ಉತ್ತರಾಖಂಡ ಬಸ್ ಅಪಘಾತಕ್ಕೆ ಮೋದಿ ಸಂತಾಪ – ಮೃತರ ಕುಟುಂಬಕ್ಕೆ 2 ಲಕ್ಷ, ಗಾಯಗೊಂಡವರಿಗೆ 50 ಸಾವಿರ ರೂ. ಪರಿಹಾರ

ಡೆಹ್ರಾಡೂನ್: ಉತ್ತರಾಖಂಡದ (Uttarakhand) ಅಲ್ಮೋರಾ ಬಸ್ ಅಪಘಾತದಲ್ಲಿ (Almora Bus Accident) ಮೃತಪಟ್ಟ ಕುಟುಂಬದವರಿಗೆ ಪ್ರಧಾನಿ ಮೋದಿ (PM Modi) ಸಂತಾಪ ಸೂಚಿಸಿದ್ದಾರೆ. ಮೃತಪಟ್ಟವರ ಕುಟುಂಬದಕ್ಕೆ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ 50 ಸಾವಿರ ರೂ. ಪರಿಹಾರ ಘೋಷಿಸಿದ್ದಾರೆ.

ಇದಕ್ಕೆ ಸಂಬಂಧಿಸಿದಂತೆ ಪ್ರಧಾನಿ ಕಚೇರಿ ತನ್ನ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದು, ಅಪಘಾತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬದವರಿಗೆ ನನ್ನ ಸಂತಾಪಗಳು ಹಾಗೂ ಗಾಯಳುಗಳು ಬೇಗ ಚೇತರಿಸಿಕೊಳ್ಳಲಿ ಎಂದು ಬಯಸುತ್ತೇನೆ ಎಂದು ಬರೆದುಕೊಂಡಿದ್ದಾರೆ.ಇದನ್ನೂ ಓದಿ: Uttarakhand | ಕಮರಿಗೆ ಉರುಳಿದ ಬಸ್‌, ಸಾವಿನ ಸಂಖ್ಯೆ 36ಕ್ಕೆ ಏರಿಕೆ, 19 ಮಂದಿಗೆ ಗಾಯ

ಉತ್ತರಾಖಂಡದ ಅಲ್ಮೋರಾ ಜಿಲ್ಲೆಯ ಮಾರ್ಚುಲಾ ಸಾಲ್ಟ್ ಪ್ರದೇಶದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್‌ವೊಂದು ಕಮರಿಗೆ ಬಿದ್ದು 36 ಜನರು ಸಾವನ್ನಪ್ಪಿದ್ದಾರೆ ಹಾಗೂ 19 ಜನ ಗಾಯಗೊಂಡಿದ್ದಾರೆ. ಇಂದು (ನ.4) ಬೆಳಗ್ಗೆ 9 ಗಂಟೆ ಸುಮಾರಿಗೆ ಘಟನೆ ನಡೆಸಿದೆ ಎಂದು ವರದಿಗಳು ತಿಳಿಸಿವೆ.

ಸ್ಥಳಕ್ಕೆ ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ತಂಡಗಳು, ಸ್ಥಳೀಯ ಪೊಲೀಸರು ಮಾರ್ಚುಲಾ ಸಾಲ್ಟ್ ಪ್ರದೇಶದಲ್ಲಿ ಅಪಘಾತ ಸ್ಥಳಕ್ಕೆ ಧಾವಿಸಿ, ರಕ್ಷಣಾ ಕಾರ್ಯಾಚರಣೆ ನಡೆಸಿದರು. ಕೆಲ ಪ್ರಯಾಣಿಕರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಕ್ಷಣಾಕಾರ್ಯ ನಡೆಯುತ್ತಿರುವ ಹೊತ್ತಿನಲ್ಲೇ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಸಂತ್ರಸ್ತರಿಗೆ ಪರಿಹಾರ ಘೋಷಣೆ ಮಾಡಿದ್ದಾರೆ. ಮೃತರ ಕುಟುಂಬಗಳಿಗೆ ತಲಾ 4 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ ತಲಾ 1 ಲಕ್ಷ ರೂ. ಆರ್ಥಿಕ ನೆರವು ಘೋಷಿಸಿದ್ದಾರೆ. ಅಲ್ಲದೇ ಘಟನೆ ಕುರಿತು ಮ್ಯಾಜಿಸ್ಟ್ರೇಟ್ ತನಿಖೆ ನಡೆಸುವಂತೆ ಅವರು ಕುಮಾನ್ ವಿಭಾಗದ ಆಯುಕ್ತರಿಗೆ ಸೂಚಿಸಿದ್ದಾರೆ.ಇದನ್ನೂ ಓದಿ: ಉತ್ತರಾಖಂಡದಲ್ಲಿ ಕಮರಿಗೆ ಉರುಳಿದ ಬಸ್‌ – ಕನಿಷ್ಠ 20 ಮಂದಿ ದಾರುಣ ಸಾವು