ಮಗಳ ವಿಚಾರದಲ್ಲಿ ನಮ್ಮ ನಿರ್ಧಾರ, ಮನವಿ ಮೊದಲಿನಂತೆಯೇ ಇರಲಿದೆ: ಅನುಷ್ಕಾ ಶರ್ಮಾ

ಮುಂಬೈ: ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಮೂರನೇ ಏಕದಿನ ಪಂದ್ಯದಲ್ಲಿ ಅರ್ಧಶತಕ ಸಿಡಿಸಿ ಆ ಅರ್ಧಶತಕವನ್ನು ಮಗಳು ವಮಿಕಾಗೆ ಸಮರ್ಪಿಸಿದ್ದಾರೆ. ವಿರಾಟ್ ಕೋಹ್ಲಿ ಅವರ ಮಗಳು ವಮಿಕಾ ಸಾರ್ವಜನಿಕವಾಗಿ ಮೊದಲ ಬಾರಿಗೆ ಕಾಣಿಸಿಕೊಂಡಿರುವ ವೀಡಿಯೋ ವೈರಲ್ ಆಗಿದೆ. ಈ ವಿಚಾರವಾಗಿ ವಿರುಷ್ಕಾ ದಂಪತಿ ಬೇಸರ ವ್ಯಕ್ತಪಡಿಸಿದ್ದಾರೆ.

ವಿರಾಟ್ ಕೊಹ್ಲಿ ಹಲವು ದಿನಗಳಿಂದ ರನ್ ಬರ ಅನುಭವಿಸುತ್ತಿದ್ದರು. ಬಳಿಕ ಇಂದಿನ ಪಂದ್ಯದಲ್ಲಿ ಉತ್ತಮವಾಗಿ ಬ್ಯಾಟ್‍ಬೀಸಿ ಅರ್ಧಶತಕ ಸಿಡಿಸಿ ಮಿಂಚಿದ್ದರು. ಅರ್ಧಶತಕ ಸಿಡಿಸುತ್ತಿದ್ದಂತೆ ಗ್ಯಾಲರಿಯಲ್ಲಿ ಪಂದ್ಯ ವೀಕ್ಷಿಸುತ್ತಿದ್ದ ಅನುಷ್ಕಾ ಶರ್ಮಾ ಚಪ್ಪಾಳೆ ತಟ್ಟಿ ಪ್ರೋತ್ಸಾಹಿಸಿದ್ದರು. ಈ ವೇಳೆ ಪುತ್ರಿ ವಮಿಕಾ ಕಿರುನಗೆ ಬೀರುತ್ತಾ ಕೊಹ್ಲಿಯನ್ನು ನೋಡಿದ್ದಳು. ಕೊಹ್ಲಿ ತನ್ನ ಬ್ಯಾಟ್‍ನ್ನು ಮಗುವನ್ನು ಎತ್ತಿ ಆಡಿಸಿದಂತೆ ಮಾಡಿ ನನ್ನ ಅರ್ಧಶತಕ ನನ್ನ ಮಗಳಿಗೆ ಎಂಬಂತೆ ಸನ್ನೆ ಮಾಡಿ ಸಂಭ್ರಮಿಸಿದ್ದರು. ಈ ವೀಡಿಯೋದಲ್ಲಿ ಮಗಳ ವಮೀಕಾ ಮೊದಲ ಬಾರಿಗೆ ಕಾಣಿಸಿಕೊಂಡಿದ್ದಳು. ಮಗಳ ವಿಚಾರಗಿ ಗೌಪ್ಯತೆ ಕಾಪಾಡಿಕೊಂಡಿದ್ದ ಈ ಜೋಡಿ ಇದೀಗ ವೀಡಿಯೋ ವೈರಲ್ ಆಗಿರುವ ಕುರಿತಾಗಿ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಐಪಿಎಲ್ ಹರಾಜಿಗೆ ಆಟಗಾರರ ಪಟ್ಟಿ ಪ್ರಕಟ – ಶಾರೂಕ್ ಖಾನ್, ಅವೇಶ್ ಖಾನ್ ಬೆಲೆ ಕಂಡು ದಂಗಾದ ಕ್ರಿಕೆಟ್‌ ಪ್ರಿಯರು

