‘ಲವ್ ಲಿ’ ಎನ್ನುತ್ತಾ ಡಬ್ಬಿಂಗ್ ಕೆಲಸದಲ್ಲಿ ತೊಡಗಿದ ವಸಿಷ್ಠ ಸಿಂಹ

ಸಿಷ್ಠ ಸಿಂಹ (Vasishtha Simha) ನಟನೆಯ ಬಹು ನಿರೀಕ್ಷಿತ ಚಿತ್ರ ‘ಲವ್ ಲಿ’ (Love Li). ಆರಂಭದಿಂದಲು ಸಿನಿ ಪ್ರೇಕ್ಷಕರ ಗಮನ ಸೆಳೆಯುತ್ತಿರುವ ಈ ಚಿತ್ರಕ್ಕೆ ಚೇತನ್ ಕೇಶವ್ (Chetan Samiksha) ಆಕ್ಷನ್ ಕಟ್ ಹೇಳಿದ್ದಾರೆ. ಕಮರ್ಶಿಯಲ್ ರೊಮ್ಯಾಂಟಿಕ್ ಲವ್ ಸ್ಟೋರಿ ಸಬ್ಜೆಕ್ಟ್ ಒಳಗೊಂಡ ಈ ಚಿತ್ರ ಅದ್ದೂರಿಯಾಗಿ ನಿರ್ಮಾಣವಾಗುತ್ತಿದ್ದು, ಸದ್ಯ ಚಿತ್ರೀಕರಣ ಕಂಪ್ಲೀಟ್ ಮಾಡಿರುವ ಚಿತ್ರತಂಡ ಡಬ್ಬಿಂಗ್ ನಲ್ಲಿ (Dubbing) ನಿರತವಾಗಿದೆ.

ಲಂಡನ್ ನಲ್ಲಿ ಸೆರೆ ಹಿಡಿಯುವ ಸಾಂಗ್ ವೊಂದನ್ನು ಹೊರತು ಪಡಿಸಿ ಚಿತ್ರದ ಚಿತ್ರೀಕರಣ ಕಂಪ್ಲೀಟ್ ಮಾಡಿರುವ ಲವ್ ಲಿ ಟೀಂ ಕಳೆದ ಏಳು ದಿನದಿಂದ ಡಬ್ಬಿಂಗ್ ನಲ್ಲಿ ತೊಡಗಿದೆ. ವಸಿಷ್ಠ ಸಿಂಹ, ಸ್ಟೆಫಿ ಪಟೇಲ್, ದತ್ತಣ್ಣ, ರಂಗಾಯಣ ರಘು, ಅಚ್ಯುತ್ ಕುಮಾರ್, ವಂಶಿಕಾ, ಸೂರಜ್ ಚಿತ್ರದ ಡಬ್ಬಿಂಗ್ ಪೋಷನ್ ಕಂಪ್ಲೀಟ್ ಮಾಡಿದ್ದಾರೆ. ಐದು ದಿನಗಳ ಡಬ್ಬಿಂಗ್ ಕೆಲಸ ಬಾಕಿ ಇದೆ ಎಂದು ನಿರ್ದೇಶಕ ಚೇತನ್ ಕೇಶವ್ ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ನಟ ಗೋಪಿಚಂದ್‌ಗೆ ಸ್ಯಾಂಡಲ್‌ವುಡ್‌ ನಿರ್ದೇಶಕ ಎ.ಹರ್ಷ ಆ್ಯಕ್ಷನ್ ಕಟ್

‘ಲವ್ ಲಿ’ ಚೇತನ್ ಕೇಶವ್ ಅವರ ಮೊದಲ ಸಿನಿಮಾ ವೆಂಚರ್. ಕಮರ್ಶಿಯಲ್ ರೊಮ್ಯಾಂಟಿಕ್ ಲವ್ ಸ್ಟೋರಿ ಜೊತೆಗೆ ರೌಡಿಸಂ ಕಥಾಹಂದರ ಒಳಗೊಂಡ ಈ ಚಿತ್ರದಲ್ಲಿ ವಸಿಷ್ಠ ಸಿಂಹ ಡಿಫ್ರೆಂಟ್ ಶೇಡ್ ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರದಲ್ಲಿ ನಾಯಕಿಯಾಗಿ ಸ್ಟೆಫಿ ಪಟೇಲ್ ನಟಿಸುತ್ತಿದ್ದಾರೆ. ಈಗಾಗಲೇ ಬಿಡುಗಡೆಯಾಗಿರುವ ಸಿನಿಮಾ ಸ್ಯಾಂಪಲ್ ಗಳು ಭರವಸೆ ಮೂಡಿಸಿದ್ದು, ಅದ್ದೂರಿಯಾಗಿ ಸಿನಿಮಾ ನಿರ್ಮಾಣ ಮಾಡಲಾಗಿದೆ. ಚಿತ್ರೀಕರಣ ಕಂಪ್ಲೀಟ್ ಮಾಡಿರುವ ಚಿತ್ರತಂಡ ಡಬ್ಬಿಂಗ್ ಕೆಲಸ ಮುಗಿಯುತ್ತಿದ್ದಂತೆ ಹಾಡಿನ ಚಿತ್ರೀಕರಣಕ್ಕೆ ಲಂಡನ್ ತೆರೆಳಲಿದೆ.

ಸುಬ್ಬಲಕ್ಷ್ಮಿ ಸಂಸಾರ ಸೀರಿಯಲ್ ಖ್ಯಾತಿಯ ಸಮೀಕ್ಷಾ (Samiksha), ಸಾಧುಕೋಕಿಲ, ದತ್ತಣ್ಣ, ಅಚ್ಯುತ್ ಕುಮಾರ್, ವಂಶಿಕಾ, ಕಾಮಿಡಿ ಕಿಲಾಡಿಗಳು ಖ್ಯಾತಿಯ ಸೂರಜ್ ಒಳಗೊಂಡ ದೊಡ್ಡ ತಾರಾಬಳಗ ‘ಲವ್ ಲಿ’ ಚಿತ್ರದಲ್ಲಿದೆ. ಎಂ.ಆರ್ ರವೀಂದ್ರ ಕುಮಾರ್ ನಿರ್ಮಾಣದಲ್ಲಿ ಮೂಡಿ ಬರ್ತಿರುವ ಈ ಸಿನಿಮಾಗೆ ಅಶ್ವಿನ್ ಕೆನಡಿ ಕ್ಯಾಮೆರಾ ವರ್ಕ್, ಹರೀಶ್ ಕೊಮ್ಮೆ ಸಂಕಲನ, ಅನೂಪ್ ಸೀಳಿನ್ ಸಂಗೀತ ನಿರ್ದೇಶನವಿದೆ.

Comments

Leave a Reply

Your email address will not be published. Required fields are marked *