ಜ್ಞಾನವಾಪಿ ಮಸೀದಿ ವಿವಾದ – ಜಿಲ್ಲಾ ನ್ಯಾಯಾಲಯದಿಂದ ನಾಳೆ ಮಹತ್ವದ ಆದೇಶ

ನವದೆಹಲಿ: ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ ವಾರಣಾಸಿಯ ಜಿಲ್ಲಾ ನ್ಯಾಯಾಲಯ ಮಹತ್ವದ ಆದೇಶ ನೀಡಲಿದೆ. ಸುಪ್ರೀಂಕೋರ್ಟ್ ಆದೇಶದನ್ವಯ ಇಂದು ಸುಮಾರು 45 ನಿಮಿಷಗಳ ಸುಧೀರ್ಘ ವಿಚಾರಣೆ ನಡೆಸಿದ ನ್ಯಾ. ಅಜಯ್ ಕೃಷ್ಣ ವಿಶ್ವೇಶ ನಾಳೆಗೆ ತೀರ್ಪು ಕಾಯ್ದಿರಿಸಿದರು.

supreme court 12

ವಿಚಾರಣೆ ವೇಳೆ ಮಸೀದಿಯಲ್ಲಿ ಪತ್ತೆಯಾಗಿದೆ ಎನ್ನಲಾಗಿರುವ ಶಿವಲಿಂಗಕ್ಕೆ ಪೂಜೆ ಸಲ್ಲಿಸಲು ಅನುಮತಿ ಕೋರಿ ಹಿಂದೂ ಪರ ವಕೀಲರು ಸಲ್ಲಿಸಿದ್ದ ಅರ್ಜಿಗೆ ಮಸೀದಿ ಪರ ವಕೀಲರು ವಿರೋಧ ವ್ಯಕ್ತಪಡಿಸಿದರು. 1991 ಕಾಯಿದೆ ಅನ್ವಯ ಈ ಅರ್ಜಿ ವಿಚಾರಣೆ ಅರ್ಹವಾಗಿಲ್ಲ, ಇದು ಆರ್ಡರ್ 7 ರೂಲ್ 11 ಉಲ್ಲಂಘನೆಯಾಗಿದೆ ಎಂದು ವಾದಿಸಿದರು. ಇದನ್ನೂ ಓದಿ: ದಲಿತ ಯುವತಿಯ ಮೇಲೆ ಗ್ಯಾಂಗ್ ರೇಪ್ – ಡಿಎಂಕೆ ಯುವ ನಾಯಕ ಅರೆಸ್ಟ್

ಈ ನಿಯಮ ಉಲ್ಲಂಘಿಸಿ ನಡೆಸಿದ ಸರ್ವೆ ಕೂಡಾ ಅನೂರ್ಜಿತವಾಗಿದ್ದು ಮೊದಲು ಈ ಅರ್ಜಿ ವಿಚಾರಣೆಗೆ ಅರ್ಹವೇ? ಅಲ್ಲವೇ? ಎಂದು ತಿರ್ಮಾನವಾಗಬೇಕು ಎಂದು ಕೋರ್ಟ್ ಗೆ ಮನವಿ ಮಾಡಿದರು. ಇದಕ್ಕೆ ಪ್ರತಿವಾದ ಸಲ್ಲಿಸಿದ ಹಿಂದೂ ಪರ ವಕೀಲರು ಕಾನೂನು ಬದ್ಧವಾಗಿ ನಿರ್ಮಿಸಿದ ಧಾರ್ಮಿಕ ಕ್ಷೇತ್ರಗಳಿಗೆ ಮಾತ್ರ 1991 ಅನ್ವಯವಾಗಲಿದ್ದು ಅತಿಕ್ರಮಣ ಕಟ್ಟಡಗಳಿಗಲ್ಲ, ರಾಮ ಮಂದಿರ ಪ್ರಕರಣವನ್ನು ಇದೇ ಆಧಾರದ ಮೇಲೆ ಸುಪ್ರೀಂಕೋರ್ಟ್ ವಿಚಾರಣೆ ನಡೆಸಿದೆ ಎಂದರು. ಇದನ್ನೂ ಓದಿ: ಎಟಿಎಂಗೆ ಹಣ ಹಾಕು ಅಂತ ಕೊಟ್ಟರೆ, ಹಣದೊಂದಿಗೆ ಎಸ್ಕೇಪ್ ಆದ ಭೂಪ

ವಾದ ಪ್ರತಿವಾದ ಆಲಿಸಿದ ಜಿಲ್ಲಾ ನ್ಯಾಯಾಲಯ ನಾಳೆ ಅರ್ಜಿ ವಿಚಾರಣೆಗೆ ಅರ್ಹವೇ ಎಂಬುದಕ್ಕೆ ಸಂಬಂಧಿಸಿದಂತೆ ತೀರ್ಪು ನೀಡಲಿದೆ ಎಂದು ಹೇಳಿತು. ಅದರ ಅನ್ವಯ ಮುಂದಿನ ಹಂತದಲ್ಲಿ ಪ್ರಕರಣ ವಿಚಾರಣೆ ನಡೆಸುವುದಾಗಿಯೂ ಕೋರ್ಟ್ ಹೇಳಿತ್ತು.

ಈ ವಿಚಾರಣೆ ವೇಳೆ ಹಿಂದೂ ಪರ ವಕೀಲರಿಂದ ಮತ್ತೊಂದು ಅರ್ಜಿ ಸಲ್ಲಿಕೆಯಾಗಿದ್ದು, ಮೇ 16 ರಿಂದ 19 ವರೆಗೂ ವಜುಖಾನದಲ್ಲಿ ವಜು ಮಾಡಿದವರ ವಿರುದ್ಧ 156 (3) ಸಿಆರ್‌ಸಿಪಿ, ಐಪಿಸಿ 153ಎ (2), 505 (3) ಅಡಿಯಲ್ಲಿ ಎಫ್‍ಐಆರ್ ದಾಖಲಿಸಲು ಮನವಿ ಮಾಡಲಾಗಿದೆ.

ತೀರ್ಪು ಮಹತ್ವ ಪಡೆದುಕೊಂಡ ಅರ್ಜಿ ವಿಚಾರಣೆ ವೇಳೆ ಕೇವಲ 23 ಮಂದಿಗೆ ಮಾತ್ರ ಕೋರ್ಟ್ ಹಾಲ್ ಪ್ರವೇಶ ಮಾಡಲು ಅನುಮತಿ ನೀಡಲಾಗಿತ್ತು. 19 ಮಂದಿ ವಕೀಲರು ಮತ್ತು ನಾಲ್ಕು ಮಂದಿ ಅರ್ಜಿದಾರರಿಗೆ ಪ್ರವೇಶಕ್ಕೆ ಅನುಮತಿ ನೀಡಲಾಗಿತ್ತು.

Comments

Leave a Reply

Your email address will not be published. Required fields are marked *