ಎಲ್ಲರಿಗೂ ಹಾಯ್ ನಿನ್ನೆ ಸ್ಟೇಡಿಯಂನಲ್ಲಿ ನಮ್ಮ ಮಗಳ ಫೋಟೋವನ್ನು ಸೆರೆಹಿಡಿಯಲಾಯಿತು ಮತ್ತು ಅದನ್ನು ವೈರಲ್ ಮಾಡಲಾಗಿದೆ ಎಂಬುದು ನಮಗೆ ತಿಳಿದುಬಂದಿದೆ. ನಮಗೆ ಗೊತ್ತಿಲ್ಲದಂತೆಯೇ ಅದನ್ನು ಚಿತ್ರಿಸಲಾಗಿದೆ. ನಮ್ಮನ್ನು ಕ್ಯಾಮೆರಾದಲ್ಲಿ ಸೆರೆ ಹಿಡಿಯಲಾಗುತ್ತಿದೆ ಎಂಬುದು ನಮಗೆ ತಿಳಿದಿರಲಿಲ್ಲ. ಮಗಳ ವಿಚಾರದಲ್ಲಿ ನಮ್ಮ ನಿರ್ಧಾರ ಮತ್ತು ಮನವಿ ಮೊದಲಿನಂತೆಯೇ ಇರಲಿದೆ. ವಮಿಕಾಳ ಫೋಟೋ ಕ್ಲಿಕ್ ಮಾಡದಿದ್ದರೆ, ಪ್ರಕಟ ಮಾಡದಿದ್ದರೆ ಅದಕ್ಕಾಗಿ ಧನ್ಯವಾದಗಳು ಎಂದು ಅನುಷ್ಕಾ ಶರ್ಮಾ ಮತ್ತು ವಿರಾಟ್ ಕೊಹ್ಲಿ ಇನ್‍ಸ್ಟಾಗ್ರಾಮ್ ಸ್ಟೋರಿ ಮೂಲಕ ತಿಳಿಸಿದ್ದಾರೆ. ಇದನ್ನೂ ಓದಿ:  ಅರ್ಧಶತಕ ಸಿಡಿಸಿ ಮಗಳಿಗೆ ಸಮರ್ಪಿಸಿದ ಕೊಹ್ಲಿ

ಕೊಹ್ಲಿ ಪುತ್ರಿ ವಮಿಕಾಗೆ ಜನವರಿ 11 ರಂದು 1 ವರ್ಷವಾಗಿದೆ. 2021 ಜನವರಿ 11 ರಂದು ವಮಿಕಾ ಹುಟ್ಟಿದ್ದಳು. ಈ ವರ್ಷ ಕೊಹ್ಲಿ ಆಫ್ರಿಕಾದಲ್ಲಿ ಮಗಳ ಮೊದಲ ವರ್ಷದ ಹುಟ್ಟುಹಬ್ಬವನ್ನು ಆಚರಿಸಿದ್ದರು. ಇಷ್ಟು ದಿನಗಳ ಕಾಲ ಫೋಟೋದಲ್ಲಿ ಮಗಳ ಮುಖ ಕಾಣಿಸಿಕೊಳ್ಳದಂತೆ ಅನುಷ್ಕಾ ಶರ್ಮಾ ಮತ್ತು ಕೊಹ್ಲಿ ಗೌಪ್ಯತೆ ಕಾಪಾಡಿಕೊಂಡಿದ್ದರು. ಇಂದು ವಮಿಕಾ ಮುಖ ಮೊದಲ ಬಾರಿಗೆ ಕ್ಯಾಮೆರಾ ಕಣ್ಣಿನಲ್ಲಿ ಸುಂದರವಾಗಿ ಸೆರೆಯಾಗಿ ವೈರಲ್ ಆಗಿದೆ.

Comments

Leave a Reply

Your email address will not be published. Required fields are marked *