ಕಾರವಾರ: ಕಂಟೈನರ್ ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 12 ಗೋವುಗಳನ್ನು ರಕ್ಷಿಸಿ, ಇಬ್ಬರು ಆರೋಪಿಗಳನ್ನು ಉತ್ತರ ಕನ್ನಡ ಜಿಲ್ಲೆಯ ಪೊಲೀಸರು ಬಂಧಿಸಿದ್ದಾರೆ. ದಾವಣಗೆರೆ ಮೂಲದ ಸಾದಿಕ್ ಜಾಫರ್ ಹಾಗೂ ಈರಪ್ಪ ಬಂಧಿತ ಆರೋಪಿಗಳು.
ಕಂಟೈನರ್ ನಲ್ಲಿ ಅಕ್ರಮವಾಗಿ ಗೋವುಗಳನ್ನು ಸಾಗಿಸಲಾಗುತ್ತಿದೆ ಎನ್ನುವ ಶಂಕೆ ವ್ಯಕ್ತವಾಗಿತ್ತು. ಈ ಬೆನ್ನಲ್ಲೇ ಇಂದು ಕುಮಟಾ ತಾಲೂಕಿನ ಹಿರೆಗುತ್ತಿ ಬಳಿ ಪೊಲೀಸರು ವಾಹನ ತಪಾಸಣೆ ವೇಳೆ ಕಂಟೈನರ್ ನಲ್ಲಿ ಹೋರಿ, ಎತ್ತು ಸೇರಿದಂತೆ 12 ಗೋವುಗಳು ಇರುವುದು ಪತ್ತೆಯಾಗಿದೆ. ತಕ್ಷಣವೇ ಚಾಲಕ ಹಾಗೂ ಸಹಾಯಕನನ್ನು ಬಂಧಿಸಿ ಗೋವುಗಳನ್ನು ರಕ್ಷಿಸಿದ್ದಾರೆ.

ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿದಾಗ ಅಣ್ಣಾವರ್ ನಿಂದ ಕುಂದಾಪುರಕ್ಕೆ ಗೋವುಗಳನ್ನು ಸಾಗಿಸಲಾಗುತ್ತಿತ್ತು ಎನ್ನುವ ಮಾಹಿತಿ ಸಿಕ್ಕಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಈ ಕುರಿತು ಗೋಕರ್ಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com

Leave a Reply