ದರ್ಶನ್ ಭೇಟಿಗೆ ಬಳ್ಳಾರಿ ಜೈಲಿಗೆ ಬಂದ ಪತ್ನಿ ವಿಜಯಲಕ್ಷ್ಮಿ

ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್‌ರನ್ನು (Darshan) ನೋಡಲು ಬಳ್ಳಾರಿ ಜೈಲಿಗೆ ಪತ್ನಿ ವಿಜಯಲಕ್ಷ್ಮಿ (Vijayalakshmi) ಭೇಟಿ ನೀಡಿದ್ದಾರೆ. ಅತ್ತಿಗೆ ಜೊತೆ ದರ್ಶನ್ ಸಹೋದರ ದಿನಕರ್ (Dinakar) ಕೂಡ ಆಗಮಿಸಿದ್ದಾರೆ.

ಚಾರ್ಜ್‌ಶೀಟ್ ಪ್ರತಿ ಸಮೇತ ಇಬ್ಬರು ವಕೀಲರೊಂದಿಗೆ ವಿಜಯಲಕ್ಷ್ಮಿ ಮತ್ತು‌ ಸಹೋದರ ದಿನಕರ್ ಜೈಲಿಗೆ ಭೇಟಿ ನೀಡಿ, ದರ್ಶನ್ ಜೊತೆ ಕಾನೂನು ಸಮರದ ಬಗ್ಗೆ ಮಾತನಾಡಿದ್ದಾರೆ. ಈ ವೇಳೆ, ಪತಿಗಾಗಿ ಡ್ರೈ ಫ್ರೂಟ್ಸ್‌, ಬಿಸ್ಕೆಟ್ ಹಾಗೂ ದೇವರ ಪ್ರಸಾದೊಂದಿಗೆ ಆಗಮಿಸಿದ್ದಾರೆ. ಇದನ್ನೂ ಓದಿ:ನಿರ್ದೇಶನದತ್ತ ‘ಬಿಗ್ ಬಾಸ್’ ಖ್ಯಾತಿಯ ಚಂದನ್ ಕುಮಾರ್

ಅಂದಹಾಗೆ, ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೂನ್ 11ರಂದು ದರ್ಶನ್‌ರನ್ನು ಬಂಧಿಸಿದ್ದರು.