ರಾಹುಲ್ ಗಾಂಧಿ ಸಮಾವೇಶದಲ್ಲಿ ವಂದೇ ಮಾತರಂ ಗೀತೆ ಅರ್ಧಕ್ಕೆ ಮೊಟಕು

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಭಾಗವಹಿಸಿದ್ದ ಸಮಾವೇಶದಲ್ಲಿ ವಂದೇ ಮಾತರಂ ಪ್ರಾರ್ಥನಾ ಗೀತೆಯನ್ನು ಅರ್ಥಕ್ಕೆ ಮೊಟಕು ಗೊಳಿಸಿದ ಘಟನೆ ನಡೆದಿದೆ.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ರಾಹುಲ್ ಗಾಂಧಿ ಸೇರಿದಂತೆ ಹಲವು ನಾಯಕರು ಕಾರ್ಯಕರ್ತರನು ಉದ್ದೇಶಿಸಿ ಮಾತನಾಡಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಬಳಿಕ ಕಾರ್ಯಕ್ರಮದ ಅಂತ್ಯದ ವೇಳೆ ಆಯೋಜಕರು ವಂದೇ ಮಾತರಂ ಗೀತೆಯನ್ನು ಹಾಡಲು ಸಿದ್ಧತೆ ನಡೆಸಿದ್ದರು. ಆದರೆ ರಾಹುಲ್ ಗಾಂಧಿ ಅವರು ಮುಂದಿನ ಕಾರ್ಯಕ್ರಮಕ್ಕೆ ತಡವಾಗುತ್ತಿದೆ ಎಂದು ಹೇಳಿ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಅವರಿಗೆ ಸನ್ನೆ ಮಾಡಿದ್ದರು.

ರಾಹುಲ್ ಗಾಂಧಿ ಅವರ ಸೂಚನೆ ಮೇರೆಗೆ ಕಾರ್ಯಕ್ರಮದ ಆಯೋಜರ ಬಳಿ ತೆರಳಿದ ವೇಣುಗೋಪಾಲ್ ಗೀತೆಯ ಒಂದು ಸಾಲು ಹಾಡಿ ಮುಕ್ತಾಯಗೊಳಿಸುವಂತೆ ಸೂಚಿದರು. ಇದರಂತೆ ವಂದೇ ಮಾತರಂ ಗೀತೆಯನ್ನು ಒಂದು ಸಾಲಿನೊಂದಿಗೆ ಹಾಡಿ ಕಾರ್ಯಕ್ರಮವನ್ನು ತರಾತುರಿಯಲ್ಲಿ ಮುಕ್ತಾಯ ಗೊಳಿಸಿದರು.

ಸದ್ಯ ಕಾಂಗ್ರೆಸ್ ನಾಯಕರ ಈ ನಡೆಯನ್ನು ಸಾಮಾಜಿಕ ಜಾಲತಾಣದಲ್ಲಿ ಹಲವರು ಟೀಕಿಸಿದ್ದಾರೆ, ಅಲ್ಲದೇ ಬಿಜೆಪಿ ವಂದೇ ಮಾತರಂ ಗೀತೆಗೆ ಕಾಂಗ್ರೆಸ್ ಅವಮಾನ ಮಾಡಿದೆ ಎಂದು ಆರೋಪಿಸಿದೆ.

Comments

Leave a Reply

Your email address will not be published. Required fields are marked *