ಆರೋಗ್ಯವಂತ ಮಕ್ಕಳು ದೇಶದ ಸಂಪತ್ತು, ಎರಡು ಹನಿ ಪೋಲಿಯೋ ಲಸಿಕೆ ಮಕ್ಕಳ ಜೀವ ರಕ್ಷಕ:  ವಿ.ಸೋಮಣ್ಣ

ಬೆಂಗಳೂರು: ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ ಪಾಲಿಕೆ ಸೌಧ ಅವರಣದಲ್ಲಿ ಪಲ್ಸ್ ಪೋಲಿಯೋ ದಿನಾಚರಣೆ ಅಂಗವಾಗಿ ವಸತಿ ಸಚಿವರಾದ ವಿ.ಸೋಮಣ್ಣ 5 ವರ್ಷದ ಒಳಗಿನ ಮಕ್ಕಳಿಗೆ ಎರಡು ಹನಿ ಪೋಲಿಯೋ ಲಸಿಕೆ ಹಾಕುವ ಮೂಲಕ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ ನೀಡಿದರು.

ಗೋವಿಂದರಾಜನಗರ ಮಂಡಲ ಬಿ.ಜೆ.ಪಿ.ಅಧ್ಯಕ್ಷರಾದ ವಿಶ್ವನಾಥಗೌಡ ಮತ್ತು ಆರೋಗ್ಯಾಧಿಕಾರಿ ಮತ್ತು ಸಿಬ್ಬಂದಿ ಪಾಲ್ಗೊಂಡಿದ್ದರು. ಈ ವೇಳೆ ಮಾತನಾಡಿದ ಅವರು,  ಆರೋಗ್ಯವಂತ ಮಕ್ಕಳು ದೇಶದ ಸಂಪತ್ತು. ಪೋಲಿಯೋ ಒಂದು ಭಯಾನಕ ರೋಗ, ಈ ರೋಗ ಮಕ್ಕಳಲ್ಲಿ ಶಾಶ್ವತ ಅಂಗವಿಕಲತೆಯನ್ನು ಉಂಟುಮಾಡುತ್ತದೆ. 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಲ್ಲಿ ಈ ರೋಗವು ಹೆಚ್ಚಾಗಿ ಕಂಡುಬರುತ್ತದೆ. ಭಾರತವನ್ನು ಪೋಲಿಯೋ ಮುಕ್ತವನ್ನಾಗಿಸಲು 1995ರಲ್ಲಿ ಪ್ರಾರಂಭವಾದ ಪಲ್ಸ್ ಪೋಲಿಯೋ ಅಭಿಯಾನ ಬಹಳಷ್ಟು ಪ್ರಗತಿಯನ್ನು ಕಂಡಿದ್ದು, ವಿಶ್ವ ಆರೋಗ್ಯ ಸಂಸ್ಥೆಯು 2014ರ ಮಾರ್ಚ್ 27ರಂದು ಭಾರತವನ್ನು ಪೋಲಿಯೋ ಮುಕ್ತ ರಾಷ್ಟ್ರವೆಂದು ಘೋಷಿಸಿದೆ. ದೇಶದಲ್ಲಿ ಹಾಗೂ ರಾಜ್ಯದಲ್ಲಿ ಕಳೆದ 10 ವರ್ಷಗಳಿಂದ ಯಾವುದೇ ಪೋಲಿಯೋ ವೈರಾಣು ಪತ್ತೆಯಾಗದಿರುವುದು ಬಹಳ ಸಂತಸದ ವಿಷಯ ಎಂದಿದ್ದಾರೆ. ಇದನ್ನೂ ಓದಿ: ಬೈಡನ್ ದೌರ್ಬಲ್ಯದಿಂದಲೇ ಈ ಅನಾಹುತವಾಗಿದೆ: ಟ್ರಂಪ್

ಪೋಲಿಯೋ ಲಸಿಕಾ ಅಭಿಯಾನ ನಡೆಯಲಿದ್ದು, 5 ವರ್ಷದ ಒಳಗಿನ ಎಲ್ಲ ಮಕ್ಕಳಿಗೂ 2 ಹನಿ ಪಲ್ಸ್ ಪೋಲಿಯೋ ಲಸಿಕೆಯನ್ನು ಹಾಕಿಸಬೇಕು. ಈ ಲಸಿಕೆಯನ್ನು ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಎಲ್ಲ ಆರೋಗ್ಯ ಕೇಂದ್ರ, ಅಂಗನವಾಡಿ, ಶಾಲೆ, ಆಸ್ಪತ್ರೆ, ಬಸ್ ನಿಲ್ದಾಣ, ಹಾಗೂ ಸಂಚಾರಿ ಘಟಕಗಳಲ್ಲಿ ಇಂದು ಬೆಳಿಗ್ಗೆ ಗಂಟೆ 8 ರಿಂದ ಸಂಜೆ 5ರ ವರೆಗೆ ನೀಡಲಾಗುವುದು.ಇದಾದ ಬಳಿಕ ಸ್ವಯಂಸೇವಕರು ಪ್ರತೀ ಮನೆಗೆ ಭೇಟಿ ಲಸಿಕೆ ಹಾಕಲಾಗುತ್ತದೆ. ಎರಡು ಹನಿ ಪೋಲಿಯೋ ಲಸಿಕೆ ಮಕ್ಕಳಿಗೆ ಹಾಕಿಸುವುದರಿಂದ ಮಕ್ಕಳ ಜೀವ ರಕ್ಷಣೆ ಸಿಗುವುದು ಎಂದು ಹೇಳಿದರು. ಇದನ್ನೂ ಓದಿ: ಮಹಿಳೆಯರ ಸುರಕ್ಷತೆಗೆ ಏನು ಮಾಡದ ಯೋಗಿ ಆದಿತ್ಯನಾಥ ತೀರ್ಥಯಾತ್ರೆಗೆ ಹೊರಡಲಿ: ಜಯಾ ಬಚ್ಚನ್

 

Comments

Leave a Reply

Your email address will not be published. Required fields are marked *