ಕೊರೊನಾ ಶಂಕಿತರಿರುವ ಪ್ರದೇಶದಲ್ಲೇ ಅದ್ದೂರಿ ಮದ್ವೆ- ವರ ಸೇರಿ 8 ಜನ ಅರೆಸ್ಟ್

ಡೆಹ್ರಾಡೂನ್: ಲಾಕ್‍ಡೌನ್ ಸಂದರ್ಭದಲ್ಲಿ ಅನುಮತಿಯಿಲ್ಲದೆ ಮದುವೆ ನಡೆಸುತ್ತಿದ್ದ ಖಾಜಿ ಮತ್ತು ವರ ಸೇರಿದಂತೆ 8 ಜನರನ್ನು ಉತ್ತರಾಖಂಡ ಪೊಲೀಸರು ಬಂಧಿಸಿದ್ದಾರೆ.

ಉತ್ತರಾಖಂಡದಲ್ಲಿ ಎಂಟು ಜನ ಹೋಮ್ ಕ್ವಾರೆಂಟೈನ್‍ಗಳಿರುವ ಪ್ರದೇಶದಲ್ಲಿ ಅದ್ದೂರಿಯಾಗಿ ಮದುವೆ ನಡೆತಿತ್ತು. ಈ ಸಂಬಂಧ ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು 8 ಜನರನ್ನು ಪೊಲೀಸರು ಅರೆಸ್ಟ್ ಮಾಡಿ, ವಿಚಾರಣೆಗೆ ಒಳಪಡಿಸಿದ್ದಾರೆ.

ಕೊರೊನಾ ವೈರಸ್ ಹಿನ್ನೆಲೆಯಲ್ಲಿ ದೇಶಾದ್ಯಂತ ಏಪ್ರಿಲ್ 14ರವರೆಗೆ ಲಾಕ್‍ಡೌನ್ ಘೋಷಿಸಲಾಗಿದೆ. ದೇಶದಲ್ಲಿ ಕೊರೊನಾ ವೈರಸ್ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿದ್ದು, ಸೋಂಕಿತರ ಸಂಖ್ಯೆ 724ಕ್ಕೆ ಏರಿದೆ. ಇಂದು 30 ಹೊಸ ಪ್ರಕರಣಗಳು ವರದಿಯಾಗಿವೆ.

ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನರನ್ನು ಉದ್ದೇಶಿಸಿ ಮಾತನಾಡಿ ಮನೆಯಲ್ಲಿಯೇ ಇರಲು ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಕೇಳಿಕೊಂಡಿದ್ದಾರೆ. ಕೊರೊನಾ ವೈರಸ್ ಕಾರಣದಿಂದಾಗಿ ಅನೇಕ ಜನರು ತಮ್ಮ ಮದುವೆಯನ್ನು ಮುಂದೂಡಿದ್ದಾರೆ. ಆದರೆ ಕೆಲವರು ಲಾಕ್‍ಡೌನ್ ಅನ್ನು ಉಲ್ಲಂಘಿಸುತ್ತಿದ್ದಾರೆ.

ಲಾಕ್‍ಡೌನ್ ಸಾಮಾನ್ಯ ಜನರ ಜೀವನ ಹಾಗೂ ಆರ್ಥಿಕತೆಯ ಮೇಲೆ ಪರಿಣಾಮ ಬೀರಿದೆ. ಹೀಗಾಗಿ ಕೇಂದ್ರ ಸರ್ಕಾರವು 1.70 ಲಕ್ಷ ಕೋಟಿ ರೂ. ಮೌಲ್ಯದ ಪಿಎಂ ಗರಿಬ್ ಕಲ್ಯಾಣ್ ಯೋಜನೆ ಪ್ಯಾಕೇಜ್ ಘೋಷಣೆ ಮಾಡಿದೆ. ಇದರಲ್ಲಿ ಬಡವರು, ನಿರ್ಗತಿಕರು, ಮಹಿಳೆಯರು ಮತ್ತು ಅಂಗವಿಕಲರು ಸೇರಿದಂತೆ ಬಹುತೇಕ ಎಲ್ಲ ವಿಭಾಗಗಳಿಗೆ ಪರಿಹಾರ ನೀಡುವ ಪ್ರಯತ್ನ ಮಾಡಲಾಗಿದೆ. ಸರ್ಕಾರ ಎಲ್ಲ ರೀತಿಯ ಪ್ರಯತ್ನ ಮಾಡುತ್ತಿದ್ದರೂ ಕೆಲವರು ಪರಿಸ್ಥಿತಿಯನ್ನು ಅರ್ಥ ಮಾಡಿಕೊಳ್ಳುತ್ತಿಲ್ಲ ಎಂಬ ದೂರು ಕೇಳಿ ಬಂದಿವೆ.

Comments

Leave a Reply

Your email address will not be published. Required fields are marked *