ಉತ್ತರಕಾಶಿ ಸುರಂಗದಲ್ಲಿ ಗ್ರೇಟ್ ಆಪರೇಷನ್ – 17 ದಿನಗಳ ಬಳಿಕ ಸಾವು ಗೆದ್ದ 41 ಕಾರ್ಮಿಕರು

ಡೆಹ್ರಾಡೂನ್‌: ಸುರಂಗದ ಒಳಗಡೆ ಇದ್ದ ಕಾರ್ಮಿಕರು ಸುರಕ್ಷಿತವಾಗಿ ಹೊರಬರಲಿ ಎಂಬ ದೇಶದ ಜನರ ಪ್ರಾರ್ಥನೆ ಫಲ ನೀಡಿದೆ.  ಉತ್ತರಾಖಂಡದ ಉತ್ತರಕಾಶಿ ಸುರಂಗದಲ್ಲಿ (Uttarakhand’s Silkyari Tunnel) 17 ದಿನಗಳಿಂದ ಸಿಲುಕಿದ್ದ ಕಾರ್ಮಿಕರನ್ನು (Workers) ರಕ್ಷಣೆ ಮಾಡಲಾಗಿದೆ.

17 ದಿನ  400 ಗಂಟೆಗಳ ಆಪರೇಷನ್‌ ಯಶಸ್ವಿಯಾಗಿದ್ದು  ಮಂಗಳವಾರ ರಾತ್ರಿ ಒಬ್ಬೊಬ್ಬರಾಗಿ ಸುರಂಗದಿಂದ ಕಾರ್ಮಿಕರು ಹೊರ ಬರುತ್ತಿದ್ದಾರೆ.

ನೆಲದಿಂದ ಸಮಾನಾಂತರವಾಗಿ ಮೊದಲು ಕೈಗೊಂಡಿದ್ದ ಕೊರೆವ ಕೆಲಸವನ್ನು, ಅದು ನಿಂತಿದ್ದ ಸ್ಥಳದಿಂದಲೇ ನಿಷೇಧಿತ ಇಲಿ ಬಿಲ ಗಣಿಗಾರಿಕೆಯ ತಂತ್ರಜ್ಞಾನ ಬಳಸಿ ಡ್ರಿಲ್ಲಿಂಗ್ ಮಾಡಿದ್ದಾರೆ.  ಕೊರೆವ ಕಾರ್ಯ ಪೂರ್ಣಗೊಂಡ ಬಳಿಕ ಎನ್‌ಡಿಆರ್‌ಎಫ್ ಸಿಬ್ಬಂದಿ ಸುರಂಗದೊಳಗೆ ಹೋಗಿ, ಕಾರ್ಮಿಕರನ್ನು ಒಬ್ಬೊಬ್ಬರನ್ನಾಗಿ ಹೊರಗೆ ಕರೆತಂದಿದ್ದಾರೆ.

ಕಾರ್ಮಿಕರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲು 41 ಅಂಬುಲೆನ್ಸ್‌, ಸ್ಟ್ರೆಚ್ಚರ್‌, ಮೆಡಿಕಲ್ ಎಮೆರ್ಜೆನ್ಸಿ ಇದ್ರೆ ಚಿನೂಕ್ ಹೆಲಿಕಾಪ್ಟರ್.. ಹೀಗೆ ಎಲ್ಲವನ್ನು ಸಜ್ಜಾಗಿ ಇರಿಸಲಾಗಿದೆ. ಸ್ಥಳದಲ್ಲೇ ಸಿಎಂ ಪುಷ್ಕರ್ ಸಿಂಗ್ ಧಾಮಿ, ಕೇಂದ್ರ ಸಚಿವ ವಿಕೆ ಸಿಂಗ್, ಕಾರ್ಮಿಕರು ಬಂಧುಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದಾರೆ.

ಇದನ್ನೂ ಓದಿ: 41 ಕಾರ್ಮಿಕರ ರಕ್ಷಣೆಗೆ ವರವಾಯ್ತು ನಿಷೇಧಿತ ರ‍್ಯಾಟ್ ಹೋಲ್ ಮೈನಿಂಗ್ – ನಿಷೇಧಿಸಿದ್ದು ಯಾಕೆ?

ರಕ್ಷಣಾ ಕಾರ್ಯದ ವೇಳೆ ಯಂತ್ರಗಳು ಕೈಕೊಟ್ಟಿದ್ದರಿಂದ ಕಾರ್ಯಾಚರಣೆ ವಿಳಂಬವಾಗಿತ್ತು. ಕೊನೆಗೆ ರ‍್ಯಾಟ್‌ ಹೋಲ್‌ ಮೈನಿಂಗ್‌ (Rat Hole Mining) ಮೂಲಕ 41 ಜನರನ್ನು ರಕ್ಷಿಸಲು ಮಾಸ್ಟರ್‌ ಪ್ಲ್ಯಾನ್‌ ರೂಪಿಸಲಾಗಿತ್ತು.

ಉತ್ತರಕಾಶಿ ಜಿಲ್ಲೆಯ ಸಿಲ್‌ಕ್ಯಾರ ಹಾಗೂ ದಂಡಲ್‌ಗಾಂವ್‌ಗೆ ಸಂಪರ್ಕ ಕಲ್ಪಿಸಲು ಚಾರ್‌ ಧಾಮ್‌ ರಸ್ತೆ ಯೋಜನೆ ಅಡಿಯಲ್ಲಿ ಸುರಂಗ ಮಾರ್ಗ ನಿರ್ಮಿಸಲಾಗುತ್ತಿದೆ. 4.5 ಕಿಲೋ ಮೀಟರ್‌ ದೂರದ ಸುರಂಗ ನಿರ್ಮಾಣದ ವೇಳೆ ಸುಮಾರು 150 ಮೀಟರ್‌ ಉದ್ದದ ಸುರಂಗ ಕುಸಿದಿತ್ತು. ನವೆಂಬರ್‌ 12ರಂದು ಜಾವ 4 ಗಂಟೆ ಸುಮಾರಿಗೆ ಸುರಂಗ ಕುಸಿದಿದ್ದು, ಕೂಡಲೇ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿತ್ತು.