– ಬಿಜೆಪಿಯವರು ನೈತಿಕವಾಗಿ ದಿವಾಳಿಯಾಗಿದ್ದಾರೆ
ಬೆಂಗಳೂರು: ಕಾಂಗ್ರೆಸ್ ಭಿನ್ನಮತ ಶಮನಕ್ಕೆ ಬೆಂಗಳೂರಿಗೆ ಬಂದಿರುವ ಕಾಂಗ್ರೆಸ್ ಉಸ್ತುವಾರಿ ಕೆ.ಸಿ ವೆಣುಗೋಪಾಲ್ ಕುಮಾರಕೃಪಾ ಅತಿಥಿ ಗೃಹದಲ್ಲಿ ಮಹತ್ವದ ಸಭೆ ನಡೆಸಿದ್ದಾರೆ.
ಪದಾಧಿಕಾರಿಗಳ ಬದಲಾವಣೆ, ಸಂಪುಟ ವಿಸ್ತರಣೆ ಕುರಿತಂತೆ ಚರ್ಚೆ ನಡೆಸಿದ್ದಾರೆ. ಇದಕ್ಕೂ ಮೊದಲು ಮಾತನಾಡಿದ ವೇಣುಗೋಪಾಲ್ ಬಿಜೆಪಿಯವರು ನೈತಿಕವಾಗಿ ದಿವಾಳಿಯಾಗಿದ್ದಾರೆ. ಈ ಎಲ್ಲವನ್ನ ಬಿಜೆಪಿಯವರೇ ಕ್ರಿಯೇಟ್ ಮಾಡ್ತಿದ್ದಾರೆ. ನಮ್ಮ ಶಾಸಕರಿಗೆ ದೂರವಾಣಿ ಕರೆ ಮಾಡಿ ಒಂದಲ್ಲ, ಎರಡಲ್ಲ. ಕೋಟಿ ಕೋಟಿ ಆಫರ್ ನೀಡಿದ್ದಾರೆ. ಇದೆಲ್ಲವೂ ಬಿಜೆಪಿ ನಾಯಕರ ಷಡ್ಯಂತ್ರ ಎಂದು ಹೇಳಿದ್ದಾರೆ.

ಸಮ್ಮಿಶ್ರ ಸರ್ಕಾರಕ್ಕೆ ಯಾವುದೇ ಭಯವಿಲ್ಲ. ಸರ್ಕಾರ ನೂರು ದಿನ ಪೂರೈಸಿ ಮುನ್ನಡೆಯುತ್ತಿದೆ. ಆದ್ರೆ ಬಿಜೆಪಿ ಹಿಂಬಾಗಿಲಿನಿಂದ ಅಧಿಕಾರ ಪಡೆಯಲು ವಿಫಲ ಯತ್ನ ನಡೆಸುತ್ತಿದೆ. ಸಮ್ಮಿಶ್ರ ಸರ್ಕಾರ ಐದು ವರ್ಷ ಪೂರ್ಣಗೊಳಿಸಲಿದೆ. ಕಾಂಗ್ರೆಸ್ ಶಾಸಕರು ಯಾವುದೇ ಕಾರಣಕ್ಕೂ ಬಿಜೆಪಿ ಸೇರ್ಪಡೆ ಆಗಲ್ಲ. ನಮ್ಮ ಎಲ್ಲ ಶಾಸಕರ ಮೇಲೆ ನಮಗೆ ನಂಬಿಕೆ ಇದೆ. ಇದೇ ತಿಂಗಳಾಂತ್ಯಕ್ಕೆ ಸಂಪುಟ ವಿಸ್ತರಣೆ ಮಾಡಲಿದ್ದೇವೆ ಅಂತಾ ತಿಳಿಸಿದರು.
ಸಭೆಯಲ್ಲಿ ಬೆಳಗಾವಿ ಪಿಎಲ್‍ಡಿ ಬ್ಯಾಂಕ್ ಚುನಾವಣೆಗೆ ಸಂಬಂಧಿಸಿದಂತೆ ಅಸಮಾಧಾನಗೊಂಡಿರುವ ಜಾರಕಿಹೊಳಿ ಸಹೋದರರ ಸಮಸ್ಯೆ ಕುರಿತಾಗಿ ಚರ್ಚಿಸಲಾಗಿದೆ ಎಂದು ಹೇಳಲಾಗಿದೆ. ಕುಮಾರಕೃಪ ಅತಿಥಿ ಗೃಹದಲ್ಲಿ ನಡೆದ ಸಭೆಯಲ್ಲಿ ಸಿಎಂ ಕುಮಾರಸ್ವಾಮಿ, ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್, ಡಿಸಿಎಂ ಪರಮೇಶ್ವರ್, ಸಚಿವ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ರಾಜಕೀಯ ನಾಯಕರು ಸಹ ಭಾಗಿಯಾಗಿದ್ದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Leave a Reply