ಪುರಿ ಜಗನ್ನಾಥ್ ಜೊತೆ ವಿಜಯ್ ದೇವರಕೊಂಡ ಮತ್ತೊಂದು ಸಿನಿಮಾ

ಟಾಲಿವುಡ್ ಖ್ಯಾತ ನಿರ್ದೇಶಕ ಪುರಿ ಜಗನ್ನಾಥ್ ಹಾಗೂ ಸೂಪರ್ ಸ್ಟಾರ್ ವಿಜಯ್ ದೇವರಕೊಂಡ ಕಾಂಬೋದ ಮತ್ತೊಂದು ಮೆಗಾ ಪ್ರಾಜೆಕ್ಟ್ ಅನೌನ್ಸ್ ಆಗಿದೆ. ಲೈಗರ್ ಸಿನಿಮಾ ರಿಲೀಸ್ ಗೆ ಎದುರು ನೋಡುತ್ತಿರುವ ಅಭಿಮಾನಿಗಳಿಗೆ ವಿಜಯ್ ಹಾಗೂ ಪುರಿ ಜಗನ್ನಾಥ್ ಜೋಡಿ JGM ಎಂಬ ಆಕ್ಷನ್ ಡ್ರಾಮಾ ಸಿನಿಮಾ ಉಣಬಡಿಸಲು ತಯಾರಾಗುತ್ತಿದ್ದಾರೆ. ಅದರ ಮೊದಲ ಭಾಗವೆಂಬಂತೆ ಇವತ್ತು ಮುಂಬೈನಲ್ಲಿ ಅದ್ಧೂರಿಯಾಗಿ ಪ್ಯಾನ್ ಇಂಡಿಯಾ ಪ್ರಾಜೆಕ್ಟ್ ಜನಗಣಮನ ಸಿನಿಮಾಗೆ ಮುನ್ನುಡಿ ಬರೆಯಲಾಯಿತು.

JGM ಸಿನಿಮಾಗೆ ಪುರಿ ಜಗನ್ನಾಥ್ ಚಿತ್ರಕಥೆ, ಡೈಲಾಗ್ ಬರೆದು ಆಕ್ಷನ್ ಕಟ್ ಹೇಳಲಿದ್ದು, ಪುರಿ ಕನೆಕ್ಟ್ ಹಾಗೂ ಶ್ರೀಕರ ಸ್ಟುಡಿಯೋ ಪ್ರೊಡಕ್ಷನ್ ನಡಿ ಚಾರ್ಮಿ ಕೌರ್, ವಂಶಿ ಪಡಿಪೆಲ್ಲಿ ಬಂಡವಾಳ ಹೂಡ್ತಿದ್ದು, ತೆಲುಗು, ಕನ್ನಡ, ತಮಿಳು, ಹಿಂದಿ ಹಾಗೂ ಮಲಯಾಳಂ ಭಾಷೆಯಲ್ಲಿ ಸಿನಿಮಾ ಮೂಡಿ ಬರಲಿದೆ. ಇದನ್ನೂ ಓದಿ: ‘Lockup’ ಶೋಗೆ ಬರುವಂತೆ ವಿಲ್ ಸ್ಮಿತ್‍ಗೆ ಆಫರ್ ಕೊಟ್ಟ ಕ್ವಿನ್ ಕಂಗನಾ

ನಮ್ಮ ಮುಂದಿನ ಸಿನಿಮಾ JGM  ಬಗ್ಗೆ  ಮಾಹಿತಿ ಹಂಚಿಕೊಂಡಿರುವುದು ಖುಷಿಯಾಗ್ತಿದೆ. ವಿಜಯ್ ಜೊತೆ ಮತ್ತೆ ಕೈ ಜೋಡಿಸಿದ್ದೇನೆ. ಇದು ಪಕ್ಕಾ ಆಕ್ಷನ್ ಎಂಟರ್ ಟೈನರ್ ಸಿನಿಮಾವಾಗಿದೆ ಎಂದು ನಿರ್ದೇಶಕ ಪುರಿ ಜಗನ್ನಾಥ್ ಮಾಹಿತಿ ಹಂಚಿಕೊಂಡರು. ಇದನ್ನೂ ಓದಿ: ಏಪ್ರಿಲ್ 2ಕ್ಕೆ ಕಿಚ್ಚನ ‘ವಿಕ್ರಾಂತ್ ರೋಣ’ ಟೀಸರ್ ರಿಲೀಸ್

ವಿಜಯ್ ದೇವರಕೊಂಡ, ಪುರಿ ಪ್ರಾಜೆಕ್ಟ್ ಭಾಗವಾಗಿರೋದು ಖುಷಿಯಾಗಿದೆ. ಪ್ರತಿಯೊಬ್ಬ ಭಾರತೀಯರಿಗೂ ಈ ಕಥೆ ಮನ ಮುಟ್ಟುತ್ತದೆ. ಇದು ಸವಾಲಿನ ಕಥೆಯಾಗಿದ್ದು, ಚಾರ್ಮಿ ಹಾಗೂ ಇಡೀ ತಂಡದ ಜೊತೆ ಕೆಲಸ ಮಾಡಲು ಉತ್ಸುಕನಾಗಿದ್ದೇನೆ. ವಂಶಿ ಪಡಿಪೆಲ್ಲಿ, JGM ಅದ್ಭುತ ಕಥೆಯಾಗಿದ್ದು, ಇದು ಭಾರತೀಯರ ಮನತಟ್ಟುತ್ತದೆ. ವಿಜಯ್, ಪುರಿ, ಚಾರ್ಮಿ ಜೊತೆ ಪ್ರಾಜೆಕ್ಟ್ ಕೆಲಸ‌ ಮಾಡುತ್ತಿರುವುದು ಖುಷಿಕೊಟ್ಟಿದೆ ಎಂದರು. ಇದನ್ನೂ ಓದಿ: ಮೂರು ದಿನಕ್ಕೆ 500 ಕೋಟಿ ಬಾಚಿದ ಆರ್.ಆರ್.ಆರ್: ಬಾಕ್ಸ್ ಆಫೀಸ್ ಚಿಂದಿಚಿತ್ರಾನ್ನ

ವಿದೇಶದ ನಾನಾ ಭಾಗಳಲ್ಲಿ ಶೂಟಿಂಗ್ ನಡೆಸಲು ಪ್ಲ್ಯಾನ್ ಹಾಕಿದ್ದು, ಎಪ್ರಿಲ್ ತಿಂಗಳಿನಿಂದ ಶೂಟಿಂಗ್ ಶುರುವಾಗಲಿದೆ. ಆಕ್ಷನ್ ಎಂಟರ್ ಟೈನರ್ ಕಥಾನಕ ಹೊಂದಿರುವ JGM ಸಿನಿಮಾ ಆಗಸ್ಟ್ 3 2023 ವರ್ಲ್ಡ್ ವೈಡ್ ತೆರೆಗಪ್ಪಳಿಸಲಿದೆ.

Comments

Leave a Reply

Your email address will not be published. Required fields are marked *