ಕನಿಷ್ಠ ಬೆಂಬಲ ಬೆಲೆ ಹೆಚ್ಚಳದ ಬಗ್ಗೆ ಮಾತನಾಡಲು ನನ್ನಷ್ಟು ಧೈರ್ಯ ಯಾರಿಗೂ ಇಲ್ಲ: ವರುಣ್ ಗಾಂಧಿ

ನವದೆಹಲಿ: ಬಿಜೆಪಿ ಸಂಸದ ವರುಣ್ ಗಾಂಧಿ ಮತ್ತೆ ತಮ್ಮದೇ ಸರ್ಕಾರದ ಸಹೋದ್ಯೋಗಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕನಿಷ್ಠ ಬೆಂಬಲ ಬೆಲೆ ಹೆಚ್ಚಳದ ಬಗ್ಗೆ ಮಾತನಾಡಲು ನನ್ನಷ್ಟು ಧೈರ್ಯ ಯಾರಿಗೂ ಇಲ್ಲ ಎಂದು ಹೇಳಿದ್ದಾರೆ.

ಬರೇಲಿ ವಿಧಾನಸಭಾ ಕ್ಷೇತ್ರದಲ್ಲಿ ಎರಡು ದಿನಗಳ ಪ್ರವಾಸದ ವೇಳೆ ಸ್ಥಳೀಯ ಹಳ್ಳಿಗಳ ಜನರೊಂದಿಗೆ ಮಾತುಕತೆ ನಡೆಸಿದರು. ಈ ವೇಳೆ ಮಾತನಾಡಿ, (MSP-Minimum Support Price) ಕಬ್ಬಿಗೆ ಬೆಂಬಲ ಬೆಲೆ ಏರಿಕೆ ಮಾಡುವ ಬಗ್ಗೆ ಮಾತನಾಡಲು ನನ್ನನ್ನು ಹೊರತುಪಡಿಸಿ ಇನ್ಯಾರಿಗೂ ಧೈರ್ಯವೇ ಇಲ್ಲ. ನಾವು ಆ ಬಗ್ಗೆ ಮಾತನಾಡಿದರೆ ಮುಂದೆ ಚುನಾವಣೆಯಲ್ಲಿ ಟಿಕೆಟ್ ಸಿಗದೆ ಇದ್ದರೆ ಎಂಬ ಭಯ ಅವರನ್ನು ಕಾಡುತ್ತಿದೆ ಎಂದು ತಮ್ಮದೇ ಪಕ್ಷದವರ ವಿರುದ್ಧವಾಗಿ ವಾಗ್ದಾಳಿ ಮಾಡಿದ್ದಾರೆ. ಇದನ್ನೂ ಓದಿ: ಟೋಲ್ ಆದಾಯ ಮುಂದಿನ 3 ವರ್ಷಗಳಲ್ಲಿ 1.40 ಲಕ್ಷ ಕೋಟಿ ರೂ.ಗೆ ಏರಿಕೆ

ಜನರ ಧ್ವನಿಯನ್ನು ನಾವು ಜನಪ್ರತಿನಿಧಿಗಳು ಎತ್ತದೆ ಇದ್ದರೆ, ಮತ್ತೇ ಯಾರು ಅವರಿಗೆ ಸಹಾಯ ಮಾಡುತ್ತಾರೆ? ನನಗೆ ಮುಂದಿನ ಚುನಾವಣೆಯಲ್ಲಿ ಪಕ್ಷದಿಂದ ಟಿಕೆಟ್ ಸಿಗದೆ ಇದ್ದರೂ ನನಗೇನೂ ವ್ಯತ್ಯಾಸವಾಗುವುದಿಲ್ಲ. ನನ್ನ ತಾಯಿ ಸ್ವತಂತ್ರವಾಗಿ ಸ್ಪರ್ಧಿಸಿ ಚುನಾವಣೆ ಗೆದ್ದವರು. ನನಗೂ ಕೂಡ ಯಾವುದೇ ಭಯವಿಲ್ಲ. ಸರ್ಕಾರಗಳು ಬರುತ್ತವೆ, ಹೋಗುತ್ತವೆ. ನಾನು ಸತ್ಯವನ್ನು ಮಾತ್ರ ಹೇಳಲು ಇಷ್ಟಪಡುತ್ತೇನೆ ಎಂದು ತಮ್ಮ ಪಕ್ಷದ ವಿರುದ್ಧವಾಗಿಯೇ ಕಿಡಿಕಾರಿದ್ದಾರೆ. ಇದನ್ನೂ ಓದಿ: LPG ಗ್ಯಾಸ್, ಟಾಯ್ಲೆಟ್‌ ಕಟ್ಟೋದು ಮಹಿಳಾ ಸಬಲೀಕರಣ ಅಲ್ಲ: ಪ್ರಿಯಾಂಕಾ ಗಾಂಧಿ

Comments

Leave a Reply

Your email address will not be published. Required fields are marked *