದನ್ನೂ ಓದಿ: ಗುಟುಕು ಮದ್ಯ ಕೊಡಲು ನಿರಾಕರಿಸಿದ್ದಕ್ಕೆ ವೈನ್ ಶಾಪ್‌ಗೇ ಬೆಂಕಿ ಇಟ್ಟ ಭೂಪ

ಸಂತ್ರಸ್ತೆ ಹೋಟೆಲಿನ ಉದ್ಯೋಗಿಯಾಗಿದ್ದು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ. ಸಂತ್ರಸ್ತೆ ಸಹಾಯಕ್ಕಾಗಿ ಅಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.