ನಾವು ಗಡುವು ಕೊಡುವ ಸ್ವಾಮೀಜಿ ಅಲ್ಲ, ಮೀಸಲಾತಿ ಕೊಡಿಸುವ ಸ್ವಾಮೀಜಿ: ವಚನಾನಂದ ಶ್ರೀ

ಚಿಕ್ಕೋಡಿ: ಪಂಚಮಸಾಲಿ ಪೀಠಗಳ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ, ನಾವು ಗಡುವು ಕೊಡುವ ಸ್ವಾಮೀಜಿ ಅಲ್ಲ, ಮೀಸಲಾತಿ ಕೊಡಿಸುವ ಸ್ವಾಮೀಜಿ ಎಂದು ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಕೂಡಲ ಸಂಗಮ ಜಯಮೃತ್ಯುಂಜಯ ಸ್ವಾಮೀಜಿಯವರಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.

 

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಮಾತನಾಡಿದ ಅವರು, ಪಂಚಮಸಾಲಿ ಸಮಾಜದಲ್ಲಿ ಪೀಠಗಳು ಹೆಚ್ಚಾದರೆ, ಮಠ-ಸ್ವಾಮೀಜಿಗಳು ಹೆಚ್ಚಾದರೆ ಯಾವುದೇ ತೊಂದರೆ ಇಲ್ಲ. ನಮ್ಮಲ್ಲಿ ಯಾರ ನಡುವೆಯೂ ಭಿನ್ನಾಭಿಪ್ರಾಯ ಇಲ್ಲ, ಪಂಚಮಸಾಲಿ ಸಮಾಜ ಜಾಗೃತವಾಗಿದೆ ಎಂದರು. ಇದನ್ನೂ ಓದಿ: ಉಕ್ರೇನ್‍ನಲ್ಲಿ ಕರ್ನಾಟಕ ಮೂಲದ ವಿದ್ಯಾರ್ಥಿ ಸಾವು

ಪಂಚಮಸಾಲಿ ಸಮಾಜದ 2ಎ ಮೀಸಲಾತಿ ಬೇಡಿಕೆಗೆ ಯಾವುದೇ ಹಿನ್ನಡೆಯಾಗಿಲ್ಲ. ಈ ಹಿಂದೆ 2ಎ ಮೀಸಲಾತಿಗಾಗಿ ಪಂಚಮಸಾಲಿ ಸಮಾಜದ ಜಯಮೃತ್ಯುಂಜಯ ಸ್ವಾಮೀಜಿ ಸರ್ಕಾರಕ್ಕೆ ಗಡುವು ನೀಡಿದ್ದರು. ನಾವು ಗಡುವು ಕೊಡುವ ಸ್ವಾಮೀಜಿ ಅಲ್ಲ, ಮೀಸಲಾತಿ ಕೊಡಿಸುವ ಸ್ವಾಮೀಜಿ ಎಂದು ಕೂಡಲ ಸಂಗಮ ಜಯಮೃತ್ಯುಂಜಯ ಸ್ವಾಮೀಜಿಯವರಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ಈ ಮೂಲಕ ಇಬ್ಬರು ಪಂಚಮಸಾಲಿ ಸ್ವಾಮೀಜಿಗಳ ನಡುವಿನ ಶೀತಲ ಸಮರ ಮುದುವರಿದಿದೆ. ಇದನ್ನೂ ಓದಿ: ದೇವರ ದರ್ಶನಕ್ಕೆಂದು ಹೋದವರು ದರ್ಶನ ಪಡೆಯುವ ಮೊದಲೇ ಪ್ರಾಣ ಬಿಟ್ರು

Comments

Leave a Reply

Your email address will not be published. Required fields are marked *