ಚಾಮರಾಜನಗರ ಜಿಲ್ಲಾ ಉಸ್ತುವಾರಿ ಕೊಟ್ರೆ ಮಾಡೋಣ: ವಿ ಸೋಮಣ್ಣ

SOMANNA

ಚಾಮರಾಜನಗರ: ಚಾಮರಾಜನಗರ ಜಿಲ್ಲಾ ಉಸ್ತುವಾರಿ ಕೊಟ್ಟರೆ ಮಾಡೋಣ ಎಂದು ವಸತಿ ಸಚಿವ ವಿ. ಸೋಮಣ್ಣ ಹೇಳಿದ್ದಾರೆ.

ಚಾಮರಾಜನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರ್ಕಾರ ನಿಂತ ನೀರಲ್ಲ, ಹರಿಯುವ ನೀರು ಎಲ್ಲ ಮೂಲೆಗೂ ತಲುಪಬೇಕಾಗುತ್ತದೆ ಎಂದು ಮಾರ್ಮಿಕವಾಗಿ ನುಡಿದರು. ಬೆಂಗಳೂರು ಉಸ್ತುವಾರಿಗೆ ಅಶೋಕ್ ಹಾಗೂ ಸೋಮಣ್ಣ ನಡುವೆ ಫೈಟ್ ನಡೆದಿರುವಾಗಲೇ ಸೋಮಣ್ಣ ಅವರ ಈ ಹೇಳಿಕೆ ಮಹತ್ವ ಪಡೆದುಕೊಂಡಿದೆ. ಇದನ್ನೂ ಓದಿ: ತಾಲಿಬಾನ್ ಭಾರತದತ್ತ ಬಂದರೆ ಏರ್ ಸ್ಟ್ರೈಕ್: ಯೋಗಿ ಆದಿತ್ಯನಾಥ್

ನಾನು ಸೀನಿಯರ್ ಇದ್ದೇನೆ ಆರೇಳು ಬಾರಿ ಶಾಸಕನಾಗಿದ್ದೇನೆ, ಮಂತ್ರಿಯಾಗಿದ್ದೇನೆ, ಆರೇಳು ಸಿಎಂಗಳ ಜೊತೆ ಕೆಲಸ ಮಾಡಿದ್ದೇನೆ, ಯಾರನ್ನು ಹೋಗಿ ಕೇಳುವುದಿಲ್ಲ, ಮನವಿ ಮಾಡುವುದಿಲ್ಲ ಮುಖ್ಯ ಮಂತ್ರಿಗಳು ಚಾಮರಾಜನಗರ ಜವಾಬ್ದಾರಿ ಕೊಟ್ಟರೆ ಮಾಡೋಣ ವಿವಾದ ಮಾಡಿಕೊಳ್ಳಲು ಇಷ್ಟವಿಲ್ಲ ಎಂದಿದ್ದಾರೆ.

basavaraj bommai

ಚಾಮರಾಜನಗರ ಹಾಗೂ ಯಾದಗಿರಿ ಜಿಲ್ಲೆಗಳಿಗೆ ಅರ್ಹ ವಸತಿ ರಹಿತ ಫಲಾನುಭವಿಗಳಿಗೆ ವಸತಿ ಸೌಲಭ್ಯ ಕಲ್ಪಿಸಲು ಕ್ರಮವಹಿಸಲಾಗಿದ್ದು, 3 ತಿಂಗಳ ಒಳಗೆ ಫಲಾನುಭವಿಗಳ ಖಾತೆಗೆ ಹಣ ಜಮೆ ಮಾಡಲು ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕೋಟೆನಾಡಲ್ಲಿ ಅಸ್ಪೃಶ್ಯತೆ, ಕೋಮುವಾದ ವಿರೋಧಿಸಿ 101 ಜನ ಬೌದ್ಧ ಧರ್ಮಕ್ಕೆ ಮತಾಂತರ

ಇದೇ ವೇಳೆ ಉಪ ಚುನಾವಣೆ ನಡೆದಿರುವ ಸಿಂದಗಿ, ಹಾನಗಲ್ ಎರಡೂ ಕ್ಷೇತ್ರಗಳಲ್ಲಿ ಅತ್ಯಧಿಕ ಬಹುಮತಗಳಿಂದ ಬಿಜೆಪಿ ಗೆಲುವು ಸಾಧಿಸುತ್ತದೆ. ಸಿಂದಗಿಯಲ್ಲಿ ನಾನು, ಕಾರಜೋಳ, ಸಿಸಿ ಪಾಟೀಲ್ ಲಕ್ಷ್ಮಣ ಸವದಿ, ಶಶಿಕಲಾ ಜೊಲ್ಲೆ ಎಲ್ಲರು ಸೇರಿ ವ್ಯವಸ್ಥಿತವಾಗಿ ಕೆಲಸ ಮಾಡಿದ್ದೇವೆ, ಪ್ರಧಾನಿ ಮೋದಿ ಅವರ ಜನಪರ ಕಾರ್ಯಕ್ರಮಗಳು, ರಾಜ್ಯ ಸರ್ಕಾರದ ಉತ್ತಮ ಕೆಲಸ, ಕೋವಿಡ್ ನಿರ್ವಹಣೆ ಹೀಗೆ ಎಲ್ಲವನ್ನು ಜನರು ಸೂಕ್ಷ್ಮವಾಗಿ ಗಮನಿಸಿದ್ದಾರೆ. ಎರಡೂ ಕ್ಷೇತ್ರಗಳಲ್ಲಿ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಜಯಗಳಿಸಲಿದೆ ಎಂದು ನುಡಿದಿದ್ದಾರೆ.

Comments

Leave a Reply

Your email address will not be published. Required fields are marked *