ಭಾನುವಾರ ಬೆಂಗಳೂರಿನಲ್ಲಿ ಪ್ರವೀಣ್ ತೊಗಾಡಿಯಾ ಭಾಷಣ

ಬೆಂಗಳೂರು: ವಿಶ್ವ ಹಿಂದೂ ಪರಿಷತ್ ಅಂತಾರಾಷ್ಟ್ರೀಯ ಕಾರ್ಯಧ್ಯಕ್ಷ ಪ್ರವೀಣ್ ತೊಗಾಡಿಯಾ ಖಾಸಗಿ ಕಾರ್ಯಕ್ರಮದ ಸಲುವಾಗಿ ಮೇ 27ರಂದು ಬೆಂಗಳೂರಿಗೆ ಬರಲಿದ್ದಾರೆ.

ಗುರು ಗೋವಿಂದ್ ಸಿಂಗ್ ಅವರ 350ನೇ ಜನ್ಮ ದಿನಾಚರಣೆಯ ಅಂಗವಾಗಿ ಬೆಂಗಳೂರು ನಗರದ ವಿಎಚ್‍ಪಿ ಸಂಘಟನೆ ಮೇ 28ರಂದು ಹಲಸೂರಿನ ಸ್ವಾಮೀ ಯೋಗೇಶ್ವರಾನಂದ ಶಾಲೆಯಲ್ಲಿ ಕಾರ್ಯಕ್ರಮ ಆಯೋಜಿಸಿದೆ. ಬೆಳಗ್ಗೆ ನಡೆಯುವ ಈ ಕಾರ್ಯಕ್ರಮದಲ್ಲಿ ಪ್ರವೀಣ್ ತೊಗಾಡಿಯಾ ಭಾಷಣ ಮಾಡಲಿದ್ದಾರೆ.

ಈ ಖಾಸಗಿ ಕಾರ್ಯಕ್ರಮದಲ್ಲಿ ತೊಗಾಡಿಯಾ ಅವರ ಭಾಷಣಕ್ಕೆ ಅನುಮತಿ ನೀಡಿದರೂ, ಪ್ರಚೋದನಕಾರಿ ಭಾಷಣ ಮಾಡಿದರೆ ಕಠಿಣ ಕಾನೂನು ಕ್ರಮದ ಎಚ್ಚರಿಕೆಯನ್ನು ಪೊಲೀಸರು ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬೆಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ತೊಗಾಡಿಯಾ ಚಲನವಲನದ ಮೇಲೆ ಗುಪ್ತಚರ ಇಲಾಖೆ ಮತ್ತು ಪೊಲೀಸರು ಹದ್ದಿನ ಕಣ್ಣನ್ನು ಈಗ ಇಟ್ಟಿದ್ದಾರೆ.

ಪ್ರಚೋದನಕಾರಿ ಭಾಷಣದ ಹಿನ್ನೆಲೆಯಲ್ಲಿ ತೊಗಾಡಿಯಾ ಅವರಿಗೆ 2015ರಲ್ಲಿ ಬೆಂಗಳೂರಿನಲ್ಲಿ ನಡೆದ ಹಿಂದೂ ಸಮಾಜೋತ್ಸವದಲ್ಲಿ ಪಾಲ್ಗೊಳ್ಳದಂತೆ ಬೆಂಗಳೂರು ಪೊಲೀಸರು ನಿಷೇಧ ಹೇರಿದ್ದರು.

Comments

Leave a Reply

Your email address will not be published. Required fields are marked *