ಕಾಂಗ್ರೆಸ್ಸಿನ ‘ನಾನು ಹುಡುಗಿ ಹೋರಾಡಬಲ್ಲೆ’ ಪೋಸ್ಟರ್ ಖ್ಯಾತಿಯ ಪ್ರಿಯಾಂಕಾ ಬಿಜೆಪಿಗೆ?

ಲಕ್ನೋ: ಉತ್ತರಪ್ರದೇಶ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಒಂದೆಡೆ ಅಸಾಮಾಧಾನಗೊಳ್ಳುತ್ತಿರುವವರು ಒಂದು ಪಕ್ಷದಿಂದ ಇನ್ನೊಂದು ಪಕ್ಷಕ್ಕೆ ಜಂಪ್ ಆಗುತ್ತಿದ್ದಾರೆ. ಇದೀಗ ಕಾಂಗ್ರೆಸ್ ನ ‘ನಾನು ಹುಡುಗಿ ಹೋರಾಡಬಲ್ಲೇ’ ಪೋಸ್ಟರ್ ಗರ್ಲ್ ಹಾಗೂ ಉತ್ತರಪ್ರದೇಶದ ಕಾಂಗ್ರೆಸ್ ಉಪಾಧ್ಯಕ್ಷೆ ಪ್ರಿಯಾಂಕಾ ಮೌರ್ಯ ಬಿಜೆಪಿ ಸೇರುವ ಸಾಧ್ಯತೆಗಳು ದಟ್ಟವಾಗಿವೆ.

ವಿಧಾನಸಭಾ ಚುನಾವಣೆಯಲ್ಲಿ ಪ್ರಿಯಾಂಕಾಗೆ ಕಾಂಗ್ರೆಸ್ಸಿನಿಂದ ಟಿಕೆಟ್ ನಿರಾಕರಣೆಗೊಂಡಿದೆ. ಈ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಅವರು ಬಿಜೆಪಿ ಸೇರುವುದು ಬಹುತೇಕ ಖಚಿತವಾಗಿದೆ. ಅಂತೆಯೇ ಅತೀ ಶೀಘ್ರವೇ ಅವರು ಕಮಲ ಮುಡಿಯಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ಇದನ್ನೂ ಓದಿ: ಮಹಾರಾಷ್ಟ್ರ ನಗರ ಪಂಚಾಯತ್‌ ಚುನಾವಣಾ ಫಲಿತಾಂಶ – ಬಿಜೆಪಿ ಅತಿ ದೊಡ್ಡ ಪಕ್ಷ

ಕಾಂಗ್ರೆಸ್ ಟಿಕೆಟ್ ನಿರಾಕರಿಸಿದ ಕುರಿತು ಪ್ರತಿಕ್ರಿಯಿಸಿರುವ ಅವರು, ಲಂಚ ನೀಡಲು ಒಪ್ಪದ ಕಾರಣ ಕಾಂಗ್ರೆಸ್ ಪಕ್ಷ ನನಗೆ ಟಿಕೆಟ್ ನೀಡಿಲ್ಲ ಎಂದು ಗಂಭೀರ ಆರೋಪ ಮಾಡಿದ್ದಾರೆ. ಅಲ್ಲದೆ ಒಂದು ತಿಂಗಳ ಹಿಂದೆ ಕಾಂಗ್ರೆಸ್ ಗೆ ಸೇರಿರುವ ವ್ಯಕ್ತಿಯೊಬ್ಬರಿಗೆ ಪಕ್ಷ ಟಿಕೆಟ್ ನೀಡಿದೆ. ಪಕ್ಷದ ಪ್ರಚಾರಕ್ಕಾಗಿ ನನ್ನನ್ನು ಹಾಗೂ ಸೋಶಿಯಲ್ ಮೀಡಿಯಾದಲ್ಲಿ ನನ್ನ ಫಾಲೋ ಮಾಡುತ್ತಿರುವ ಸುಮಾರು 10 ಲಕ್ಷ ಮಂದಿಯನ್ನು ಬಳಕೆ ಮಾಡಿಕೊಂಡಿದೆ. ಆದರೆ ಇದೀಗ ಟಿಕೆಟ್ ನಿಡಲು ಮಾತ್ರ ಪಕ್ಷ ಹಿಂದೇಟು ಹಾಕಿದೆ. ಇದು ಪಕ್ಷ ನನಗೆ ಮಾಡಿರುವ ಅನ್ಯಾಯವಾಗಿದೆ ಎಂದು ಆಕ್ರೋಶ ಹೊರಹಾಕಿದರು.

ವಿಧಾನಸಭೆ ಚುನಾವಣೆ ಆರಂಭಗೊಳ್ಳುವುದಕ್ಕೂ ಮುಂಚಿತವಾಗಿ ಉತ್ತರ ಪ್ರದೇಶದಲ್ಲಿ ಮಹಿಳೆಯರಿಗಾಗಿ ಕಾಂಗ್ರೆಸ್ ‘ಲಡ್ಕಿ ಹೂ, ಲಡ್ ಕೀ ಸಕ್ತಿ ಹೂ’ ಎಂಬ ಪ್ರಚಾರ ಅಭಿಯಾನಕ್ಕೆ ಚಾಲನೆ ನೀಡಲಾಗಿತ್ತು. ಈ ಅಭಿಯಾನದ ಪೋಸ್ಟರ್ ನಲ್ಲಿ ಪ್ರಿಯಾಂಕಾ ಮೌರ್ಯ ಕಾಣಿಸಿಕೊಂಡಿದ್ದರು. ಇವರು ಲಕ್ನೋದ ಸರೋಜಿನಿ ನಗರ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುವ ಇಂಗಿತ ವ್ಯಕ್ತಪಡಿಸಿದ್ದರು. ಆದರೆ ಇತ್ತೀಚೆಗೆ ಕಾಂಗ್ರೆಸ್‍ನಿಂದ ರಿಲೀಸ್ ಆಗಿರುವ ಪಟ್ಟಿಯಲ್ಲಿ ಇವರ ಹೆಸರನ್ನು ಕೈಬಿಡಲಾಗಿದೆ. ಇದರಿಂದ ಬೇಸರಗೊಂಡಿರುವ ಅವರು ಇದೀಗ ಕಮಲ ಮುಡಿಯುವ ನಿರ್ಧಾರ ಮಾಡಿದ್ದಾರೆ.

Comments

Leave a Reply

Your email address will not be published. Required fields are marked *